ಬೆಂಗಳೂರಲ್ಲಿ ಮುಂಜಾನೆಯಿಂದಲೇ ಮಳೆ ಆರಂಭ ಆಗಿದೆ. ಕೆಲಸ – ಕಾರ್ಯಗಳಿಗೆ ಹೋಗುವ ಜನ ಹಾಗು ಶಾಲಾ ಕಾಲೇಜಿಗೆ ಹೋಗುವ ಮಕ್ಕಳು ಕೊಡೆ ಹಿಡಿದು ಹೋಗುವ ಪರಿಸ್ಥಿತಿ ಎದುರಾಗಿದೆ.
ಆಗ್ನೇಯ ಬಂಗಾಳ ಮಹಾಸಾಗರದಲ್ಲಿ ವಾಯುಭಾರ ಕುಸಿತ ಆಗಿರುವ ಕಾರಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಮೂರು ದಿನ ಭಾರೀ ಮಳೆಯ ಮುನ್ಸೂಚನೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಹೀಗಾಗಿ ಇಷ್ಟೂ ಜಿಲ್ಲೆಗಳಿಗೆ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅಕ್ಟೋಬರ್ 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.