ಹುಬ್ಬಳ್ಳಿ : ಲಕ್ಷ್ಮಣ ಸವದಿಗೆ ಸಿದ್ದು ಸರ್ಕಾರದಲ್ಲಿ ಮಂತ್ರಿಗಿರಿ ಮಿಸ್ ಆಗಿರುವ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ ಕೊಂಚ ಬೇಸರಗೊಂಡಿದೆ. ಲಿಂಗಾಯತ ಸಮುದಾಯದ ಪ್ರಬಲ ನಾಯಕ ಲಕ್ಷ್ಮಣ ಸವದಿಗೆ ಮಂತ್ರಿಗಿರಿ ನೀಡಬೇಕಿತ್ತು ಎಂದು ಮೂರು ಸಾವಿರ ಮಠದ ಗುರು ಸಿದ್ಧರಾಜಯೋಗೀಂದ್ರ ಸ್ವಾಮೀಜಿ ಆಗ್ರಹಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ ಸವದಿ ಒಳ್ಳೆಯ ನಾಯಕರು. ಸಜ್ಜನ ಸವದಿಗೆ ಒಳ್ಳೆಯ ಸ್ಥಾನ ನೀಡಬಹುದಿತ್ತು ಎಂದಿದ್ದಾರೆ.
ಕಾಂಗ್ರೆಸ್ ಖಂಡಿತವಾಗಿಯೂ ಮುಂದಿನ ದಿನಗಳಲ್ಲಿ ಗ್ಯಾರಂಟಿಗಳನ್ನು ಜಾರಿಗೆ ತೆರಲಿದೆ. ಕಾಂಗ್ರೆಸ್ ಸರ್ಕಾರ ಲಿಂಗಾಯಿತರನ್ನು ಕಡೆಗಣಿಸಿದಂತೆ ಕಾಣುತ್ತಿಲ್ಲ. ಆದರೂ ಮುಂದಿನ ದಿನಗಳಲ್ಲಿ ಸವದಿಗೆ ಸಚಿವ ಸ್ಥಾನ ನೀಡಿದರೆ ಒಳ್ಳೆಯದು ಎಂದಿದ್ದಾರೆ.