• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
November 11, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಿಶೇಷ, ಸಿನಿಮಾ
0
Share on WhatsAppShare on FacebookShare on Telegram

ಇದು ವಸಿಷ್ಠ ಸಿಂಹ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ, ಇತ್ತೀಚಿನ ದಿನಗಳಲ್ಲಿ ಹೊಸ ಆಲೋಚನೆಯ ನಿರ್ದೇಶಕರು ತಮ್ಮ ವಿಭಿನ್ನ ಮತ್ತು ವೈವಿಧ್ಯಮಯ ಕಥೆಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ಕಂಟೆಂಟ್‍ ಆಧಾರಿತ ಚಿತ್ರಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ವಾನರ ಸೆಲ್ಯುಲಾಯ್ಡ್ ಎಂಬ ಹೊಸ ನಿರ್ಮಾಣ ಸಂಸ್ಥೆ ಹೆಜ್ಜೆ ಇಟ್ಟಿದೆ. ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡುವ ಉದ್ದೇಶದಿಂದ ಈ ಸಂಸ್ಥೆ ಹುಟ್ಟಿಕೊಂಡಿದ್ದು, ಒಂದಿಷ್ಟು ವೈವಿಧ್ಯಮಯ ಚಿತ್ರಗಳನ್ನು ನಿರ್ಮಿಸುತ್ತಿದೆ. ಅದರ ಮೊದಲ ಹಂತವಾಗಿ, ‘ತ್ರಿಬಾಣಧಾರಿ ಬಾರ್ಬರಿಕ’ ಎಂಬ ಚಿತ್ರ ತಯಾರಾಗುತ್ತಿದ್ದು, ಈ ಚಿತ್ರವನ್ನು ವಿಜಯಪಾಲ್‍ ರೆಡ್ಡಿ ಅಡಿಧಲ ನಿರ್ಮಿಸಿದರೆ, ಮೋಹನ್‍ ಶ್ರೀವತ್ಸ ನಿರ್ದೇಶನ ಮಾಡುತ್ತಿದ್ದಾರೆ. ಜನಪ್ರಿಯ ನಿರ್ದೇಶಕ ಮಾರುತಿ ಈ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಪ್ರತಿಭಾವಂತ ಕಲಾವಿದರ ಮತ್ತು ತಂತ್ರಜ್ಞರ ದಂಡೇ ಈ ಚಿತ್ರದಲ್ಲಿದೆ. ಕನ್ನಡಿಗ ವಸಿಷ್ಠ ಸಿಂಹ ಸಹ ಈ ಪ್ಯಾನ್ ಇಂಡಿಯಾ ಚಿತ್ರದ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

ADVERTISEMENT

ಇತ್ತೀಚೆಗೆ ‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆಯಾಗಿದ್ದು, ಇದರ ಮೂಲಕ ಚಿತ್ರದ ಕಥಾವಸ್ತುವನ್ನು ಪರಿಚಯಿಸಲಾಗಿದೆ. ಪೌರಾಣಿಕ ಮತ್ತು ಸಾಮಾಜಿಕ ಅಂಶಗಳು ಬೆರೆತಿರುವ ಕಥೆ ಇದಾಗಿದೆ. ಭೀಮನ ಮೊಮ್ಮಗ ಮತ್ತು ಘಟೋತ್ಕಚನ ಮಗ ಬಾರ್ಬರಿಕನ ಕಥೆಯನ್ನು ಈ ಚಿತ್ರದಲ್ಲಿ ಹೇಳಲಾಗಿದೆ. ಮೂರು ಬಾಣಗಳನ್ನು ಏಕಕಾಲಕ್ಕೆ ಹೂಡುವ ಬಾರ್ಬರಿಕನ ಅದ್ಭುತ ಪರಾಕ್ರಮವನ್ನು ಈ ಮೋಷನ್‍ ಪೋಸ್ಟರ್ ನಲ್ಲಿ ವಿವರಿಸಲಾಗಿದೆ. ಈ ಜಗತ್ತು ಗಮನಿಸದ ಒಬ್ಬ ಮಹಾವೀರನ ಕಥೆ ಇದು ಎಂದು ಈ ಪೋಸ್ಟರ್ ನಲ್ಲಿ ಬಣ್ಣಿಸಲಾಗಿದೆ. ಒಂದು ಕಡೆ ಪೌರಾಣಿಕ ಕಥೆ ಹೇಳುತ್ತಲೇ, ಇನ್ನೊಂದು ಕಡೆ ಆಧುನಿಕ ಸ್ಪರ್ಶ ಸಹ ನೀಡಲಾಗಿದೆ. ಗಾಂಢೀವಧಾರಿ ಅರ್ಜುನ, ಪಾಶುಪತಾಸ್ತ್ರಂ, ಬ್ರಹ್ಮಾಸ್ತ್ರಂ, ಗರುಡ ಪುರಾಣಂ ಮುಂತಾದ ಪುಸ್ತಕಗಳ ಜೊತೆಗೆ ಗನ್‍ ಸಹ ತೋರಿಸಲಾಗಿದೆ. ಈ ಮೂಲಕ ಪೌರಾಣಿಕ ಮತ್ತು ಸಮಕಾಲೀನ ವಿಷಯಗಳನ್ನು ಈ ಚಿತ್ರದಲ್ಲಿ ಹೇಳಿರುವ ಸೂಚನೆ ನೀಡಲಾಗಿದೆ.

ಈ ಮೋಷನ್‍ ಪೋಸ್ಟರ್, ಚಿತ್ರದ ಬಗ್ಗೆ ನಿರ್ದೇಶಕರಿಗಿರುವ ಒಳನೋಟ ಮತ್ತು ಒಂದೊಳ್ಳೆಯ ಚಿತ್ರವನ್ನು ಪ್ರೇಕ್ಷಕರಿಗೆ ನೀಡಬೇಕೆಂಬ ನಿರ್ಮಾಪಕರನ್ನು ಬದ್ಧತೆಯನ್ನು ಎತ್ತಿಹಿಡಿಯುತ್ತಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಇನ್ಫ್ಯೂಷನ್‍ ಬ್ಯಾಂಡ್‍ ಎಂಬ ಸಂಗೀತ ತಂಡವು ಈ ಚಿತ್ರಕ್ಕೆ ಸಂಗೀತ ಸಂಯೋಜಿಸುತ್ತಿದ್ದು, ವೀಡಿಯೋ ನೋಡುತ್ತಿದ್ದಂತೆಯೇ ಪ್ರೇಕ್ಷಕರಿಗೆ ರೋಮಾಂಚನ ಉಂಟಾಗುತ್ತದೆ. ಅವರ ಧ್ವನಿ, ಪ್ರೇಕ್ಷಕರ ಮೇಲೆ ಗಾಢವಾದ ಪರಿಣಾಮವನ್ನು ಉಂಟು ಮಾಡುತ್ತದೆ.

‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದಲ್ಲಿ ಸತ್ಯರಾಜ್‍, ವಸಿಷ್ಠ ಸಿಂಹ, ಸಂಚಿ ರೈ, ಸತ್ಯಂ ರಾಜೇಶ್‍, ಕ್ರಾಮತಿ ಕಿರಣ್‍, ಮೊಟ್ಟ ರಾಜೇಂದ್ರ, ವಿ.ಟಿ.ವಿ. ಗಣೇಶ್‍, ಉದಯಭಾನು ಮುಂತಾದವರು ಪ್ರಮುಖ ಪಾತ್ರಗಳನ್ನು ನಿರ್ವಹಿಸುತ್ತಿದ್ದಾರೆ. ಕುಶೇಂದರ್ ರಮೇಶ್‍ ರೆಡ್ಡಿ ಛಾಯಾಗ್ರಹಣ, ಮಾರ್ತಾಂಡ ವೆಂಕಟೇಶ್‍ ಸಂಕನ ಮತ್ತು ಶ್ರೀನಿವಾಸ್ ಪನ್ನ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ. ರಾಮ್‍ ಸಂಕರ ಸಾಹಸ ದೃಶ್ಯಗಳನ್ನು ನಿರ್ದೇಶನ ಮಾಡಿದ್ದಾರೆ.

ಚಿತ್ರೀಕರಣ ಮುಗಿದು ಸದ್ಯ ಪೋಸ್ಟ್ ಪ್ರೊಡಕ್ಷನ್‍ ಹಂತದಲ್ಲಿರುವ ‘ತ್ರಿಬಾಣಧಾರಿ ಬಾರ್ಬರಿಕ್‍’ ತನ್ನ ಪೋಸ್ಟರ್ ಮೂಲಕವೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿದ್ದು, ಈ ಚಿತ್ರವು ಪ್ಯಾನ್‍ ಇಂಡಿಯಾ ಚಿತ್ರಾಗಿ ಕನ್ನಡ, ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ.

Tags: ganeshKannada moviekramati kiranPan IndiaSathyarajTribanadhari barbarikudayabanuvasista simha
Previous Post

ವಕ್ಫ್‌ ಬೋರ್ಡ್‌ ಆಸ್ತಿ ವಿವಾದ.. ಮತದಾನ ಬಹಿಷ್ಕಾರಕ್ಕೆ ನಿರ್ಧಾರ..

Next Post

ತುತ್ತು ಅನ್ನಕ್ಕೆ ಬಿಗ್ ಬಾಸ್ ಮನೆಯಲ್ಲಿ ಜಗಳ – ಗೋಲ್ಡ್ ಸುರೇಶ್ ಮಾಡಿದ್ದು ಸರಿನಾ?

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ತುತ್ತು ಅನ್ನಕ್ಕೆ ಬಿಗ್ ಬಾಸ್ ಮನೆಯಲ್ಲಿ ಜಗಳ – ಗೋಲ್ಡ್ ಸುರೇಶ್ ಮಾಡಿದ್ದು ಸರಿನಾ?

ತುತ್ತು ಅನ್ನಕ್ಕೆ ಬಿಗ್ ಬಾಸ್ ಮನೆಯಲ್ಲಿ ಜಗಳ - ಗೋಲ್ಡ್ ಸುರೇಶ್ ಮಾಡಿದ್ದು ಸರಿನಾ?

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!