• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

ಪ್ರತಿಧ್ವನಿ by ಪ್ರತಿಧ್ವನಿ
May 23, 2026
in Top Story
0
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Share on WhatsAppShare on FacebookShare on Telegram

ರಾಜ್ಯಾದ್ಯಂತ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಹಾಗೂ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ, ಉತ್ತರ ಒಳನಾಡಿನಲ್ಲಿ ಆಲಿಕಲ್ಲು ಮಳೆ ಹಾಗೂ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯ ಎಚ್ಚರಿಕೆ ನೀಡಲಾಗಿದೆ.

ADVERTISEMENT

ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಹಲವು ಭಾಗಗಳಿಗೆ ನೈರುತ್ಯ ಮುಂಗಾರು ವಿಸ್ತರಿಸಿದ್ದು, ರಾಜ್ಯದ ಹಲವೆಡೆ ಮಳೆಯ ಆರ್ಭಟ ಹೆಚ್ಚಾಗಲಿದೆ. ಬಂಗಾಳ ಕೊಲ್ಲಿಯ ಆಗ್ನೇಯ ಹಾಗೂ ಮಧ್ಯ ಭಾಗದಲ್ಲಿ ವಾಯುಭಾರ ಕುಸಿತದ ಲಕ್ಷಣಗಳು ಕಂಡುಬಂದಿರುವುದರಿಂದ ಮಳೆಯ ತೀವ್ರತೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯಿದೆ.

DCM DK Shivakumar : ದಾರಿ ಇದ್ದ ಕಡೆ ನಡೆಯಬೇಕು, ದಾರಿ ಇಲ್ಲಂದ್ರೆ ದಾರಿ ಮಾಡ್ಕೊಂಡು ನಡೆಯಬೇಕು..! #pratidhvani

ಮೇ 23ರಂದು ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.ಉತ್ತರ ಕರ್ನಾಟಕದ ಬಾಗಲಕೋಟೆ, ಗದಗ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯ ಎಚ್ಚರಿಕೆ ನೀಡಲಾಗಿದೆ. ಮೇ 25ರಂದು ಕೂಡ ಬೆಳಗಾವಿ, ವಿಜಯಪುರ ಹಾಗೂ ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ.

ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 23ರಿಂದ 27ರವರೆಗೆ ಗುಡುಗು-ಮಿಂಚಿನೊಂದಿಗೆ ಸಾಧಾರಣ ಮಳೆಯಾಗಲಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

CM Siddaramaiah : ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯ ಆಕ್ರೋಶ..! #siddaramaiah #dkshivakumar

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.

ಮೇ 24 ಮತ್ತು 25ರಂದು ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಹಾಗೂ ತುಮಕೂರು ಭಾಗಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಮೇ 26 ಮತ್ತು 27ರಂದು ಮೈಸೂರು, ಮಂಡ್ಯ, ರಾಮನಗರ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಮೇ 28 ಮತ್ತು 29ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

CM Siddaramaiah : ಭಾಷಣ ವೇಳೆ ಸಚಿವ ಸ್ಥಾನ ನೀಡಿ ಅಂತ ಗಲಾಟೆ.. ರೊಚ್ಚಿಗೆದ್ದ ಸಿಎಂ ಸಿದ್ದರಾಮಯ್ಯ..! #pratidhvani

ರಾಜ್ಯದ ಹಲವೆಡೆ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಇಳಿಕೆಯಾಗಿದ್ದು, ಮುಂದಿನ ಐದು ದಿನಗಳ ಕಾಲ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಕಾಣಿಸಿಕೊಳ್ಳುವುದಿಲ್ಲ ಎಂದು ಇಲಾಖೆ ಮಾಹಿತಿ ನೀಡಿದೆ.ಗುಡುಗು-ಮಿಂಚಿನ ಸಂದರ್ಭಗಳಲ್ಲಿ ಸಾರ್ವಜನಿಕರು ಮರಗಳ ಕೆಳಗೆ ನಿಲ್ಲಬಾರದು, ವಿದ್ಯುತ್ ಕಂಬಗಳಿಂದ ದೂರವಿರಬೇಕು ಹಾಗೂ ಆಲಿಕಲ್ಲು ಮಳೆಯ ಮುನ್ಸೂಚನೆ ಇರುವ ಪ್ರದೇಶಗಳಲ್ಲಿ ವಾಹನಗಳನ್ನು ಸುರಕ್ಷಿತ ಸ್ಥಳಗಳಲ್ಲಿ ನಿಲ್ಲಿಸುವಂತೆ ಸೂಚಿಸಲಾಗಿದೆ.

Tags: #CyclonicRain#HailstormWarning#KarnatakaWeather#NorthKarnataka#RainAlert#SouthwestMonsoon#StateWeatherAlert#WeatherUpdateheavyrainfallIMDkarnatakanewskarnatakarainMonsoonThunderstormWeatherAlert
Previous Post

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

Next Post

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

ಸಾಮಾಜಿಕ ಜಾಲತಾಣದಲ್ಲಿ ಕಾಕ್ರೋಚ್‌ ಓಟಕ್ಕೆ ಬ್ರೇಕ್..?‌ : ಯುವಕರ ಹೋರಾಟ ತುಳಿಯುವ ಷಡ್ಯಂತ್ರವಾ..?

May 23, 2026
Next Post
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!