• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ

ರಾಯಚೂರಿನ ಕೃಷಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕ್ರೆಡಲ್ ವತಿಯಿಂದ 'ಗ್ರೀನಿಂಗ್ ಯಂಗ್ ಮೈಂಡ್ಸ್' ಇಂಟರ್ನ್‌ಶಿಪ್..

ಪ್ರತಿಧ್ವನಿ by ಪ್ರತಿಧ್ವನಿ
May 14, 2026
in Top Story, ಇದೀಗ, ಕರ್ನಾಟಕ, ದೇಶ, ವಾಣಿಜ್ಯ
0
ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೆಚ್ಚು ಉದ್ಯೋಗಾವಕಾಶ: ಕ್ರೆಡಲ್ ಎಂ.ಡಿ. ಕೆ.ಪಿ. ರುದ್ರಪ್ಪಯ್ಯ
Share on WhatsAppShare on FacebookShare on Telegram

ಬೆಂಗಳೂರು : ನವೀಕರಿಸಬಹುದಾದ ಇಂಧನ ವಲಯವು ವೇಗವಾಗಿ ಬೆಳೆಯುತ್ತಿದ್ದು, ಇದು ಸಾಕಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕ್ರೆಡಲ್) ದ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹೇಳಿದ್ದಾರೆ.

ADVERTISEMENT
ಜೋಸೆಫ್ ವಿಜಯ್ ಅವರು ಕಾಂಗ್ರೆಸ್ ಕಚೇರಿಗೆ ಆಗಮಿಸಿ ಪಕ್ಷಕ್ಕೆ ಬೆಂಬಲ ನೀಡಿದ್ದಕ್ಕಾಗಿ ಧನ್ಯವಾದ ಅರ್ಪಿಸಿದರು.

ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಮಾರ್ಗದರ್ಶನದಂತೆ ಕ್ರೆಡಲ್ ಹಾಗೂ ಇಂಡಿಯನ್ ವಿಂಡ್ ಪವರ್ ಅಸೋಸಿಯೇಷನ್ (ಐಡಬ್ಲ್ಯೂಪಿಎ) ಸಹಯೋಗದೊಂದಿಗೆ ಆಯೋಜಿಸಿದ್ದ ‘ಗ್ರೀನಿಂಗ್ ಯಂಗ್ ಮೈಂಡ್ಸ್’ ಇಂಟರ್ನ್‌ಶಿಪ್ ನಲ್ಲಿ ಪಾಲ್ಗೊಂಡಿದ್ದ ರಾಯಚೂರಿನ ಯುಎಎಸ್ ಕೃಷಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ನಾಗರಬಾವಿಯಲ್ಲಿರುವ ಕ್ರೆಡಲ್ ನ ಕೇಂದ್ರ ಕಚೇರಿಯಲ್ಲಿ ಪ್ರಮಾಣಪತ್ರಗಳನ್ನು ವಿತರಿಸಿ ಅವರು ಮಾತನಾಡಿದರು.

“ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಯುವ ಪೀಳಿಗೆಗೆ ಸಾಕಷ್ಟು ಉದ್ಯೋಗಾವಕಾಶಗಳು ಲಭ್ಯವಿವೆ. ಅದಕ್ಕೆ ಪೂರಕವಾಗಿ ಇಂಟರ್ನ್‌ಶಿಪ್ ಹಮ್ಮಿಕೊಳ್ಳಲಾಗಿತ್ತು. ಯುವ ಸಮುದಾಯ ಈ ಅವಕಾಶವನ್ನು ಬಳಸಿಕೊಳ್ಳಬೇಕು. ಆ ಮೂಲಕ ಭವಿಷ್ಯದ ಇಂಧನವಾಗಿರುವ ನವೀಕರಿಸಬಹುದಾದ ಇಂಧನದ ಉತ್ಪಾದನೆ, ಸಂಶೋಧನೆ, ಅಭಿವೃದ್ಧಿಯಲ್ಲಿ ಕೈಜೋಡಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ದಿಢೀರ್ ಗಾಳಿ-ಮಳೆಗೆ ಸಂಬರಗಿ ತತ್ತರ ; ಮನೆಗಳ ಮೇಲ್ಛಾವಣಿ ಹಾರಿ, ಬೆಳೆಗಳಿಗೆ ಹಾನಿ

30 ವರ್ಷಗಳ ಹಿಂದೆ, 1986 ರಲ್ಲಿ ಕೃಷಿ ಇಂಜಿನಿಯರಿಂಗ್ ಅಧ್ಯಯನ ಮಾಡುವಂತೆ ಹಿರಿಯರು ನನಗೆ ಸಲಹೆ ನೀಡಿದ್ದರು. ಆಗ ಕೋರ್ಸಿನ ವ್ಯಾಪ್ತಿಯು ಸೂಕ್ಷ್ಮ ನೀರಾವರಿ ಯೋಜನೆಗಳಂತಹ ಕ್ಷೇತ್ರಗಳಿಗೆ ಸೀಮಿತವಾಗಿತ್ತು. ಆದರೆ, ಇಂದು ಈ ವಲಯವು ವಿಕಸನಗೊಂಡಿದೆ . ಕೃಷಿ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಕೃಷಿ ಮತ್ತು ಇಂಜಿನಿಯರಿಂಗ್ ಎರಡರಲ್ಲೂ ಪ್ರವೀಣರಾಗುವುದರಿಂದ ಅವರಿಗೆ ಔದ್ಯೋಗಿಕ ಅವಕಾಶಗಳು ಹೆಚ್ಚಾಗಿರುತ್ತವೆ ಎಂದು ತಿಳಿಸಿದ್ದಾರೆ.

ಶಿಕ್ಷಣ ಪಡೆದ ಸಂಸ್ಥೆಯೊಂದಿಗಿನ ನಂಟನ್ನು ಭಾವನಾತ್ಮಕವಾಗಿ ಹಂಚಿಕೊಂಡ ಅವರು, “ನಾನು ಓದಿದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶಗಳನ್ನು ಒದಗಿಸುತ್ತಿರುವುದು ನನಗೆ ಸಂತೋಷ ತಂದಿದೆ. ವಿದ್ಯಾಭ್ಯಾಸ ಮಾಡಿದ ಸಂಸ್ಥೆಯೊಂದಿಗಿನ ನಂಟು ಯಾವಾಗಲೂ ವಿಶೇಷವಾಗಿರುತ್ತದೆ. ಈ ಅವಕಾಶ ದೊರೆತಿರುವುದು ನನ್ನ ಭಾಗ್ಯ” ಎಂದು ಹೇಳಿದ್ದಾರ.

ಇಂಡಿಯನ್ ವಿಂಡ್ ಪವರ್ ಅಸೋಸಿಯೇಷನ್ ಅಧ್ಯಕ್ಷ ಯು.ಬಿ. ರೆಡ್ಡಿ ಮಾತನಾಡಿ, “ಶೈಕ್ಷಣಿಕ ಅವಧಿಯಲ್ಲಿ ಶಿಸ್ತು ಅತ್ಯಂತ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ಸವಾಲುಗಳನ್ನು ಎದುರಿಸಲು ಹಿಂಜರಿಯುವ ಬದಲು ಆತ್ಮವಿಶ್ವಾಸದಿಂದ ಮುಂದುವರಿದರೆ ಯಶಸ್ಸು ಸಿಗುತ್ತದೆ,” ಎಂದು ಹೇಳಿದ್ದಾರೆ. ಕಾರ್ಯಕ್ರಮದಲ್ಲಿ ಕ್ರೆಡಲ್ ಅಧಿಕಾರಿಗಳು, ಇಂಟರ್ನ್‌ಶಿಪ್ ಗೆ ಸಂಬಂಧಿಸಿದ ಅಧ್ಯಾಪಕರು ಪಾಲ್ಗೊಂಡಿದ್ದರು.

ಇಂಟರ್ನ್‌ಶಿಪ್ ವಿಶೇಷತೆ..

ರಾಯಚೂರು ಯುಎಎಸ್ ಕೃಷಿ ಎಂಜಿನಿಯರಿಂಗ್ ಕಾಲೇಜಿನ ಒಟ್ಟು 43 ವಿದ್ಯಾರ್ಥಿಗಳು 2026ರ ಏಪ್ರಿಲ್ 13 ರಿಂದ ಮೇ 11ರವರೆಗೆ ನಾಗರಬಾವಿಯಲ್ಲಿರುವ ಕ್ರೆಡಲ್ ಕೇಂದ್ರ ಕಚೇರಿ ಆವರಣದಲ್ಲಿ ನವೀಕರಿಸಬಹುದಾದ ಇಂಧನದ ಕುರಿತು ತರಬೇತಿ ನೀಡಲಾಗಿತ್ತು. ಎನರ್ಫ್ರಾ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಕ್ರೆಡಲ್ ಸಹಯೋಗದೊಂದಿಗೆ ಪ್ರತಿನಿತ್ಯ ತಾಂತ್ರಿಕ ವಿಷಯಗಳ ಕುರಿತು ಮಾಹಿತಿ ಒದಗಿಸಲಾಗಿತ್ತು.

ಸುಸ್ಥಿರ ಮತ್ತು ನವೀಕರಿಸಬಹುದಾದ ಇಂಧನದ ಬಗ್ಗೆ ಜಾಗತಿಕ ಮಟ್ಟದಲ್ಲಿ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು. ತರಬೇತಿ ಕಾರ್ಯಕ್ರಮದ ಭಾಗವಾಗಿ ವಿದ್ಯಾರ್ಥಿಗಳಿಗೆ ಸೌರ ತಂತ್ರಜ್ಞಾನದ ಮಾಹಿತಿ ಒದಗಿಸಲು ಪಾವಗಡ ಸೋಲಾರ್ ಪಾರ್ಕ್‌ಗೆ ಕ್ಷೇತ್ರ ಭೇಟಿ ಆಯೋಜಿಸಲಾಗಿತ್ತು.

Girish Linganna On PM Modi’s call to global challenges : ಮೋದಿ ಮುನ್ನೆಚ್ಚರಿಕೆ ಕ್ರಮ ವಹಿಸಬೇಕಿತ್ತು..

ವಿದ್ಯಾರ್ಥಿಗಳಿಗೆ ವಿವಿಧ ನವೀಕರಿಸಬಹುದಾದ ಇಂಧನ ತಂತ್ರಜ್ಞಾನಗಳ ಪ್ರಾಯೋಗಿಕ ಪರಿಚಯ ನೀಡುವುದು, ಶೈಕ್ಷಣಿಕ ಅಧ್ಯಯನ ಮತ್ತು ನಿಜ ಜೀವನದಲ್ಲಿ ಆ ಜ್ಞಾನದ ಬಳಕೆ ಸಾಧ್ಯವಾಗಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದಲ್ಲದೆ, ನವೀಕರಿಸಬಹುದಾದ ಇಂಧನ ವ್ಯವಸ್ಥೆಗಳ ವಿನ್ಯಾಸ, ಅನುಷ್ಠಾನ ಮತ್ತು ನಿರ್ವಹಣೆ ಕುರಿತ ಅರಿವು ಹೆಚ್ಚಿಸುವುದು ಹಾಗೂ ಸುಸ್ಥಿರ ಇಂಧನ ಕ್ಷೇತ್ರದಲ್ಲಿ ಆಸಕ್ತಿ ಮತ್ತು ವೃತ್ತಿಪರ ಅವಕಾಶಗಳ ಮೇಲೆ ಬೆಳಕು ಚೆಲ್ಲುವುದು ಈ ಇಂಟರ್ನ್‌ಶಿಪ್ ಉದ್ದೇಶವಾಗಿತ್ತು.

“‘ಗ್ರೀನಿಂಗ್ ಯಂಗ್ ಮೈಂಡ್ಸ್’ ಇಂಟರ್ನ್‌ಶಿಪ್ ನಂತಹ ಉಪಕ್ರಮಗಳಿಂದ ನವೀಕರಿಸಬಹುದಾದ ಇಂಧನ ತಂತ್ರಜ್ಞಾನಗಳು ಮತ್ತು ಕೈಗಾರಿಕಾ ಬೆಳವಣಿಗೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗಿದೆ. ಆ ಮೂಲಕ ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದ ನಡುವಿನ ಅಂತರವನ್ನು ಕಡಿಮೆ ಮಾಡುವಲ್ಲಿ ನಿರ್ಣಾಯಕವಾಗಿವೆ. ಇಂತಹ ಪ್ರಯತ್ನಗಳ ಮೂಲಕ ಭವಿಷ್ಯದ ಪ್ರತಿಭೆಗಳನ್ನು ಪ್ರೋತ್ಸಾಹಿಸುವುದರ ಜತೆಗೆ ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನಕ್ಕೆ ಸಂಬಂಧಿಸಿದ ಕಾರ್ಯಯೋಜನೆಗಳ ಅನುಷ್ಠಾನಕ್ಕೆ ಕೌಶಲ್ಯ ಹೊಂದಿರುವ ಕಾರ್ಯಪಡೆಯನ್ನು ಸಿದ್ಧಪಡಿಸಲು ಸಹಾಯಕವಾಗಲಿದೆ.
– ಗೌರವ್ ಗುಪ್ತ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು

Previous Post

ಮೋದಿ ಮಾತಿಗೆ ಬುಲೆಟ್‌ ಏರಿದ ಫಡ್ನವೀಸ್‌ : ಮಹಾರಾಷ್ಟ್ರದಲ್ಲಿ‌ ಇನ್ಮುಂದೆ ಇಂಧನ ಮಿತವ್ಯಯಕ್ಕೆ ಯಾವೆಲ್ಲ ರೂಲ್ಸ್..?

Next Post

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

Related Posts

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?
Top Story

‘ಚಿನ್ನ ಖರೀದಿ ನಿಲ್ಲಿಸಿ’ ಮೋದಿ ಕರೆ: ಮಧ್ಯಮ ವರ್ಗಕ್ಕೆ ಸಂಕಷ್ಟ ಎಚ್ಚರಿಕೆ

by ಪ್ರತಿಧ್ವನಿ
May 14, 2026
0

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಒಂದು ವರ್ಷದ ಕಾಲ ಅನಗತ್ಯ ಚಿನ್ನ ಖರೀದಿ ಕಡಿಮೆ ಮಾಡುವಂತೆ ಕರೆ ನೀಡಿದ ಬೆನ್ನಲ್ಲೇ ಚಿನ್ನದ ಮಾರುಕಟ್ಟೆಯಲ್ಲಿ ಚರ್ಚೆ...

Read moreDetails
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಹೊಸ ತಿರುವು; ಸಿಬಿಐ ಬಲೆಗೆ ಮತ್ತಷ್ಟು ಆರೋಪಿಗಳು

May 14, 2026
ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

ಹೊಸ ಕೇರಳ ನಾಯಕ ವಿ.ಡಿ. ಸತೀಶನ್; ಎಷ್ಟು  ಆಸ್ತಿ ಹೊಂದಿದ್ದಾರೆ ಗೊತ್ತೆ ?

May 14, 2026
ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

ಹೋಂಗಾರ್ಡ್ಸ್, ರಿಸರ್ವ್ ಪೊಲೀಸರು ವಾಹನ ತಪಾಸಣಾ ಮಾಡಿದ್ರೆ ಕಠಿಣ ಕ್ರಮ : ಮೋಹನ್‌ ಕುಮಾರ್‌ ದಾನಪ್ಪ ಮನವಿಗೆ ಡಿಜಿಪಿ ಸ್ಪಂದನೆ

May 14, 2026
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

May 14, 2026
Next Post
ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

ವಿದ್ಯುತ್ ಉತ್ಪಾದನೆಯಲ್ಲಿ ಮಹಿಳಾ ಸಿಬ್ಬಂದಿ ಸೇವೆ ಶ್ಲಾಘನೀಯ: ಗೌರವ್ ಗುಪ್ತ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada