ಬೆಂಗಳೂರು ಕರಾವಳಿ, ಮಲೆನಾಡು ಭಾಗದಲ್ಲಿ ಮುಂಗಾರು ಮಳೆಯಬ್ಬರ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾನುವಾರರಾತ್ರಿಯಿಂದೀಚೆಗೆ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಉತ್ತರ ಕನ್ನಡದಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, 40ಕ್ಕೂ ಹೆಚ್ಚು ಮಂದಿಯನ್ನು ಕಾಳಜಿ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ. ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ 70ರಿಂದ 80ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.ತುಂಗಾ, ಭದ್ರಾ, ಕುಮಾರಧಾರ, ಬಡಗಣಿ, ಬಾಗೇರಿ, ಗುಂಡಬಾಳ, ಅಘನಾಶಿನಿ, ಚಂಡಿಕಾ ಸೇರಿ ಹಲವು ನದಿಗಳು ಅಪಾಯಮಟ್ಟದಲ್ಲಿ ಹರಿಯುತ್ತಿದ್ದು, ತೀರ ಪ್ರದೇಶದಲ್ಲಿ ಮತ್ತೊಂದು ಪ್ರವಾಹದ ಆತಂಕ ಶುರುವಾಗಿದೆ.
ಕರ್ನಾಟಕ ಕ್ರೀಡಾಕೂಟ-2025’ರ ಲಾಂಛನ ಬಿಡುಗಡೆಗೊಳಿಸಿದ CM ಸಿದ್ದರಾಮಯ್ಯ.!
ಬೆಂಗಳೂರು:ಕರ್ನಾಟಕ ಕ್ರೀಡಾಕೂಟ-2025 ಅನ್ನು ಮಂಗಳೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆಯೋಜಿಸುತ್ತಿದ್ದು ವ್ಯವಸ್ಥಿತ ಏರ್ಪಾಡುಗಳನ್ನು ಮಾಡಲು ಮಂಗಳೂರು ಹಾಗೂ ಉಡುಪಿ ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.ಕರ್ನಾಟಕ ಕ್ರೀಡಾಕೂಟ -2025 ...
Read moreDetails