ಶಿವಮೊಗ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.
ಭದ್ರಾವತಿ ತಾಲೂಕಿನ ತಡಸಾ ಗ್ರಾಮದ ಆರೀಫ್ ಪತ್ನಿ ಅಲ್ಮಾಜಾ ಬಾನುಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿದ್ದು, ಅಲ್ಮಾಜಾ ಬಾನು 2 ಗಂಡು, 2 ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ವೈದ್ಯಕೀಯ ಕ್ಷೇತ್ರದ ಪ್ರಕಾರ ಒಟ್ಟಿಗೆ 4 ಮಕ್ಕಳಿಗೆ ಜನ್ಮ ನೀಡುವ ಪ್ರಕರಣಗಳು ತುಂಬಾ ಅಪರೂಪ. 5.12 ಲಕ್ಷ ಜನರಲ್ಲಿ ಒಬ್ಬರು ಮಾತ್ರ ಈ ರೀತಿ 4 ಮಕ್ಕಳಿಗೆ ಜನ್ಮ ನೀಡುವುದು ಕಂಡು ಬರುತ್ತದೆ.
ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ಶಿವಮೊಗ್ಗ ಆಸ್ಪತ್ರೆ ವೈದ್ಯ ಡಾ.ಧನಂಜಯ ಸರ್ಜಿ ತಿಳಿಸಿದ್ದಾರೆ.