• Home
  • About Us
  • ಕರ್ನಾಟಕ
Tuesday, November 18, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Mysore Dasara: ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್

ಪ್ರತಿಧ್ವನಿ by ಪ್ರತಿಧ್ವನಿ
September 22, 2025
in Top Story, ಅಂಕಣ, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ರಾಜಕೀಯ, ವಿಶೇಷ
0
Share on WhatsAppShare on FacebookShare on Telegram

ದಸರೆಯು ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲಿ: ಬಾನು ಮುಷ್ತಾಕ್, ನಾಡಹಬ್ಬ ದಸರಾ-ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ, ದ್ವೇಷವನ್ನು ಬೆಳೆಸದೇ ಪ್ರೀತಿಯನ್ನು ಹರಡುವುದೇ ನಮ್ಮ ಸಂಸ್ಕೃತಿಯ ಗುರಿ. ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ, ಅಸ್ತ್ರಗಳಿಂದಲ್ಲ, ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು, ಈ ನೆಲದ ಪರಂಪರೆಯೇ’ಸರ್ವ ಜನಾಂಗದ ಶಾಂತಿಯ ತೋಟ ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಬಾನು ಮುಷ್ತಾಕ್

ADVERTISEMENT

ಮೈಸೂರು ದಸರಾ, ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳವಾಗಿದೆ ಎಂದು ಸಾಹಿತಿ ಹಾಗೂ 2025ರ ಅಂತರಾಷ್ಟ್ರೀಯ ಬೂಕರ್ ಬಹುಮಾನ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರು ತಿಳಿಸಿದರು.

ಅವರು ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಅಗ್ರಪೂಜೆಯೊಂದಿಗೆ ಪ್ರಾರಂಭವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮೈಸೂರು ದಸರಾದ ಪವಿತ್ರದ ಕ್ಷಣದಲ್ಲಿ ಚಾಮುಂಡಿ ತಾಯಯ ಕೃಪೆಯ ನೆರಳಿನಲ್ಲಿ, ಈ ವೇದಿಕೆಯಿಂದ ನಿಮ್ಮೆದುರು ನಿಲ್ಲುವ ಅವಕಾಶ ದೊರೆತಿರುವುದು ನನ್ನ ಜೀವನದ ಅತ್ಯಂತ ಗೌರವದ ಘಳಿಕೆ. ದಸರಾ ಎಂದರೆ ಕೇವಲಹಬ್ಬವಲ್ಲ, ಇದು ನಾಡಿನ ನಾಡಿ, ಸಂಸ್ಕೃತಿಯ ಉತ್ಸವ, ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ. ಈ ನೆಲದಲ್ಲಿ ಹುಟ್ಟಿದ ಪ್ರತಿಯೊಂದು ಜೀವಕ್ಕೂ ಈ ಮಣ್ಣಿನ ಬಾರಿಸುದಾರಿಕೆ, ಸ್ಪಂದನೆ ಮತ್ತು ನೆನಪುಗಳಿವೆ ಎಂದರು.

ಸರ್ವ ಜನಾಂಗದ ಶಾಂತಿಯ ತೋಟ’-ಈ ನೆಲದ ಸಂಸ್ಕೃತಿ

ಮೈಸೂರು ಅರಸರ ಸಂಸ್ಕೃತಿಯ ಪರಂಪರೆಯಿಂದ ಹಿಡಿದು,ಕನ್ನಡ ಭಾಷೆಯ ಅಂತರಾಳದ ಹೃದಯಸ್ಪಂದನದವರೆಗೆ ಈ ಹಬ್ಬವು ನಮಗೆ ಸ್ಮರಿಸುತ್ತದೆ. ಸಂಸ್ಕೃತಿ ಎಂದರೆ ಬೇರೆ ಬೇರೆ ಧ್ವನಿಗಳ ಸಂಗಮ. ವಿಭಿನ್ನತೆಯಲ್ಲೇ ಏಕತೆಯ ಸುಗಂಧ. ಮಹಾರಾಜರು ಜಯಚಾಮರಾಜೇಂದ್ರ ಒಡೆಯರು ಮುಸ್ಲಿಂರ ನಂಬಿ, ಅವರನ್ನು ಅನುಮಾನಿಸದೇ, ಅಂಗರಕ್ಷಕರ ಪಡೆಯ ಸದಸ್ಯರಾಗಿದ್ದರು, ಇದು ನಮಗೆ ಬಹಳ ಹೆಮ್ಮೆಯ ಮತ್ತು ಅಪ್ಯಾಯಮಾನವಾದ ವಿಷಯ. ಸಂಸ್ಕೃತಿ ಎಂದರೆ ಹೃದಯದಗಲವನ್ನು ಹುಟ್ಟಿಸುವ ನನ್ನ ಧಾರ್ಮಿಕ ನಂಬಿಕೆ, ಯಾವಗಾಗಲೂ ಜೀವ ಪರ ಮಾನವೀಯಪರ. ಈ ನೆಲದ ಸಂಸ್ಕೃತಿಯ ಮೂಲ- ಎಲ್ಲರನ್ನೊಳಗೊಳ್ಳುವ ಎಲ್ಲರ ಬದುಕನ್ನು ಗೌರವಿಸುವ , ನಮ್ಮೆಲ್ಲರ ಸರ್ವ ಜನಾಂಗದ ಶಾಂತಿಯ ತೋಟ ಎಂದರು.

ದಸರಾ- ಶಾಂತಿಯ ಹಬ್ಬ, ಸೌಹಾರ್ದದ ಮೇಳ
ಮೈಸೂರು ದಸರಾ ಘೋಷಣೆಯ ನಮ್ಮೆಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ. ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ, ಇದು ಸರ್ವಜನಾಂಗದ ಶಾಂತಿಯ ತೋಟ. ನಾವು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಗೌರವಿಸಿ, ಪರಸ್ಪರರ ನಂಬಿಕೆಗಳನ್ನು, ಸಂಸ್ಕೃತಿಗಳನ್ನು ಗೌರವಿಸುವುದರ ಮೂಲಕ ನಮ್ಮ ಬದುಕನ್ನು ಶ್ರೀಮಂತಗೊಳಿಸಬೇಕಿದೆ. ಈ ನೆಲದ ಸುಗಂಧವನ್ನು ಐಕ್ಯತೆಯಾಗಲಿ, ನೆಲದ ಬಿಸಿಲು ಕೂಡ ಸಾಹಾರ್ದತೆಯಿಂದ ಕೂಡಿದೆ. ಈ ನೆಲದ ಬಿಸಿಲು ಕೂಡ ಮಾನವೀಯ ಪ್ರೀತಿಯ ಪ್ರತೀಕವಾಗಿದೆ. ಈ ಸಂದರ್ಭದಲ್ಲಿ ಚಾಮುಂಡಿ ತಾಯಿಯ ಮಹಿಮೆ ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಕವಾಗಿರಲಿ. ತಾಯಿ ಚಾಮುಂಡಿಯ ಸತ್ಯ, ಧೈರ್ಯ ಹಾಗೂ ರಕ್ಷಕತ್ವದ ಸಂಕೇತ. ನಮ್ಮೊಳಗಿನ ದ್ವೇಷ, ಅಸಹಿಷ್ಣುತೆಗಳನ್ನು ನಾಶವಾಗಲೆಂದು ಬಯಸುತ್ತೇನೆ. ಈ ದಸರಾ ಹಬ್ಬ ಕೇವಲ ಮೈಸೂರು ನಗರಕ್ಕೆ ಸೀಮಿತವಾಗದೇ, ನಮ್ಮ ನಾಡಿಗೆ ಮಾತ್ರ , ದೇಶಕ್ಕೆ ಮಾತ್ರ ಸೀಮಿತವಾಗದೇ , ಇಡೀ ಜಗಗತ್ತಿನಾದ್ಯಂತ ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ, ಪ್ರೀತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲೆಂದು ಹಾರೈಸುತ್ತೇನೆ. ಇಂದು ಬೆಳೆಗಿಸಿದ ದೀಪ ಈ ಸಂದೇಶದೊಂದಿಗೆ ಇಡೀ ಪ್ರಪಂಚದಾದ್ಯಂತ ತನ್ನ ನೆಲೆಯನ್ನು ಕಂಡುಕೊಳ್ಳಲಿ ಎಂದು ಆಶಿಸುತ್ತೇನೆ ಎಂದರು.

ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವುದೇ ಬದುಕಿನ ನಿಜವಾದ ದಾರಿ
ನನ್ನ ಬದುಕು ನನಗೆ ಅನೇಕ ಪಾಠಗಳನ್ನು ಕಲಿಸಿದೆ. ಅದರಲ್ಲಿ ಮುಖ್ಯಪಾಠವೆಂದರೆ, ವ್ಯಕ್ತಿಯಿಂದ ಸಮಷ್ಠಿಯೆಡೆಗೆ ಸಾಗುವ ದಾರಿ ಮಾತ್ರ ನಿಜವಾದ ದಾರಿ. ನನ್ನ ಧಾರ್ಮಿಕ ನಂಬಿಕೆಗಳು, ನನ್ನ ಜೀವನ ದರ್ಶನ ಎಂದಿಗೂ ಜೀವಪರ. ಅವು ಮರದ ನೆರಳಿನಂತೆ,ತಂಪಾದ ನದಿಯಂತೆ, ಇಂದಿನ ಜಗತ್ತು ಯುದ್ಧದ ಜ್ವಾಲೆಯಲ್ಲಿ ಸುಡುತ್ತಿದೆ. ಇಂದು ಮನುಕುಲವು ದ್ವೇಷ ಮತ್ತು ರಕ್ತಪಾತದಲ್ಲಿ ಮುಳುಗಿರುವಾಗ, ದಸರಾ ಘೋಷಣೆಯು ಎಲ್ಲರ ಕಿವಿಯಲ್ಲಿ ಪ್ರತಿಧ್ವನಿಸಲಿ , ಇದು ಶಾಂತಿಯ ಹಬ್ಬ, ಸೌಹಾರ್ದದ ಮೇಳ. ಇದು ಸರ್ವಜನಾಂಗದ ಶಾಂತಿಯ ತೋಟ. ನನ್ನ ಜೀವನದ ದರ್ಶನ ಯಾವತ್ತಿಗೂ ಜೀವಪರ. ಅಸ್ತ್ರಗಳಿಂದಲ್ಲ, ಅಕ್ಷರದಿಂದ ಬದುಕನ್ನು ಗೆಲ್ಲಬಹುದು. ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು ಎಂದರು.

ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ
ಈ ನೆಲದ ಪರಂಪರೆಯೇ ಸರ್ವಜನಾಂಗದ ಶಾಂತಿಯ ತೋಟ ವಾಗಿದೆ. ಈ ತೋಟದಲ್ಲಿ ಪ್ರತಿ ಹೂವು ತನ್ನ ಬಣ್ಣದಲ್ಲೇ ಅರಳಲಿ, ಪ್ರತಿ ಹಕ್ಕಿ ತನ್ನ ರಾಗದಲ್ಲೇ ಹಾಡಲಿ, ಆದರೆ ಒಟ್ಟಿಗೆ ಸೇರಿದಾಗ ಅದು ಸೌಹಾರ್ದ ಸಿಂಫನಿಯಾಗಲಿ. ಪ್ರಜಾಪ್ರಭುತ್ವವು ಕೇವಲ ವ್ಯವಸ್ಥೆಯಲ್ಲ, ಅದು ಮೌಲ್ಯ. ಅದು ಪ್ರತಿಯೊಬ್ಬರ ಧ್ವನಿಯನ್ನು ಗೌರವಿಸುವ ಮನೋಭಾವ. ಅದು ಬೇರೆಯವರ ಬದುಕಿನಲ್ಲಿ ಅರ್ಥಪೂರ್ಣವಾಗಿ ನಡೆದುಕೊಳ್ಳುವ ಜವಾಬ್ದಾರಿ. ಅದನ್ನು ಗೌರವಿಸುವು ನಮ್ಮೆಲ್ಲರ ಕರ್ತವ್ಯ ಎಂದರು.

ನಾವೆಲ್ಲಾ ಒಂದೇ ಗಗನದಡಿಯ ಪಯಣಿಗರು
ನಾವು ಎಲ್ಲರೂ ಒಂದೇ ಗಗನದಡಿಯ ಪಯಣಿಗರು. ಆಕಾಶವು ಯಾರನ್ನೂ ಬೇರ್ಪಡಿಸುವುದಿಲ್ಲ. ಭೂಮಿ ಯಾರನ್ನೂ ತಳ್ಳುವುದಿಲ್ಲ. ಮನುಷ್ಯನು ಮಾತ್ರ ಗಡಿ ಹಾಕುತ್ತಾನೆ. ಆ ಗಡಿಗಳನ್ನು ನಾವೇ ಅಳಿಸಬೇಕು. ಇಂದು ಈ ಹಬ್ಬ ಮೈಸೂರಿನ ಬೀದಿಗಳಲ್ಲಿ ಮಾತ್ರವತ್ತ. ಇಡೀ ಜಗತ್ತಿನ ಹೃದಯಗಳಲ್ಲಿ ಬೆಳಗಲಿ ಎಂದರು.

ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ
ಇತಿಹಾಸದತ್ತ ನೋಡಿದರೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದೆಂದಿಗೂ ಪ್ರಸ್ತುತವಾಗುತ್ತಾರೆ. ಅವರು ಹಂಚಿಕೊಳ್ಳುವ ಮನದ ಅರಸ. ರಾಜಕೀಯ, ಆರ್ಥಿಕ, ಸಾಮಾಜಿಕ ನ್ಯಾಯದ ಔದಾರ್ಯದ ದೊರೆಯಾಗಿದ್ದರು. ಭೇದ ಭಾವಕ್ಕಿಂತ ವಿಶಾಲ ಮನಸ್ಸಿಗೆ ಗೌರವವಿತ್ತು. ಅವರು ನೀಡಿದ ಸಂದೇಶ ಸಂಪತ್ತನ್ನು ಹಂಚಿದಾದ ಮಾತ್ರ ಅದು ಬೆಳೆಯುತ್ತದೆ. ಶಕ್ತಿಯನ್ನು ಹಂಚಿಕೊಂಡಾಗ ಮಾತ್ರ ದೀರ್ಘಕಾಲ ಬದುಕತ್ತದೆ ಎಂದರು.

ಸಂಸ್ಕೃತಿ ನಮ್ಮ ಬೇರು ಸೌಹಾರ್ದ ನಮ್ಮ ಶಕ್ತಿ

ಸಂಸ್ಕೃತಿ ನಮ್ಮ ಬೇರು. ಸೌಹಾರ್ದ ನಮ್ಮ ಶಕ್ತಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಭಾರತದ ನೆಲೆಯಲ್ಲಿ ನಮ್ಮ ಯುವಶಕ್ತಿಯೊಂದಿಗೆ ಸೇರಿ ಮಾನವೀಯ ಮೌಲ್ಯಗಳ , ಪ್ರೀತಿಯ ಹೊಸ ಸುಧಾರಿತ ಸಮಾಜವನ್ನು ಕಟ್ಟೋಣ.
ತಾನೊಬ್ಬ ಕವಿಯತ್ರಿಯಾಗಿದ್ದು, ಕವಿತೆಯ ಮೂಲಕ ನನ್ನ ಸಂದೇಶವನ್ನು ತಿಳಿಸಲು ಬಯಸಿದ್ದು, ಮುಸ್ಲಿಂ ಹೆಣ್ಣುಮಗಳು ಬಾಗಿನವನ್ನು ಪಡೆದಾಗಿನ ತನ್ನ ಮನಸ್ಸಿನ ಭಾವನೆಯನ್ನು ವ್ಯಕ್ತಪಡಿಸುವ ಕವಿತೆಯನ್ನು ಓದಿದರು.


ಬಾಗಿನ

     ಮೊರ ಅಂದರೆ ಗೊತ್ತಲ್ಲಾ. . .. 
    ಕೇರುತ್ತೆ ಅದು ,ಅಲ್ಲಿ 
      ಇಲ್ಲಿ ಮತ್ತು ಎಲ್ಲೆಲ್ಲೂ

    ಆ ದಿನ. . . . 
    ಸೇವಂತಿಗೆ  ಹೂವು ಚಳ್ಳನೆ ನಗು 
     ಚಿಮುಕಿಸುತ್ತಿತು.ದಿನ ತುಂಬಿದ್ದ 
    ಮೋಡ  ಎರಡೂ ಕೈಯಲಿ ಸೊಂಟ 
    ಹಿಡಿದು ಬೆವರಿನಿಂದ ತೊಯ್ದು
    ಉಸ್ಸೆಂದಾಗ

    ಆಕಾಶ ಭೂಮಿ ಮತ್ತು ಸಮಸ್ತವೂ ಗಲಗಲ
    ಅಂತ ಚಿಮ್ಮುತ್ತಿದ್ದವ್ತು.ಅಸೂಯೆಯಿಂದ ಸೂರ್ಯ 
    ಕೆಂಪಾಗಿದ್ದ , ನನಗಿಲ್ಲದ ವಾತ್ಸಲ್ಯದಲ್ಲಿ ಇವಳು 
    ಹೇಗೆ ಮಿನುಗುತ್ತಾಳೆ  ಅಂತ 

    ಅದೇನೂ ಎಂದಿನ ದಿನವಾಗಿರಲಿಲ್ಲ 
    ಸಂಭ್ರಮಕೇ ದೊಡ್ಡ ಮುಳ್ಳು ಚಿಕ್ಕ ಮುಳ್ಳು
    ಅಂಟಿ ಜೂಟಾಟವಾಡುತ್ತಿದ್ದವಲ್ಲಾ


    ಅಚ್ಚ ಕೃಷಿಕ ಬಸವರಾಜಣ್ಣನ ಎಡ 
    ಹೆಗಲಿನ ವಲ್ಲಿಯೊಡನೆ ಮಣ್ಣಿನ 
    ಗುಣ ಹೀರಿದ್ದ ನಾನು ಬಾನು
    ವಿನಿಂದ ಜಯಾ ಅಗಿದ್ದು ಹೀಗೆ 
    ಯಾವುದೇ ಗೋಡೆಗಳಿರಲಿಲ್ಲ ಬಿಡಿ 
    ಪ್ರೀತಿಯ ಒಳ ಒರತೆಗಳು 
    ಜಿನುಗುವುದು ಹೀಗೆ ನೋಡಿ

    ಸಾಬರ ಮಗಳು ಸಾಬರ ಸೊಸೆಗೆ 
    ಜೀವದುಂಬಿದ ಹಸಿ ಮಣ್ಣಿನ ಬಾಗಿನ 
    "ಜಯಾ. . . .ನಡಿಯವ್ವ ಹಬ್ಬಕೆ '
    ಅರಿಶಿನದ ಎಲೆ  ಕಡುಬು


     ಗಂಡನ ಮನೆಯ ಕಸೂತಿ ನೆರಿಗೆಗಳ
    ಸದಾ ಚಿಮ್ಮುತ್ತಿದ್ದರೂಎದೆಯಾಳದಲಿ
     ಪಿಸುಗುಟ್ಟಿದ್ದು ಆ ಎಲೆ ಹಸಿರು 
    ವಾತ್ಸಲ್ಯವ ನೆಯ್ದ ಸಾದಾ ಸೀರೆ


    ಮಡಿಲಲಿ ತುಂಬಿಸಿ ಕವುಚಿದ ಮೊರವ
    ಮರಳುವ ದಾರಿಯಲಿ ನಿಂತು
    ಅರಳಿಮರವ ಕೇಳಿದ್ದೆ 
    ಹೇಗೆ ಕೊಂಡೊಯ್ಯಲಿ ಇದನು 
    ನನ್ನತ್ತೆ ಮನೆಗೆ ಅರಿಶಿನ ಕುಂಕುಮದೊಡನೆ  

    ಹೇಗೆ ಬಿಡಿಸಲಿ ಬಾಂಧವ್ಯದ ಎಳೆಗಳ 
    ರಂಗೋಲಿಯನು ಸಾಬರ ಮನೆ ಬಾಗಿಲಲಿ
    ಕೊಡಲೇ ಯಾರಿಗಾದರೂ ದಾರಿಹೋಕರಿಗೆ?
    ಕೊಡಬಹುದೇ ಆದನು ಯಾರಿಗಾದರೂ 
     ಆ  ಒಲವನು ಬಲವನು
    ಪಿತೃ ವಾತ್ಸಲ್ಯದ ಮಾತೃತ್ವವನು

    ನೆನೆಸಿಕೊಂಡಾಗ ಈಗಲೂ 
    ಕಣ್ಣಂಚಿನಲಿ ತೇವ 
    ಮೊರದ ತುಂಬಾ ಬದುಕಿನ ಪಸೆಯ
    ಹಸೆಯ ಬರೆದ ಬೇಸಿಗೆ ಹಕ್ಕಿಯ ವಿದಾಯ

    ಬಸವರಾಜಣ್ಣ. . . .
      ನೀವು ಕೊಟ್ಟ ಮೊರಹೇಳುತ್ತೆ
    ಮಿಡಿಯುತ್ತೆ ಸಹಸ್ರ  ಆರೋಪಗಳೆದುರು 
    ಒಂಟಿಯಾಗಿ ನಿಲ್ಲುತ್ತೆ ,ದ್ವೇಷದ ಎಲ್ಲಾ 
     ಭಾಷೆಗಳ ಕವುಚಿ ಹಾಕುತ್ತೆ  ಮುಂಜಾವಿನ 
     ಹೊಂಬೆಳಕಿನೊAದಿಗೆ  ಪ್ರೀತಿಯ ನಿರ್ಮಲ
    ಅಲೆಗಳು ಮೊರದ ತುಂಬಾ 
    ತೂರುತ್ತಿರುತ್ತವೆ
Tags: | siddaramaiahc m siddaramaiah danceCM Siddaramaiahcm siddaramaiah dancecm siddaramaiah housecm siddaramaiah newscm siddaramaiah speechsiddaramaiahsiddaramaiah angersiddaramaiah angrysiddaramaiah bdaysiddaramaiah comedysiddaramaiah dancesiddaramaiah dancingsiddaramaiah in delhisiddaramaiah jdssiddaramaiah new dancesiddaramaiah newssiddaramaiah panchesiddaramaiah pcsiddaramaiah slip downsiddaramaiah speechsiddaramaiah stylesiddaramaiah today news
Previous Post

ಸರ್ಕಾರದ ಮೂಲಕ ಚಾಮುಂಡಿ ತಾಯಿಯೇ ನನ್ನನ್ನು ಕರೆಸಿಕೊಂಡಿದ್ದಾಳೆ : ಬಾನು ಮುಷ್ತಾಕ್ 

Next Post

Kanthara Chapter-1: ಟ್ರೈಲರ್‌ನಲ್ಲಿ ಕಾಂತಾರ ಚಾಪ್ಟರ್-‌1ರ ದಂತಕಥೆ ಹೇಳಿದ ರಿಷಬ್..!!

Related Posts

Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
0

ಚಿಕ್ಕಮಗಳೂರು: ಜಿಲ್ಲೆಯ ಶಾಸಕರಿಗೆ ಸಚಿವ ಸ್ಥಾನ ನೀಡುವಂತೆ ಸಿಎಂ, ಡಿಸಿಎಂ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ - ಸಚಿವ ಜಾರ್ಜ್ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗೆ ಶಂಕುಸ್ಥಾಪನ...

Read moreDetails

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸುಳ್ಳು ಮಾಹಿತಿ ಪ್ರಕಟಿಸಿದರೆ ಕ್ರಿಮಿನಲ್ ಕೇಸ್

November 18, 2025
ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

ಮಾಜಿ ಸಿಎಂ ಯಡಿಯೂರಪ್ಪಗೆ ಕೋರ್ಟ್ ಮತ್ತೊಂದು ಶಾಕ್

November 18, 2025
Next Post

Kanthara Chapter-1: ಟ್ರೈಲರ್‌ನಲ್ಲಿ ಕಾಂತಾರ ಚಾಪ್ಟರ್-‌1ರ ದಂತಕಥೆ ಹೇಳಿದ ರಿಷಬ್..!!

Recent News

Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!
Top Story

ಆರಂಭದಲ್ಲೇ ಆಘಾತ: ನಿತೀಶ್ ಕುಮಾರ್ ಬೇಡಿಕೆಯಿಂದ ಬಿಜೆಪಿಗೆ ಶಾಕ್..!

by ಪ್ರತಿಧ್ವನಿ
November 18, 2025
ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು
Top Story

ತುಮಕೂರಿಗೆ ಮೆಟ್ರೋ ವಿರೋಧಕ್ಕೆ ಪರಮೇಶ್ವರ್ ತಿರುಗೇಟು

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada