• Home
  • About Us
  • ಕರ್ನಾಟಕ
Saturday, December 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

‘ತಾಯಂದಿರು ದಾರಿ ತಪ್ತಿದ್ದಾರೆ’ ಕುಮಾರಸ್ವಾಮಿ ಬದಲು ದೇವೇಗೌಡರು ಟಾರ್ಗೆಟ್‌..!!

ಕೃಷ್ಣ ಮಣಿ by ಕೃಷ್ಣ ಮಣಿ
April 16, 2024
in ರಾಜಕೀಯ
0
ಮೈಸೂರಿನಲ್ಲಿ 3 ದಿನ ಸಿಎಂ ಠಿಕಾಣಿ ! ದೇವೇಗೌಡರ ಹೇಳಿಕೆ ಸಿದ್ದು ನಿದ್ದೆ ಕೆಡಿಸಿದ್ಯಾ ?! 
Share on WhatsAppShare on FacebookShare on Telegram
ADVERTISEMENT

ಮಾಜಿ ಸಿಎಂ ಕುಮಾರಸ್ವಾಮಿ ಗ್ಯಾರಂಟಿ ಯೋಜನೆಗಳಿಂದ ‘ತಾಯಂದಿರು ದಾರಿ ತಪ್ತಿದ್ದಾರೆ’ ಎಂದಿದ್ದರು. ಆ ಬಳಿಕ ಕ್ಷಮಾಪಣೆಯನ್ನೂ ಕೇಳಿದ್ದರು. ಆ ಬಳಿಕವೂ ಕಾಂಗ್ರೆಸ್‌ ಪ್ರತಿಭಟನೆ ಮುಂದುವರಿದಿದ್ದು, ತುಮಕೂರಿನಲ್ಲಿ ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರ ಕಾರ್ಯಕ್ರಮಕ್ಕೆ ನುಗ್ಗಿದ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಕೂಗಿದ್ದಾರೆ. ಕುಮಾರಸ್ವಾಮಿ ಹಾಗೂ ದೇವೇಗೌಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ತುಮಕೂರಿನ ಕುಂಚಿಟಿಗರ ಸಭಾಭವನದಲ್ಲಿ ನಡೆಯುತ್ತಿದ್ದ ಮೈತ್ರಿ ಸಮಾವೇಶದಲ್ಲಿ ಇಬ್ಬರು ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಗದ್ದಲ ಎಬ್ಬಿಸಿದ್ದಾರೆ.

ಮಹಿಳಾ ಕಾರ್ಯಕರ್ತೆಯರು ಪರಸ್ಪರ ಜುಟ್ಟು ಹಿಡಿದು ಎಳೆದಾಡಿದ್ದಾರೆ. ಕುಂಚಿಟಿಗ ಭವನದ ವೇದಿಕೆ ಮುಂಭಾಗದಿಂದ ಗೇಟ್‌ವರೆಗೂ ಜುಟ್ಟು ಹಿಡಿದು ಎಳೆದಾಡಿದ್ದಾರೆ. ಮೈತ್ರಿ ಅಭ್ಯರ್ಥಿ ವಿ.ಸೋಮಣ್ಣ ಪರ ಕುಂಚಿಟಿಗ ಭವನದಲ್ಲಿ ಪ್ರಚಾರ ಸಭೆ ನಡೆಸುತ್ತಿದ್ದ ವೇಳೆ ದೇವೆಗೌಡರ ಜೊತೆಗೆ ಪೋಟೋ ತೆಗೆಸಿಕೊಳ್ಳುವ ನೆಪದಲ್ಲಿ ಹತ್ತಿರಕ್ಕೆ ಬಂದು ಕುಮಾರಸ್ವಾಮಿ ಹಾಗೂ ದೇವೆಗೌಡರ ವಿರುದ್ಧ ಧಿಕ್ಕಾರದ ಕೂಗಿ ಘೋಷಣೆ ಕೂಗಿದ್ದಾರೆ. ಕೂಡಲೇ ಇಬ್ಬರು ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರನ್ನ ವಶಕ್ಕೆ ಪಡೆದಿದ್ದಾರೆ ಪೊಲೀಸರು.

ಮೈತ್ರಿ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರ ಧಿಕ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ತುಮಕೂರಿನಲ್ಲಿ ಮೈತ್ರಿ ಅಭ್ಯರ್ಥಿ ವಿ ಸೋಮಣ್ಣ ಮಾತನಾಡಿದ್ದು, ಗಲಾಟೆ ಅಲ್ಲ ರೀ ಹತಾಶಾರಾಗಿದ್ದಾರೆ. ದೇವೆಗೌಡರು ಸಮುದ್ರ ರೀ. ಈ ಸಣ್ಣಪುಟ್ಟದಕ್ಕೆಲ್ಲ ಅವರು ತಲೆಕೆಡಿಸಿಕೊಳ್ಳಲ್ಲ. ದೇಶ ಕಂಡ ಅಪರೂಪದ ರೈತ ನಾಯಕ ಅವರು. ಇದಕ್ಕೆ ಬೆಳಗ್ಗೆನೇ ಕುಮಾರಸ್ವಾಮಿ ಕ್ಲಾರಿಟಿ ಕೊಟ್ಟಿದ್ದಾರೆ. ಕಾಂಗ್ರೆಸ್‌ನವರಿಗೆ ಏನಾದ್ರು ಒಂದು ನ್ಯೂಸ್ ಸೆನ್ಸ್ ಆಗಲಿ ಅನ್ನೋ ಬಯಕೆ ಎಂದಿದ್ದಾರೆ. ಇನ್ನು ಹತಾಶಾ ಭಾವನೆಯಿಂದ ಮಾಡಿರುವ ಸ್ವಯಂಕೃತ ಅಪರಾಧ. ಭಯ ಅಂತ ನಾನು ಹೇಳಲ್ಲ, ಹತಾಶಾರಾಗಿದ್ದಾರೆ. ಪೊಲೀಸ್ ಭದ್ರತಾ ವೈಫಲ್ಯ ಅಂತ ಹೇಳೋಕೆ ನಾನು ತಯಾರಿಲ್ಲ. ನಮ್ಮ ಕಾರ್ಯಕ್ರಮ ಸಕ್ಸಸ್ ಆಗ್ತಿರೋದಕ್ಕೆ ಈ ರೀತಿಯಾಗಿ ಮಾಡಿದ್ದಾರೆ ಎಂದಿದ್ದಾರೆ.

ತುಮಕೂರು ನಗರ ಶಾಸಕ ಜ್ಯೋತಿ ಗಣೇಶ್ ಮಾತನಾಡಿ, ಇವತ್ತು ಬಿಜೆಪಿ- ಜೆಡಿಎಸ್ ಸಭೆಯಲ್ಲಿ ಹಿರಿಯರಾದ ಮಾಜಿ ಪ್ರಧಾನಿ ದೇವೇಗೌಡರು ಹಾಜರಿದ್ದರು. ಅವರು ಮಾತನಾಡುವಾಗ ಇಬ್ಬರು ಕಾಂಗ್ರೆಸ್ ನ ಮಹಿಳಾ ಕಾರ್ಯಕರ್ತೆಯರು, ಒಂದು ರೀತಿ ಮಫ್ತಿಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಕಾರ್ಯಕರ್ತೆಯರ ರೀತಿ ಬಂದಿದ್ದರು. ದೇವೇಗೌಡರನ್ನ ಏನು ಮಾಡೋಕೆ ಬಂದಿದ್ದರೋ ಗೊತ್ತಿಲ್ಲ. ಘೋಷಣೆ ಕೂಗಿಕೊಂಡು ಒಳಗೆ ಬರೋದಕ್ಕೆ ಹೋದ್ರು. ಇದು ಖಂಡನಾರ್ಹ. ತುಮಕೂರಿನಲ್ಲಿ ಈ ರೀತಿಯಾದ ಯಾವುದೇ ಘಟನೆ ನೋಡಿರಲಿಲ್ಲ. ಯಾವುದೇ ವಿರೋಧ ಪಕ್ಷವಾದರೂ ಗೌರವಯುತವಾಗಿ ಸುದ್ದಿಗೋಷ್ಠಿ ನಡೆಸಿ ವಿರೋಧ ವ್ಯಕ್ತಪಡಿಸಬೇಕಿತ್ತು ಎಂದಿದ್ದಾರೆ.

ಕಾಂಗ್ರೆಸ್‌ನವರಿಗೆ ತಾಕತ್ತಿದ್ರೆ ನೇರವಾಗಿ ಚುನಾವಣೆ ಮಾಡಬೇಕು. ಇಲ್ಲಿ ಶಿಖಂಡಿ ಥರ ಕಳುಹಿಸಿ ಕಾರ್ಯಕ್ರಮದಲ್ಲಿ ಗದ್ದಲ ಮಾಡೋದಲ್ಲ, ನೇರವಾಗಿ ಬರಬೇಕಿತ್ತು. ಹಿಂದೆ ನಿಂತ್ಕೊಂಡು ಯಾರನ್ನೋ ಕಳುಹಿಸೋದಲ್ಲ. ದೇವೇಗೌಡರ ಮೇಲೆ ಏನಾದ್ರು ನಡೆದಿದ್ರೆ ಏನು ಆಗ್ತಿತ್ತು. ನಾವು ಇದನ್ನ ಎಸ್‌ಪಿಯವರಿಗೆ ಹೇಳಿ, ನಾವೆಲ್ಲಾ ಖಂಡಿಸುತ್ತೇವೆ. ನಾವು ಮುಂಚೆನೇ ಎಸ್‌ಪಿಯವರಿಗೆ ಹೇಳಿದ್ವಿ, ಈ ಥರ ಏನಾದ್ರೂ ಆಗುತ್ತೆ ಅಂತ. ಈ ರೀತಿ ಮಾಡೋದು ಕಾಂಗ್ರೆಸ್ ನಾಯಕರಿಗೆ ಶೋಭೆ ತರಲ್ಲ. ಅವರಾಗಿ ಅವರು ಬರಲ್ಲ, ಅವರಿಗೆ ಧೈರ್ಯ ಇರಲ್ಲ. ಅವರಿಗೆ ಯಾರಾದ್ರೂ ಚಿತಾವಣೆ ಮಾಡಿ ಕಳುಹಿಸಿರ್ತಾರೆ ಎಂದು ಜ್ಯೋತಿ ಗಣೇಶ್‌ ಟೀಕಿಸಿದ್ದಾರೆ

ಕೃಷ್ಣಮಣಿ

,

H D Kumaraswamy: ನನ್ ಮಾತಿಂದ ಮಹಿಳೆಯರಿಗೇನು ಅಪಮಾನ ಆಗಿಲ್ಲ - ಗರಂ ಆದ HDK#pratidhvani #hdkumaraswamy
DKShivakumar|ಕುಮಾರಸ್ವಾಮಿ ಅವರ ಮಾತು ಮಾನವ ಕುಲಕ್ಕೆ ದೊಡ್ಡ ಅವಮಾನ|Pratidhvani
Tags: Congress Partyformer Prime MinisterH D Deve GowdaV ಸೋಮಣ್ಣWomen Workersಎಚ್ ಡಿ ಕುಮಾರಸ್ವಾಮಿತುಮಕೂರುಲೋಕಸಭಾ
Previous Post

ನಾಯಿ, ಬೆಕ್ಕುಗಳಿಗೆ ಸಲಾಂ ಹೊಡೆಯುವ ದಿನ ಬರುತ್ತೆ.. ಹುಷಾರ್

Next Post

Gfinity launching competitive league for teams to draft amateur players

Related Posts

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
0

ಬೆಂಗಳೂರು: ರಾಜಧಾನಿಯ ಸಮೀಪ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(Airport) ನಿರ್ಮಿಸುವ ಸಂಬಂಧ ಸ್ಥಳದ ಅನುಕೂಲ ಮತ್ತು ತಾಂತ್ರಿಕ ಹಾಗೂ ಆರ್ಥಿಕ ಕಾರ್ಯಸಾಧ್ಯತಾ ವರದಿ ಸಿದ್ಧಪಡಿಸಲು ಪರಿಣತ ಸಲಹಾ...

Read moreDetails
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

December 13, 2025
Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

Winter Session 2025: ಕಾರ್ಮಿಕ ಕಿಟ್ ವಿತರಣೆ ನಿಯಮಕ್ಕೆ ಮಾರ್ಪಾಡು- ಸಚಿವ ಸಂತೋಷ್ ಲಾಡ್ ಸ್ಪಷ್ಟನೆ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
Next Post

Gfinity launching competitive league for teams to draft amateur players

Please login to join discussion

Recent News

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’
Top Story

ಒಟಿಟಿಗೆ ಎಂಟ್ರಿ ಕೊಟ್ಟ ಸೈಕಲಾಜಿಕಲ್ ಥ್ರಿಲ್ಲರ್ ‘ಗ್ರೀನ್’

by ಪ್ರತಿಧ್ವನಿ
December 13, 2025
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ
Top Story

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!