ಶ್ರೀರಾಮನನ್ನು ರಾಜಕೀಯಕ್ಕೆ ಬಳಸಿದ್ದರಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಸೋಲು -ಕಪಿಲ್ ಸಿಬಲ್

[Sassy_Social_Share]

ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಮೇ 2 ರಂದು ಪ್ರಕಟವಾಗಿದ್ದು, ಪಶ್ಚಿಮ ಬಂಗಾಳದಲ್ಲಿ ಮಮತಾ ಮತ್ತೆ ಅಧಿಕಾರದ ಗದ್ದುಗೆಯೇರಲು ಸಿದ್ದರಾಗಿದ್ದಾರೆ. ಬಿಜೆಪಿ  ಪಶ್ಚಿಮ ಬಂಗಾಳವನ್ನು  ತನ್ನ ಕಪಿಮುಷ್ಟಿಗೆ ತೆಗೆದುಕೊಳ್ಳಲು  ಹರಸಾಹಸ ಮಾಡಿದ್ರೂ ಕೂಡ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಭರ್ಜರಿ ಗೆಲುವು ದಾಖಲಿಸಿದೆ. ಕಾಂಗ್ರೆಸ್ ಮುಖಂಡ ಕಪಿಲ್ ಸಿಬಲ್  ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳನ್ನು ತನ್ನ ಟ್ವಿಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ದುರಂಹಕಾರದ ವರ್ತನೆ, ತೋಳ್ಬಲ, ಹಣಬಲ, ಬಿಜೆಪಿಯ ವಿಭಜನೆಯ ಸಿದ್ಧಾಂತ ಹಾಗು ಶ್ರೀರಾಮನನ್ನು ರಾಜಕರಣಕ್ಕೆ ಬಳಸಿದ್ದರಿಂದ ಬಿಜೆಪಿ ಚುನಾವಣೆಯಲ್ಲಿ ಸೋಲು ಅನುಭವಿಸಬೇಕಾಯಿತು ಎಂದಿದ್ದಾರೆ.

ಬ್ಯಾನರ್ಜಿ ನೇತೃತ್ವದ ಟಿಎಂಸಿ ಗೆಲುವಿಗೆ  ಅಭಿನಂದನೆ ತಿಳಿಸಿದ ಅವರು  ಚುನಾವಣಾ ಆಯೋಗದ ಬಳಕೆಯೂ ಬಿಜೆಪಿ ಸೋಲಿಗೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಕಠಿಣ ಸವಾಲುಗಳನ್ನು ಮೆಟ್ಟಿನಿಂತು ಕೊನೆಗೂ ಬಿಜೆಪಿ ಪ್ರಭಾವಿ ನಾಯಕರ ವಿರುದ್ಧ ರಾಜ್ಯದಲ್ಲಿ ವಿಜಯ ಸಾಧಿಸಿದ್ದಾರೆ ಎಂದು ಟ್ವೀಟ್‌ ಮಾಡಿದ್ದಾರೆ.

Related posts

Latest posts

ನೆಹರೂ-ಗಾಂಧಿ ಕುಟುಂಬದಿಂದಲೇ ಭಾರತ ಇಂದು ಉಳಿದುಕೊಂಡಿದೆ: ಕೇಂದ್ರಕ್ಕೆ ಚಾಟಿಯೇಟು ನೀಡಿದ ಶಿವಸೇನೆ

COVID-19 ಅನ್ನು ನಿಭಾಯಿಸಲು ನೆರೆಹೊರೆಯ ಸಣ್ಣ ದೇಶಗಳು ಭಾರತಕ್ಕೆ ಸಹಾಯ ನೀಡುತ್ತಿದ್ದರೆ, ದೆಹಲಿಯಲ್ಲಿ ಬಹುಕೋಟಿ ಸೆಂಟ್ರಲ್ ವಿಸ್ಟಾ ಯೋಜನೆಯ ಕೆಲಸವನ್ನು ನಿಲ್ಲಿಸುವ ಕನಿಷ್ಟ ಸೌಜನ್ಯವನ್ನೂ ಮೋದಿ ಸರ್ಕಾರ ತೋರುತ್ತಿಲ್ಲ ಎಂದು ಕೇಂದ್ರ ಸರ್ಕಾರವನ್ನು...

ರಾಜ್ಯಗಳಿಗೆ ಆಕ್ಸಿಜನ್ ವಿತರಿಸಲು 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ ಸ್ಥಾಪಿಸಿದ ಸುಪ್ರೀಂ ಕೋರ್ಟ್.!

ದೇಶಾದ್ಯಂತ ಕರೋನ ಎರಡನೇ ಅಲೆ ವ್ಯಾಪಕವಾಗಿ ಹರಡಿರುವ ಮಧ್ಯೆ ಬಹುತೇಕ ರಾಜ್ಯಗಳು ಮತ್ತು ಕೇಂದ್ರಾಡಳಿತಗಳಲ್ಲಿ ಆಕ್ಸಿಜನ್ ಕೊರತೆ ಉಂಟಾಗಿದ್ದು ಅದನ್ನು ಸಮರ್ಪಕವಾಗಿ ಎದುರಿಸಲು ಮತ್ತು ವೈಜ್ಞಾನಿಕವಾಗಿ ಮೆಡಿಕಲ್ ಆಕ್ಸಿಜನ್ಗಳನ್ನು ಹಂಚುವ ವಿಧಾನವನ್ನು ರೂಪಿಸಲು...

ಲಾಕ್ ಡೌನ್ ಘೋಷಿಸಿ ಬಡವರ್ಗದವರಿಗೆ ಯಾವುದೇ ಯೋಜನೆ ಘೋಷಿಸದ ರಾಜ್ಯ ಸರ್ಕಾರ

ಕೊರೋನ ಸಾಂಕ್ರಮಿಕವು ದಿನೇ ದಿನೇ ಉಲ್ಪಣಗೊಳ್ಳುತ್ತಿರುವ ಈ ಸಂದರ್ಭದಲ್ಲಿ ಇದಕ್ಕೆ ಕಡಿವಾಣ ಹಾಕಲು ಸರ್ಕಾರಗಳು ಲಾಕ್ ಡೌನ್ ಘೋಷಿಸಿವೆ. ಇದು ಅನಿವಾರ್ಯ ಕ್ರಮವೂ ಕೂಡ ಆಗಿದೆ. ಆದರೆ ಈ ಲಾಕ್ ಡೌನ್ ಘೋಷಣೆಯಿಂದ...