ಬೆಂಗಳೂರಿನಲ್ಲಿ ತಾಯಿಯೇ ಮಗಳನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ತಾಯಿ ಮೇಲೆ ಮಗಳು ಕೂಡ ಚಾಕುವಿನಿಂದ ದಾಳಿ ಮಾಡಿದ್ದು, ಗಾಯಗೊಂಡ ತಾಯಿ ಆಸ್ಪತ್ರೆ ಪಾಲಾಗಿದ್ದಾರೆ. ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸೆಕೆಂಡ್ ಪಿಯುಸಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ತಾಯಿ ಮಗಳ ನಡುವೆ ಜಗಳ ನಡೆಯುತ್ತಿತ್ತು. ಎಕ್ಸಾಂಗೆ ಕಾಲೇಜಿಗೆ ಹೋಗ್ತೀನಿ ಅಂತೇಳಿ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿಚಾರ ಸೋಮವಾರ ತಾಯಿಗೆ ತಿಳಿದಿದ್ದು, ಜಗಳ ಶುರು ಆಗಿತ್ತು.
ಜಗಳ ಅತಿರೇಕಕ್ಕೆ ಹೋದಾಗ ಚಾಕುವಿನಿಂದ ಇಬ್ಬರು ಪರಸ್ಪರ ಇರಿದುಕೊಂಡಿದ್ದರು. ತೀವ್ರವಾಗಿ ರಕ್ತಸ್ರಾವ ಆಗಿದ್ರಿಂದ 18 ವರ್ಷದ ಮಗಳು ಸಾಹಿತಿ ಸಾವನ್ನಪ್ಪಿದ್ದಾಳೆ. ತಾಯಿಗೂ ಕೂಡ ತೀವ್ರ ರಕ್ತಸಾವ್ರದಿಂದ ತಾಯಿ ಆಸ್ಪತ್ರೆ ಸೇರಿದ್ದಾರೆ.