ನವದೆಹಲಿ : ಪ್ರಮುಖ ಕೇಂದ್ರ ಕ್ಯಾಬಿನೆಟ್ ಪುನರ್ರಚನೆಯಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು (Kiren Rijiju) ಅವರಿಗೆ ಗೇಟ್ ಪಾಸ್ ನೀಡಿದ್ದು, ಅವರ ಸ್ಥಾನಕ್ಕೆ ಅರ್ಜುನ್ ರಾಮ್ ಮೇಘವಾಲ್ (Arjun Ram Meghwal) ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಮೇಘವಾಲ್ ತಾವು ಈಗಾಗಲೇ ವಹಿಸಿಕೊಂಡಿರು ಖಾತೆಗಳ ಜೊತೆಗೆ ಕಾನೂನು ಮತ್ತು ನ್ಯಾಯ ಸಚಿವಾಲಯದ ರಾಜ್ಯ ಸಚಿವರಾಗಿ (ಸ್ವತಂತ್ರ) ಉಸ್ತುವಾರಿ ವಹಿಸಿಕೊಂಡರು. ಅವರು ಪ್ರಸ್ತುತ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರು ಮತ್ತು ಸಂಸ್ಕೃತಿ ಖಾತೆ ರಾಜ್ಯ ಸಚಿವರಾಗಿದ್ದಾರೆ. ಕಿರಣ್ ರಿಜಿಜು ಈಗ ಭೂ ವಿಜ್ಞಾನ ಸಚಿವಾಲಯದ ಖಾತೆಯನ್ನು ನಿರ್ವಹಿಸಲಿದ್ದಾರೆ.
ಸಂಸತ್ತಿಗೆ ಸೈಕಲ್ ನಲ್ಲಿ ಆಗಮಿಸುತ್ತಿದ್ದರು
ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಕೆಲಸ ಮಾಡಲು ಸೈಕ್ಲಿಂಗ್ ಅನ್ನು ಇಷ್ಟಪಡುವ ರಾಜಕಾರಣಿ. ಸಂಸತ್ತಿಗೆ ಸೈಕಲ್ ತುಳಿದೇ ಬರುವ ಸಂಸದ ಎಂದು ಅವರು ಹೆಸರುವಾಸಿಯಾಗಿದ್ದಾರೆ. ಹಲವಾರು ಸಂದರ್ಭಗಳಲ್ಲಿ, ಅವರು ಲೋಕಸಭೆಗೆ ಸೈಕಲ್ ಸವಾರಿ ಮಾಡಿದ್ದಾರೆ. 2016ರಲ್ಲಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಚಿವರಾದ ಬಳಿಕ ಅವರು ಈ ಸವಾರಿ ನಿಲ್ಲಿಸಿದರು.