ಹಾವೇರಿ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತು ಜನರು ನಿಧನ ಹೊಂದಿರುವ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿಯವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ಮಾಡಿರುವ ಅವರು, ಮೃತರು ತಮ್ಮ ಉಪ ಜೀವನಕ್ಕಾಗಿತರಕಾರಿ ವ್ಯಾಪಾರ ಮಾಡಿಕೊಂಡಿದ್ದು ಅತ್ಯಂತ ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಈ ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸರ್ಕಾರ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು, ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಅಲ್ಲದೇ ಈ ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇವೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.