
ಹಾಸನ: ಹಲ್ಲಿ ಬಿದ್ದ (lizard fell)ಮಧ್ಯಾಹ್ನದ ಬಿಸಿಯೂಟ ಸೇವಿಸಿ ಸರ್ಕಾರಿ ಪ್ರೌಢಶಾಲೆಯ (Govt High School)ಸುಮಾರು 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವುದು (Students are sick)ಜಿಲ್ಲೆಯ ಅರಕಲಗೂಡು ತಾಲೂಕಿನ ರಾಗಿಮರೂರು ಗ್ರಾಮದಲ್ಲಿ ನಡೆದಿದೆ. ತಾಲೂಕಿನ ಕೋಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ತೀವ್ರ ಅಸ್ವಸ್ಥಗೊಂಡ 8 ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬಿಸಿಯೂಟ ಸೇವಿಸಿದ ಬಳಿಕ ವಾಂತಿ ಕಾಣಿಸಿಕೊಂಡು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರು. ಹೀಗಾಗಿ ವಿದ್ಯಾರ್ಥಿಗಳನ್ನು ಶಿಕ್ಷಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸುರಕ್ಷತಾ ಕ್ರಮ ವಹಿಸಿದ ಶಾಲಾ ಶಿಕ್ಷಕರ ವಿರುದ್ಧ ಇದೀಗ ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಘಟನೆ ಕುರಿತಂತೆ ಅರಕಲಗೂಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






