ತಡವಾಗಿಯಾದರೂ ಕೊನೆಗೂ ಕೇರಳಕ್ಕೆ ಮಾನ್ಸೂನ್ ಎಂಟ್ರಿ ಕೊಟ್ಟಿದೆ. ಹೀಗಾಗಿ ಮುಂದಿನ 48 ಗಂಟೆಗಳಲ್ಲಿ ಮಧ್ಯ ಅರೇಬಿಯನ್ ಸಮುದ್ರ, ಕರ್ನಾಟಕ, ತಮಿಳುನಾಡು , ಬಂಗಾಳ ಕೊಲ್ಲಿ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶವು ಅಭಿವೃದ್ಧಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ಈಶಾನ್ಯ ಭಾರತದ ಮೇಲೆ ಮಳೆ ಬೀಳುವ ನಿರೀಕ್ಷೆಯಿದೆ, ಇದು ಮಾನ್ಸೂನ್ ಮಾರುತಗಳನ್ನು ಈಶಾನ್ಯ ಭಾರತದೆಡೆಗೆ ಕರೆದೊಯ್ಯುತ್ತದೆ. ಗರಿಷ್ಠ ಉಷ್ಣಾಂಶವು ರಾಜ್ಯಾದ್ಯಂತ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 4-5 ಡಿಗ್ರಿ ಸೆಲ್ಸಿಯಸ್ ಹಾಗೂ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆ ಇದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.






