ಶಿವಮೊಗ್ಗ(Shivmogga) ಮೂಲದ 15 ಜನರು (15People)ಟಿಟಿ ವಾಹನದಲ್ಲಿ ಗುರುವಾರ (ಜೂ.27) ರಂದು ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಯಲ್ಲಮ್ಮನ ದೇವಸ್ಥಾನಕ್ಕೆ ತೆರಳಿದ್ದರು(Savadatti Renuka of Belgaum district went to Yallamma temple). ದೇವಿ ದರ್ಶನ ಪಡೆದು ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ(Pune-Bangalore National Highway) ಮರಳಿ ಊರಿಗೆ ಹೋಗುವಾಗ ಭೀಕರ ಅಪಘಾತ ಸಂಭವಿಸಿದೆ. 13 ಜನರು ಮೃತಪಟ್ಟಿದ್ದಾರೆ(13 people died).
ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು 13 ಜನರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಹಿಂದಿನಿಂದ ಟಿಟಿ ವಾಹನ (TT Vehicle) ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಟಿಟಿ ವಾಹನದಲ್ಲಿದ್ದ 7 ಮಂದಿ ಮಹಿಳೆಯರು ಸೇರಿದಂತೆ 13 ಜನ ಮೃತಪಟ್ಟಿದ್ದಾರೆ. ಪರಶುರಾಮ್(Parashuram) (45), ಭಾಗ್ಯ (Bhagya)(40), ನಾಗೇಶ(Nagesh) (50), ವಿಶಾಲಾಕ್ಷಿ(Vishalakshmi) (40), ಅರ್ಪಿತಾ (Arpitha) (18), ಸುಭದ್ರಾ ಬಾಯಿ (Subhadrabai) (65), ಪುಣ್ಯ (Punya) (50), ಮಂಜುಳಾಬಾಯಿ (Manjula Bai), ಚಾಲಕ ಆದರ್ಶ್(Adarsh) (23), ಮಾನಸ (Manasa) (24), ರೂಪಾ (Roopa) (40), ಮಂಜುಳಾ (Manjula) (50) ಮೃತರು ಮೃತಪಟ್ಟವರು. ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಎಮ್ಮೆಹಟ್ಟಿ (Residents of Emmehatti of Bhadravati Taluk of Shivamooga District) ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಿನ ಜಾವ 4 ಗಂಟೆಯ(4 o’clock in the morning) ಸುಮಾರಿಗೆ ಅಪಘಾತ ನಡೆದಿದೆ ಎನ್ನಲಾಗಿದೆ.
ಮೃತ ನಾಗೇಶ್ ಎಮ್ಮೆಹಟ್ಟಿ ಗ್ರಾಮದಲ್ಲಿ ಕೃಷಿಕರಾಗಿದ್ದಾರೆ. ನಾಗೇಶ್ ಪತ್ನಿ ವಿಶಾಲಾಕ್ಷಿ ಆಶಾ ಕಾರ್ಯಕರ್ತೆ ಯಾಗಿದ್ದರು. ವಿಶಾಲಾಕ್ಷಿ ಕೂಡ ಮೃತಪಟ್ಟಿದ್ದಾರೆ. ನಾಗೇಶ್ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿಸಿದ್ದರು. ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ಹೋಗಿದ್ದ ಕುಟುಂಬದವರು ಸೋಮವಾರ (ಜೂ. 24) ರಂದು ಮಧ್ಯಾಹ್ನ 12 ಗಂಟೆಗೆ ಸುಮಾರಿಗೆ ಶಿವಮೊಗ್ಗದಿಂದ ಹೊರಟು, ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ(Maharashtra Tiwari Lakshmi Temple) ತಲುಪಿದ್ದಾರೆ. ಅಲ್ಲಿ ವಾಹನ ಪೂಜೆ ಮಾಡಿಸಿ, ಬಳಿಕ ತುಳಜಾಭವಾನಿ (Tulajabhavani Temple) ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ. ನಂತರ ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿದ್ದಾರೆ. ಅಲ್ಲಿಂದ ಬೆಳಗಾವಿ ಜಿಲ್ಲೆ ಸವದತ್ತಿಗೆ ಆಗಮಿಸಿ, ಇಲ್ಲಿಯ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ಹೋಗುವಾ ಅಪಘಾತ ಸಂಭವಿಸಿದೆ.
ಹಾವೇರಿ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ (Chief Minister Siddaramaiah has announced a compensation of Rs 2 lakh each for those who died in the Haveri accident).