• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾರ್ಚ್ 28ಕ್ಕೆ`ತಾಯಿ ಕಸ್ತೂರ್ ಗಾಂಧಿ’ ಅಮೇಜಾನ್ ಪ್ರೈರ್ಮನಲ್ಲಿ ಬಿಡುಗಡೆ.

ಪ್ರತಿಧ್ವನಿ by ಪ್ರತಿಧ್ವನಿ
March 25, 2025
in Top Story, ಕರ್ನಾಟಕ, ಜೀವನದ ಶೈಲಿ, ವಾಣಿಜ್ಯ, ವಿಡಿಯೋ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ `ತಾಯಿ ಕಸ್ತೂರ್ ಗಾಂಧಿ’ ಕನ್ನಡ ಚಿತ್ರವು ಇದೇ ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಓ.ಟಿ.ಟಿ.ಯಲ್ಲಿ ಬಿಡುಗಡೆಯಾಗಲಿದೆ.

ADVERTISEMENT

ಬರಗೂರರ ಕಾದಂಬರಿಯನ್ನು ಆಧರಿಸಿ ಈ ಚಿತ್ರವು ನಿರ್ಮಾಣಗೊಂಡಿದೆ. ನಮ್ಮದೇಶದಲ್ಲಿ ಕಸ್ತೂರ್‍ಬಾ ಅವರನ್ನೇ ಕೇಂದ್ರವಾಗಿಟ್ಟುಕೊಂಡು ನಿರ್ಮಾಣವಾದ ಮೊದಲ ಚಿತ್ರವೆಂಬ ಹೆಗ್ಗಳಿಕೆಗೂ ಇದು ಪಾತ್ರವಾಗಿದೆ. ಕಸ್ತೂರ್ ಬಾ ಅವರ ಬದುಕಿನ ಕೆಲವು ಪ್ರಮುಖ ಘಟನೆಗಳ ಮೂಲಕ ಆದರ್ಶ ಮತ್ತು ಕಟುವಾಸ್ತವಗಳ ಕಥನವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ. ಬದುಕಿನ ದ್ವಂದ್ವಗಳನ್ನು ಎದುರಿಸುತ್ತಲೇ ಅದನ್ನು ಮೀರುವ ವ್ಯಕ್ತಿತ್ವಗಳಾಗಿ ಕಸ್ತೂರ್ ಬಾ ಮತ್ತು ಗಾಂಧಿಜಿಯವರನ್ನು ಚಿತ್ರಿಸಲಾಗಿದೆ. ಕಸ್ತೂರ್ ಬಾ ಅವರು ತಾಯಿ, ಪತ್ನಿ ಮತ್ತು ಹೋರಾಟಗಾರ್ತಿಯಾಗಿ ಬದುಕನ್ನು ನಿಭಾಯಿಸಿದ ಚರಿತೆಯನ್ನು ಈ ಚಿತ್ರವು ಅನಾವರಣಗೊಳಿಸುತ್ತದೆ. ಇದು ಏಕಕಾಲಕ್ಕೆ ಕಸ್ತೂರ್ ಬಾ ಮತ್ತು ಗಾಂಧಿಜಿ – ಇಬ್ಬರ ವ್ಯಕ್ತಿತ್ವವನ್ನು ಒಳಗೊಂಡ ಚಿತ್ರವಾಗಿದೆ.`ತಾಯಿ ಕಸ್ತೂರ್ ಗಾಂಧಿ’ ಚಿತ್ರವು ಕೆಲವು ವಿದೇಶಿ ಅಂತರರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಗಾಗಿದ್ದು ಲಾಸ್ ಏಂಜಲೀಸ್ ಚಿತ್ರೋತ್ಸವದಲ್ಲಿ ಉತ್ತಮ ಚಿತ್ರ ಪ್ರಶಸ್ತಿಗೆ ಭಾಜನವಾಗಿದೆ.

ಸುರೇಶ್ ಅರಸು ಅವರಿಗೆ ಉತ್ತಮ ಸಂಕಲನಕಾರ ಪ್ರಶಸ್ತಿಯೂ ಬಂದಿದೆ.ಕಸ್ತೂರ್ ಬಾ ಮತ್ತು ಗಾಂಧಿಜಿಯವರ ಬಾಲ್ಯ, ಯೌವನ ಮತ್ತು ಮುಪ್ಪಿನ ಹಂತಗಳು ಈ ಚಿತ್ರದಲ್ಲಿವೆ. ಕಸ್ತೂರ್ ಬಾ ಪಾತ್ರದಲ್ಲಿ ಹರಿಪ್ರಿಯ ಮತ್ತು ಗಾಂಧಿಯಾಗಿ ಕಿಶೋರ್ ಅಭಿನಯಿಸಿದ್ದಾರೆ;

ಶ್ರೀನಾಥ್ ಅವರು ಅಂಬೇಡ್ಕರ್ ಪಾತ್ರದಲ್ಲಿದ್ದಾರೆ. ಮಾಸ್ಟರ್ ಆಕಾಂಕ್ಷ್ ಬರಗೂರು, ಸುಂದರರಾಜು, ಪ್ರಮೀಳಾ ಜೋಷಾಯ್, ರಾಘವ್, ಸುಂದರರಾಜ ಅರಸು, ರೇಖಾ, ವೆಂಕಟರಾಜು, ವತ್ಸಲಾ ಮೋಹನ್, ಕುಮಾರಿ ಸ್ಪಂದನ ಮುಂತಾದವರು ತಾರಾಗಣದಲ್ಲಿದ್ದಾರೆ.

ಸುರೇಶ್ ಅರಸು ಸಂಕಲನ, ನಾಗರಾಜ ಆದವಾನಿ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಮತ್ತು ಮೈತ್ರಿಬರಗೂರು ಕಲಾ ನಿರ್ದೇಶನ ಮಾಡಿರುವ ಈ ಚಿತ್ರದ ನಿರ್ಮಾಪಕರು ಗೀತಾ ಬಿ.ಜಿ. ಬರಗೂರರು ಚಿತ್ರಕತೆ, ಸಂಭಾಷಣೆ ಗೀತರಚನೆ ಜೊತೆಗೆ ನಿರ್ದೇಶಿಸಿದ್ದಾರೆ.ಆಮೇಜಾನ್ ಪ್ರೈಮ್‍ನಲ್ಲಿ ಈ ಚಿತ್ರವನ್ನು ನೋಡಿ ಪ್ರೋತ್ಸಾಹಿಸಲು ನಿರ್ಮಾಪಕರು, ನಿರ್ದೇಶಕರು, ಚಿತ್ರತಂಡದವರು ಈ ಮೂಲಕ ವಿನಂತಿಸಿದ್ದಾರೆ.(ಬರಗೂರು ರಾಮಚಂದ್ರಪ್ಪ)

Tags: .baraguru ramachandrappaactor kishore interviewbaraguru ramachandrappa book brahmabaraguru ramachandrappa committeebaraguru ramachandrappa in kannadabaraguru ramachandrappa interviewbaraguru ramachandrappa moviebaraguru ramachandrappa moviesbaraguru ramachandrappa newsbaraguru ramachandrappa speechbaraguru ramachandrappa today newsbest of kishore kumarbaraguru ramachandrappadirector baraguru ramachandrappadr baraguru ramachandrappaIndian actorkishor kumarKishore Kumarkishore kumar movie trailerkishore kumar romantic songskishore kumar teaser trailer
Previous Post

ಯಾರೂ ಯಾರನ್ನೂ ಹನಿ ಟ್ರ್ಯಾಪ್ ಮಾಡಲು ಸಾಧ್ಯವಲ್ಲ..! ಅವರವರೇ ಆಗೋದಷ್ಟೇ : ಮಂಕಾಳ ವೈದ್ಯ 

Next Post

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

Related Posts

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು
Top Story

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

by ಪ್ರತಿಧ್ವನಿ
April 30, 2026
0

ಬೆಂಗಳೂರು : ವಿಜಯಪುರದಲ್ಲಿ 227.91 ಕೋಟಿ ರೂ. ವೆಚ್ಚದಲ್ಲಿ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದ (ಕೆ.ಎಸ್.ಡಿ.ಎಲ್) ನೂತನ ಉತ್ಪಾದನಾ ಘಟಕ ಸ್ಥಾಪಿಸುವ ಯೋಜನೆಗೆ...

Read moreDetails
ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

ಒಂದು ಮಳೆಯ ಅಬ್ಬರಕ್ಕೆ ಸಿಲಿಕಾನ್ ಸಿಟಿ ಶಾಕ್: ಫುಟ್‌ಪಾತ್ ವ್ಯಾಪಾರಕ್ಕೆ ಬ್ರೇಕ್

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಅವಘಡ ; ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

April 30, 2026
Next Post

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada