200 ಕ್ಕೂ ಹೆಚ್ಚು ಡ್ಯಾನಿಶ್ ಕಂಪನಿಗಳು ಭಾರತದಲ್ಲಿ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿವೆ. ಭಾರತದಲ್ಲಿ ವ್ಯಾಪಾರ ಮಾಡುವ ಸುಲಭತೆ ಮತ್ತು ಆರ್ಥಿಕ ಸುಧಾರಣೆಗಳಿಂದ ಈ ಕಂಪನಿಗಳು ಲಾಭದಾಯಕವಾಗಿದೆ ಎಂದು ಡೆನ್ಮಾರ್ಕ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.
ಮುಂದುವರೆದು, ವಿವಿಧ ಕ್ಷೇತ್ರಗಳಲ್ಲಿ, ವಿಶೇಷವಾಗಿ ನವೀಕರಿಸಬಹುದಾದ ಇಂಧನ, ಆರೋಗ್ಯ, ಬಂದರುಗಳು, ಶಿಪ್ಪಿಂಗ್, ಸರ್ಕಲ್ ಆರ್ಥಿಕತೆ ಮತ್ತು ನೀರಿನ ನಿರ್ವಹಣೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ ಎಂದು ನನಗೆ ಸಂತೋಷವಾಗಿದೆ ಎಂದು ಹೇಳಿದ್ದಾರೆ.
ಅಕ್ಟೋಬರ್ 2020 ರ ಭಾರತ-ಡೆನ್ಮಾರ್ಕ್ ವರ್ಚುವಲ್ ಶೃಂಗಸಭೆಯ ಸಮಯದಲ್ಲಿ, ನಾವು ನಮ್ಮ ಸಂಬಂಧಗಳನ್ನು Green Strategic Partnership ಎಂದು ಕರೆದಿದ್ದೇವೆ. ಇಂದಿನ ನಮ್ಮ ಚರ್ಚೆಯ ಸಮಯದಲ್ಲಿ, ನಮ್ಮ Green Strategic Partnershipನ ಜಂಟಿ ಕೆಲಸದ ಯೋಜನೆಯನ್ನು ನಾವು ಪರಿಶೀಲಿಸಿದ್ದೇವೆ ಎಂದು ಹೇಳಿದ್ಧಾರೆ.

ಉಕ್ರೇನ್‌ನಲ್ಲಿ ತಕ್ಷಣದ ಕದನ ವಿರಾಮಕ್ಕೆ ಮತ್ತು ಸಮಸ್ಯೆಗೆ ಪರಿಹಾರಕ್ಕಾಗಿ ಸಂವಾದ ಹಾಗೂ ಸರಿಯಾದ ಮಾರ್ಗ ನಡೆಯುವಂತೆ ನಾವು ಮನವಿ ಮಾಡಿದ್ದೇವೆ ಎಂದು ಡೆನ್ಮಾರ್ಕ್‌ನ ಕೋಪನ್‌ಹೇಗನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.








