ಬೆಂಗಳೂರು: ರಾಜ್ಯಕ್ಕೆ ಜೂನ್ 2 ರಿಂದ ಮುಂಗಾರು ಪ್ರವೇಶವಾಗಲಿದ್ದು, ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಜೂ.2 ರಿಂದ 7 ರ ವರೆಗೆ ಕರಾವಳಿಯ ಎಲ್ಲ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ.3 ಹಾಗೂ 4ರಂದು ಬೆಂಗಳೂರು ಗ್ರಾಮಾಂತರ, ಬೆಂಗಧಿಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಧಿಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಿಸಿದೆ.
ಜೂನ್ 1 ರಿಂದ 3 ರವರೆಗೆ ಉತ್ತರ ಒಳನಾಡಿನಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆ ಇದೆ. ಜೂನ್ 4 ರಿಂದ 7 ರ ವರೆಗೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ತುಂಬೆಲ್ಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.