ಮಂಗಳೂರು; ಜಲೀಲ್ ಕೊಲೆ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಉಡುಪಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ನಳಿನ್‌ಕುಮಾರ್ ಕಟೀಲ್, ಕೊಲೆ ಬಗ್ಗೆ ಈಗಾಗಲೇ ಸೂಕ್ತ ಕ್ರಮವಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇವೆ. ಕಾಂಗ್ರೆಸ್ ಇಂತಹ ಘಟನೆಯಿಂದ ರಾಜಕೀಯ ಲಾಭ ಪಡೆಯುತ್ತದೆ ಎಂದು ಹೇಳಿದ್ದಾರೆ.
ಕಳೆದ ಶನಿವಾರ ರಾತ್ರಿ ದುಷ್ಕರ್ಮಿಗಳು ಕೃಷ್ಣಾಪುರ ನಿವಾಸಿ ಜಲೀಲ್ ಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದರು. ಘಟನೆ ಬಗ್ಗೆ ವ್ಯಾಪಕವಾದ ಆಕ್ರೋಶ ವ್ಯಕ್ತವಾಗಿತ್ತು.ಇದೊಂದು ರಾಜಕೀಯ ಪ್ರೇರಿತ ಕೊಲೆ ಎಂದ ಆರೋಪ ಮಾಡಿದ್ದಾರೆ .