ಬೆಂಗಳೂರು ದಕ್ಷಿಣ (Bengaluru south) ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejaswi surya) ಅವರು ಡಿಸಿಎಂ ಡಿ ಕೆ ಶಿವಕುಮಾರ್ (Dk Shivakumar) ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಕೆಲಕಾಲ ಸಮಾಲೋಚನೆ ನಡೆಸಿದ್ದಾರೆ. ತಮ್ಮ ಕ್ಷೇತ್ರದ ಕೆಲ ವಿಚಾರಗಳಿಗೆ ಸಂಬಂಧಪಟ್ಟಂತೆ ತೇಜಸ್ವಿ ಸೂರ್ಯ ಡಿಕೆ ಶಿವಕುಮಾರ್ ಅವರ ಬಳಿ ಚರ್ಚಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ ಮಹಾ ಕುಂಭ ಮೇಳದಲ್ಲಿ ಭಾಗಿಯಾಗಿದ್ದು, ಈಶಾ ಫೌಂಡೇಶನ್ ಗೆ (Isha foundation) ಭೇಟಿ ನೀಡಿದ್ದು, ಅಮಿತ್ ಶಾ ಜೊತೆ ವೇದಿಕೆ ಹಂಚಿಕೊಂಡಿದ್ದು, ನಾನೊಬ್ಬ ಹಿಂದೂ ಎಂದು ಹೇಳಿದ್ದು ಕಾಂಗ್ರೆಸ್ ವಲಯದಲ್ಲಿ ತೀವ್ರ ಚರ್ಚೆಗೆ ದಾರಿ ಮಾಡಿಕೊಟ್ಟಿರುವ ಬೆನ್ನಲ್ಲೇ ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಆದ್ರೆ ಈ ಭೇಟಿಯಲ್ಲಿ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಕ್ಷೇತ್ರದ ವಿಚಾರವಾಗಿ ಚರ್ಚಿಸಲು ಸೀಮಿತವಾಗಿದ್ದ ಭೇಟಿ ಎನ್ನಲಾಗಿದ್ದು ಸದ್ಯ ಬೇರೆ ಆಯಾಮದ ಚರ್ಚೆಗೆ ಬ್ರೇಕ್ ಬಿದ್ದಿದೆ.