• Home
  • About Us
  • ಕರ್ನಾಟಕ
Wednesday, January 7, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಕೃತಕ ಬುದ್ಧಿಮತ್ತೆ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮೇಲೆ ನಿಗಾ: ಡಿಸಿಎಂ ಡಿ.ಕೆ.ಶಿವಕುಮಾರ್

Any Mind by Any Mind
January 13, 2024
in ಕರ್ನಾಟಕ, ರಾಜಕೀಯ
0
ಕೃತಕ ಬುದ್ಧಿಮತ್ತೆ ಮೂಲಕ ಸಂಚಾರಿ ನಿಯಮ ಉಲ್ಲಂಘನೆ ಮೇಲೆ ನಿಗಾ: ಡಿಸಿಎಂ ಡಿ.ಕೆ.ಶಿವಕುಮಾರ್
Share on WhatsAppShare on FacebookShare on Telegram

ಬೆಂಗಳೂರು: “ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಸಂಚಾರಿ ನಿಯಮ(Traffic Rules) ಉಲ್ಲಂಘನೆ ಮೇಲೆ ನಿಗಾ ಇಡಲಾಗುವುದು” ಎಂದು ಡಿಸಿಎಂ(DCM) ಡಿ.ಕೆ.ಶಿವಕುಮಾರ್(DK Shivakumar) ಅವರು ತಿಳಿದರು.

ADVERTISEMENT

ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸ -24 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೇಳಿದ್ದಿಷ್ಟು, ಕಳೆದ 3 ವರ್ಷಗಳಲ್ಲಿ 6 ಸಾವಿರಕ್ಕೂ ಹೆಚ್ಚು ಡ್ರೈವಿಂಗ್ ಲೈಸೆನ್ಸ್‌ಗಳನ್ನು ಅಮಾನತು ಮಾಡಲಾಗಿದೆ. ಎನ್‌ಸಿ‌ಆರ್‌ಬಿ ಅಂಕಿಅಂಶಗಳ ಪ್ರಕಾರ ಬೈಕ್ ಅಪಘಾತಗಳಿಂದ ಅತ್ಯಂತ ಹೆಚ್ಚು ಮರಣಗಳಾಗಿವೆ. ಆದ ಕಾರಣ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ಜೀವನದಲ್ಲಿ ಧೈರ್ಯ ಇರಬೇಕು ಆದರೆ ಭಂಡತನ ಇರಬಾರದು. ಜೀವ ಅಮೂಲ್ಯವಾದುದು, ಒಮ್ಮೆ ಹೋದ ಜೀವ ಮತ್ತೆ ಬರುವುದಿಲ್ಲ. ಸಂಚಾರಿ ನಿಯಮ ಪಾಲನೆಯ ಬಗ್ಗೆ ಯುವ ಪೀಳಿಗೆಗೆ ಮಾರ್ಗದರ್ಶನ ನೀಡಬೇಕಾಗಿದೆ. ಕಾನೂನು ಪಾಲನೆ, ಶಿಸ್ತು, ಸಂಯಮ ಸೇರಿದಂತೆ ರಸ್ತೆ ನಿಯಮಗಳನ್ನು ಉಲ್ಲಂಘನೆ ಮಾಡಬಾರದು ಎಂದು ಮಕ್ಕಳಲ್ಲಿ ಅರಿವು ಮೂಡಿಸಲು ‘ಮೊಳಕೆಯಲ್ಲೇ ತಿದ್ದಿರಿ’ ಎನ್ನುವ ಕೈಪಿಡಿಯನ್ನು ಬಿಡುಗಡೆ ಮಾಡಿಲಾಗಿದೆ. ಈ ಹಿಂದೆ ನಮ್ಮ ಕಾಂಗ್ರೆಸ್ ಸರ್ಕಾರ ಅಪಘಾತದಲ್ಲಿ ಗಾಯಗೊಂಡವರಿಗೆ ತಕ್ಷಣ ಚಿಕಿತ್ಸೆ ನೀಡಲು ಹರೀಶ್ ಸಾಂತ್ವನ ಯೋಜನೆ ಜಾರಿಗೆ ತಂದಿತ್ತು. ಆದರೆ ಅಪಘಾತವಾಗಿ ಹೋದ ಜೀವ ಮತ್ತೆ ಮರಳಿ ತರಲು ಸಾಧ್ಯವೇ? ಫುತ್‌ಪಾತ್ ಮೇಲೆ ಗಾಡಿ ಚಲಾಯಿಸುವುದು, ಸಿಗ್ನಲ್ ಜಂಪ್ ಮಾಡಿ ವಾಹನ ಚಲಾಯಿಸುವುದರಿಂದ ಏನೂ ಪ್ರಯೋಜನವಿಲ್ಲ.

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ: 1.30 ಲಕ್ಷ ಕುಟುಂಬಗಳು ಬೆಂಗಳೂರಿನಲ್ಲಿ ವಾಸವಿದ್ದು, 55 ಲಕ್ಷಕ್ಕೂ ಅತಿ ಹೆಚ್ಚು ವಾಹನಗಳು ಸಂಚರಿಸುತ್ತವೆ. ಯುವ ಪೀಳಿಗೆ ಜವಾಬ್ದಾರಿ ಅರಿತು ಸಂಚಾರಿ ನಿಯಮಗಳನ್ನು ಪಾಲಿಸಬೇಕು. ಸಾರಿಗೆ ಇಲಾಖೆ, ಬಿಬಿಎಂಪಿ, ಪೊಲೀಸ್ ಇಲಾಖೆಗಳು ಸೇರಿ ಸಂಚಾರ ದಟ್ಟಣೆ ನಿವಾರಣೆಗೆ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಸಂಚಾರ ದಟ್ಟಣೆ ನಿವಾರಣೆಗೆ ಇತರೇ ದೇಶಗಳಲ್ಲಿ ಇರುವ ಯೋಜನೆಗಳನ್ನು ಅಧ್ಯಯನ ಮಾಡಿ ಇಲ್ಲಿ ಅಳವಡಿಸುವ ಕೆಲಸ ಮಾಡಲಾಗುತ್ತಿದೆ.

ಕೋರ್ಟ್ ಆದೇಶದಂತೆ ಫುಟ್ ಪಾತ್ ವ್ಯಾಪಾರಿಗಳ ತೆರವು: ಕಾರ್ಯಕ್ರಮದ ನಂತರ ಮಾಧ್ಯಮಗಳು ಜಯನಗರದಲ್ಲಿ ಬೀದಿ ವ್ಯಾಪಾರಿಗಳ ತೆರವು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ಪಾದಚಾರಿಗಳ ಅನುಕೂಲ, ಸುಗಮ ಸಂಚಾರಕ್ಕಾಗಿ ಹೈಕೋರ್ಟ್ ಆದೇಶದಂತೆ ಫುಟ್ ಪಾತ್ ವ್ಯಾಪಾರಿಗಳ ತೆರವು ಮಾಡಲಾಗಿದೆ. ಪಾದಚಾರಿ ಮಾರ್ಗ ಇರುವುದು ಜನ ಓಡಾಡಲು. ಇಂತಹ ವ್ಯಾಪಾರಿಗಳು ನೋಂದಣಿ ಮಾಡಿಕೊಂಡು ರಸ್ತೆಯ ಒಂದು ಕಡೆ ತಳ್ಳುವ ಗಾಡಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಲಾಗುವುದು. ಅವರಿಗೆ ಆರ್ಥಿಕ ನೆರವು ನೀಡಲು ನಾವು ಸಿದ್ಧ. ಆದರೆ ಪಾದಚಾರಿ ಮಾರ್ಗದಲ್ಲಿ ಟೆಂಟ್ ಹಾಕಿಕೊಂಡು ವ್ಯಾಪಾರ ಮಾಡಿದರೆ ಪಾದಚಾರಿಗಳು ಎಲ್ಲಿ ಓಡಾಡಬೇಕು” ಎಂದು ತಿಳಿಸಿದರು. ಪ್ರಿಯಾಂಕಾ ಗಾಂಧಿ ಅವರು ಕರ್ನಾಟಕ ಅಥವಾ ತೆಲಂಗಾಣದಲ್ಲಿ ಸ್ಪರ್ಧೆ ಮಾಡುವ ಚರ್ಚೆ ಬಗ್ಗೆ ಕೇಳಿದಾಗ, “ಈ ಬಗ್ಗೆ ನಿಮಗೆ ಮಾಹಿತಿ ಇರಬಹುದು ನನ್ನ ಜತೆ ಯಾರು ಮಾತನಾಡಿಲ್ಲ” ಎಂದು ತಿಳಿಸಿದರು.

ರಾಜ್ಯದಲ್ಲಿ ಭದ್ರತೆ ಇಲ್ಲ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, “ಅವರ ಕಾಲದಲ್ಲಿ ಆದದ್ದನ್ನು ಅವರು ಹೇಳುತ್ತಿದ್ದಾರೆ. ನಾವು ಯಾವುದೇ ಹಂತದಲ್ಲೂ ನೈತಿಕ ಪೊಲೀಸ್ ಗಿರಿಗೆ ಪ್ರೋತ್ಸಾಹ ನೀಡುವುದಿಲ್ಲ” ಎಂದು ಸ್ಪಷ್ಟಪಡಿಸಿದರು. ಅನುಭವ ಮಂಟಪಕ್ಕೆ ಅನುದಾನ ನೀಡುತ್ತಿಲ್ಲ ಎಂಬ ಬಸವ ಕಲ್ಯಾಣ ಶಾಸಕರ ಆರೋಪದ ಬಗ್ಗೆ ಕೇಳಿದಾಗ, ಅವರು ಹೊಸದಾಗಿ ಶಾಸಕರಾಗಿದ್ದಾರೆ. ಮುಖ್ಯಮಂತ್ರಿಗಳು ನಿನ್ನೆ ಶಿವಮೊಗ್ಗದಲ್ಲಿ ಅಲ್ಲಮ ಪ್ರಭುಗಳ ಹೆಸರನ್ನು ಘೋಷಣೆ ಮಾಡಿದ್ದಾರೆ. ನಮ್ಮ ಆಸಕ್ತಿಗೆ ಇದೆ ಸಾಕ್ಷಿ. ಇದನ್ನು ಆರಂಭಿಸಿದ್ದು ಕಾಂಗ್ರೆಸ್ ಸರ್ಕಾರ. ಅವರ ಕಾಲದಲ್ಲಿ ಯಾಕೆ ಅನುದಾನ ಬಿಡುಗಡೆ ಮಾಡಲಿಲ್ಲ” ಎಂದು ತಿರುಗೇಟು ನೀಡಿದರು.

Previous Post

ಸಾಮೂಹಿಕ ಅತ್ಯಾಚಾರ ಪ್ರಕರಣಗಳ ತನಿಖೆಗೆ ಎಸ್‍ಐಟಿ ರಚಿಸಲು ಬಸವರಾಜ ಬೊಮ್ಮಾಯಿ ಆಗ್ರಹ

Next Post

ಹೈಕಮಾಂಡ್ ನಾಯಕರ ಭೇಟಿ ಸಂತಸ ತಂದಿದೆ – ವಿ. ಸೋಮಣ್ಣ

Related Posts

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
0

ಅಸೂಯೆಯಿಂದ ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಡಿಸಿಎಂ ಡಿ.ಕೆ. ಶಿವಕುಮಾರ್. ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ. ಕೇಂದ್ರ ಸರ್ಕಾರದಿಂದ ಝಡ್ ಕೆಟಗರಿ ಭದ್ರತೆ ಪಡೆಯಲಿ, ನಮ್ಮ ಅಭ್ಯಂತರವಿಲ್ಲ. ಯಾವ...

Read moreDetails

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

ಉದ್ಯಮಿ ಮನೆ ದೋಚಿದ್ದ ಮನೆಗೆಲಸ ದಂಪತಿ ಬಂಧನ

January 6, 2026
ಸಚಿವ ಜಮೀರ್ ವಿರುದ್ಧ ದೂರು

ಸಚಿವ ಜಮೀರ್ ವಿರುದ್ಧ ದೂರು

January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

January 6, 2026
Next Post
ಹೈಕಮಾಂಡ್ ನಾಯಕರ ಭೇಟಿ ಸಂತಸ ತಂದಿದೆ – ವಿ. ಸೋಮಣ್ಣ

ಹೈಕಮಾಂಡ್ ನಾಯಕರ ಭೇಟಿ ಸಂತಸ ತಂದಿದೆ - ವಿ. ಸೋಮಣ್ಣ

Please login to join discussion

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
January 6, 2026
Top Story

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

by ಪ್ರತಿಧ್ವನಿ
January 6, 2026
ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ  ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ
Top Story

ಸಾಮಾಜಿಕ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳುವುದೇ ನಿಜವಾದ ಶಿಕ್ಷಣ:ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
January 6, 2026
ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..
Top Story

ಬಿಡಿಎ ಸಿಬ್ಬಂದಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಿ‌ ಎಂದು ಸಲಹೆ ನೀಡಿದ ಡಿಕೆ ಶಿವಕುಮಾರ್..

by ಪ್ರತಿಧ್ವನಿ
January 6, 2026
Top Story

ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು: ಸಚಿವ ಎನ್.ಎಸ್. ಭೋಸರಾಜು

by ಪ್ರತಿಧ್ವನಿ
January 6, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ತಪ್ಪು ಯಾರೇ ಮಾಡಿದ್ದರೂ ಕಾನೂನು ಕ್ರಮ ಕೈಗೊಳ್ಳಲಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

January 6, 2026

6 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಕಲ್ಪಿಸಲು ನಿರ್ದೇಶನ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್.

January 6, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!