ಪ್ರಧಾನಿ ಅವರು ಪಶ್ಚಿಮ ಬಂಗಾಳದ ನೆಲದಲ್ಲಿ ನಿಂತು ಮಮತಾ ಬ್ಯಾನರ್ಜಿ ವಿರುದ್ಧ ಗುಡುಗಿದ್ದಾರೆ. ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ವಿರುದ್ಧ ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳ (West Bengal) ದೀದಿ ವಿರುದ್ಧ (Mamata Banerjee) ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi) ಗುಡುಗಿದ್ದಾರೆ.

ಬಂಗಾಳದ ಝಾರ್‌ಗ್ರಾಮ್‌ನಲ್ಲಿ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಎಂಸಿ ಆಡಳಿತವು ‘ವೋಟ್ ಬ್ಯಾಂಕ್ ರಾಜಕೀಯವನ್ನು ಓಲೈಸಲು ಸನ್ಯಾಸಿಗಳ ಮೇಲೆ ದಾಳಿ ನಡೆಸಲು ಬಿಡುತ್ತಿದೆ. ಹೀಗಾಗಿಯೇ ಟಿಎಂಸಿ ಗೂಂಡಾಗಳು ರಾಮಕೃಷ್ಣ ಮಿಷನ್‌ನ ಆಶ್ರಮದ ಮೇಲೆ ದಾಳಿ ಮಾಡುವ ಧೈರ್ಯ ತೋರಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬಂಗಾಳದಲ್ಲಿ ಹಿಂದೂಗಳ ಧಾರ್ಮಿಕ ನಂಬಿಕೆಗೆ ಧಕ್ಕೆ ತರುವ ಹೊಣೆಗಾರಿಕೆಯನ್ನು ಟಿಎಂಸಿ ವಹಿಸಿಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಸನ್ಯಾಸಿಗಳಿಗೆ ಸಿಎಂ ಬೆದರಿಕೆ ಹಾಕುತ್ತಿದ್ದಾರೆ. ಭಾನುವಾರ ರಾತ್ರಿ ರಾಮಕೃಷ್ಣ ಮಿಷನ್ ಆಶ್ರಮ ಜಲ್ಪೈಗುರಿಯಲ್ಲಿ ದಾಳಿ ನಡೆದಿದ್ದು, ಬಂಗಾಳದ ಜನರು ಇದನ್ನು ಸಹಿಸುವುದಿಲ್ಲ ಎಂದು ಗುಡುಗಿದ್ದಾರೆ. ಇಸ್ಕಾನ್, ರಾಮಕೃಷ್ಣ ಮಿಷನ್ ಮತ್ತು ಭಾರತ ಸೇವಾಶ್ರಮ ಸಂಘ ಸೇವೆ ಮತ್ತು ನೈತಿಕತೆಗೆ ಹೆಸರಾಗಿವೆ. ಆದರೆ ಇಂದು ಬಂಗಾಳದ ಮುಖ್ಯಮಂತ್ರಿ ಬಹಿರಂಗವಾಗಿ ಬೆದರಿಕೆ ಹಾಕುತ್ತಿದ್ದಾರೆ. ವೋಟ್ ಬ್ಯಾಂಕ್ ಓಲೈಕೆಗಾಗಿ ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ರಾಮಕೃಷ್ಣ ಮಿಷನ್ ಮತ್ತು ಭಾರತ್ ಸೇವಾಶ್ರಮ ಸಂಘದ ಕೆಲವು ಸನ್ಯಾಸಿಗಳು ಬಿಜೆಪಿಯ ಸೂಚನೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದರು.