ಬೀದರ್ : ಕಾಂಗ್ರೆಸ್ನ ಬಿ ಟೀಂನಂತೆ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳು ಕೆಲಸ ಮಾಡುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದಾರೆ. ಬೀದರ್ನ ಎಂಎಸ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಹನ ನಡೆಸಿದ ಅವರು, ಪಿಎಫ್ಐ ಹಾಗೂ ಎಸ್ಡಿಪಿಐ ಸಂಘಟನೆಗಳ ವಿರುದ್ಧ ಹರಿಹಾಯ್ದಿದ್ದಾರೆ.
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ . ವೋಟ್ ಬ್ಯಾಂಕ್ಗಾಗಿ ಕಾಂಗ್ರೆಸ್ ಕೂಡ ಈ ಸಂಘಟನೆಗಳ ವಿರುದ್ಧ ದನಿ ಎತ್ತುತ್ತಿಲ್ಲ. ಎಸ್ಡಿಪಿಐ ಜೊತೆ ಕೈ ಜೋಡಿಸಿ ಕಾಂಗ್ರೆಸ್ ಕಾರ್ಪೋರೇಷನ್ ಚುನಾವಣೆ ಎದುರಿಸಿದೆ ಎಂದು ಆರೋಪ ಮಾಡಿದ್ದಾರೆ.
ಪ್ರಧಾನಿ ಮೋದಿ ಹೆಸರೇಳಿ ವೋಟ್ ಕೇಳಿದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂಬ ಪ್ರಮೋದ್ ಮುತಾಲಿಕ್ ಹೇಳಿಕೆಗೂ ಇದೇ ವೇಳೆ ಪ್ರತಿಕ್ರಿಯಿಸಿದ ಅವರು, ಮೇ 13ರ ಬಳಿಕ ಜನರ ಉತ್ತರ ಏನು ಅನ್ನೋದು ಎಲ್ಲರಿಗೂ ತಿಳಿಯುತ್ತೆ. ಈ ರೀತಿ ಮಾತನಾಡುವವರಿಗೆ ರಾಜ್ಯದ ಜನತೆಯೇ ಉತ್ತರ ನೀಡುತ್ತಾರೆ ಎಂದು ಹೇಳಿದ್ರು.