ಕಳೆದ ವರ್ಷ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ನೈತಿಕ ಪೊಲೀಸ್ಗಿರಿ ಈಗ ಮತ್ತೆ ಮುನ್ನೆಲೆಗೆ ಬಂದಿದ್ದು ಈ ಭಾರೀ ದಕ್ಷಿಣ ಕನ್ನಡದ ಸುಳ್ಯದಲ್ಲಿ ಘಟನೆ ನಡೆದಿದೆ.
ಹಿಂದೂ ಸಮುದಾಯದ ಯುವತಿಯೊಂದಿಗೆ ಸ್ನೇಹ ಬೆಳೆಸಿದಕ್ಕಾಗಿ ಮುಸ್ಲಿಂ ಸಮುದಾಯದ ಯುವಕನನ್ನು ಸಹಪಾಠಿಗಳು ಹಿಗ್ಗಾಮುಗ್ಗಾ ಥಳಿಸಿ ಧಮ್ಕಿ ಹಾಕಿದ್ದಾರೆ ಎಂದು ವರದಿಯಾಗಿದೆ.
ಮೊಹಮ್ಮದ್ ಸನೀಫ್ ಹಲ್ಲೆಗೊಳಗಾದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಸದ್ಯ ಹಲ್ಲೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ಸಹಪಾಠಿಗಳಾದ ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್ ಮತ್ತು ಗೌತಮ್ ಎಂದು ಗುರುತಿಸಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೋನಾವಾನೆ ಇಂತಹ ಕೆಲಸಗಳಿಗೆ ನಾವು ಆಸ್ಪದ ಕೊಡುವುದಿಲ್ಲ ಘಟನೆ ಸಂಬಂಧ ಪ್ರಕರಣವನ್ನ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.