• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮುಡಾ ದಾಳಿ.. ಸಿಎಂ ರಾಜೀನಾಮೆಗೆ ವಿರೋಧಿ ನಾಯಕರ ಆಗ್ರಹ..

ಕೃಷ್ಣ ಮಣಿ by ಕೃಷ್ಣ ಮಣಿ
October 19, 2024
in Top Story, ಕರ್ನಾಟಕ, ರಾಜಕೀಯ, ಶೋಧ
0
ಮುಡಾ ದಾಳಿ.. ಸಿಎಂ ರಾಜೀನಾಮೆಗೆ ವಿರೋಧಿ ನಾಯಕರ ಆಗ್ರಹ..
Share on WhatsAppShare on FacebookShare on Telegram

ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ತಲಾಶ್‌ ನಡೆಸುತ್ತಿರುವ ಹೊತ್ತಿನಲ್ಲೇ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹ ಮಾಡಿದ್ದಾರೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಹಿಂದೆ ಕರ್ನಾಟಕ ಅಭಿವೃದ್ಧಿ ಪರ ರಾಜ್ಯವಾಗಿತ್ತು. ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತವಾಗಿದೆ. ಅಭಿವೃದ್ಧಿಗೆ ಹಣ ಖರ್ಚು ಮಾಡ್ತಾ ಇಲ್ಲ. ವಾಲ್ಮೀಕಿ ನಿಗಮದ ಹಗರಣದ ಹಣ ಕಾಂಗ್ರೆಸ್ ಪಕ್ಷ ಮತ್ತು ಚುನಾವಣೆಗೆ ಬಳಕೆಯಾಗಿದೆ. ಮುಡಾ ಹಗರಣದಲ್ಲಿ ಸಿಎಂ ಪಾತ್ರ ಇದೆ. ಅದನ್ನು ಕೋರ್ಟ್‌ಗಳು, ಇ.ಡಿ ಯವರು ಹೇಳಿದ್ದಾರೆ. ಕಾನೂನು ಬಾಹಿರವಾಗಿ ಸಿಎಂ ಕುಟುಂಬ ಸೈಟ್ ಪಡೆದಿದೆ. ಸೈಟ್ ವಾಪಸ್ ಕೊಟ್ಟಿರುವುದು ಸಿಎಂ ಅಪರಾಧ ಮಾಡಿರೊದಕ್ಕೆ ಸಾಕ್ಷಿ ಎಂದಿದ್ದಾರೆ.

ADVERTISEMENT

ಮೈಸೂರಿನಲ್ಲಿ ಮುಡಾ ಹಗರಣದ ಬಗ್ಗೆ ಮಾತನಾಡಿರುವ ಮೈಸೂರು ಕೊಡಗು ಸಂಸದ ಯದುವೀರ್‌‌ ಮಾತನಾಡಿ, ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು. ಮುಡಾ ಹಗರಣದ ವಿರುದ್ಧ ಬಿಜೆಪಿ ನಿರಂತರ ಹೋರಾಟ ನಡೆಸುತ್ತಾ ಬಂದಿದೆ. ಬೆಂಗಳೂರಿನಿಂದ ಮೈಸೂರಿ‌ನವರೆಗೆ ಬಿಜೆಪಿ ಪಕ್ಷದಿಂದ ಪಾದಯಾತ್ರೆ ‌ನಡೆಸಲಾಗಿತ್ತು. ಇದೀಗ ಮುಡಾ ಮೇಲೆ ಇಡಿ ದಾಳಿ ‌ನಡೆದಿದೆ. ನಿಷ್ಪಕ್ಷಪಾತ ತನಿಖೆಯ ದೃಷ್ಟಿಯಿಂದ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಈ ಬಗ್ಗೆ ರಾಜ್ಯಪಾಲರಿಗೂ ಮನವಿ ಸಲ್ಲಿಸುತ್ತೇವೆ ಎಂದಿದ್ದಾರೆ.

ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಮಾತನಾಡಿ, ಇಡಿ ಅಧಿಕಾರಿಗಳು ಭೈರತಿ ಸುರೇಶ್ ಮನೆ ಮೇಲೆ ದಾಳಿ ಮಾಡಬೇಕು. ಭೈರತಿ ಸುರೇಶ್ ಮನೆಯಲ್ಲಿ ದಾಖಲೆಗಳು ಸಿಗುತ್ತವೆ. ಇಡಿ ಇಲಾಖೆ ಅಧಿಕಾರಿಗಳು ಈ ಪ್ರಕರಣವನ್ನ ತಾರ್ಕಿಕ ಅಂತ್ಯಕ್ಕೆ ಕೊಂಡೋಯ್ಯುತ್ತಾರೆ. 50:50 ಅನುಪಾತದಲ್ಲಿ ಹಂಚಿಕೆ ಮಾಡಿರುವ ಎಲ್ಲಾ ನಿವೇಶನಗಳನ್ನ ವಾಪಸ್ ಪಡೆಯಬೇಕು. ಸೂರು ಇಲ್ಲದ ಜನತೆಗೆ ಈ ನಿವೇಶನಗಳನ್ನ ನೀಡಬೇಕು ಎಂದು ಆಗ್ರಹ ಮಾಡಿದ್ದಾರೆ. ಇನ್ನು ಮುಡಾದಲ್ಲಿ ಯಾರೇ ತಪ್ಪು ಮಾಡಿದ್ರು ಶಿಕ್ಷೆ ಆಗಲಿ, ಮುಡಾದಲ್ಲಿ ಶಾಸಕರ ಸದಸ್ಯತ್ವ ರದ್ದು ಮಾಡುವ ಸರ್ಕಾರದ ನಿರ್ಧಾರವನ್ನ ಸ್ವಾಗತ ಮಾಡುತ್ತೇವೆ. ಆದರೆ ಮುಡಾಗೆ ದಕ್ಷ ಹಾಗೂ ಅನುಭವವುಳ್ಳ ಅಧಿಕಾರಿಯನ್ನ ನೇಮಕ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಬಸನಗೌಡ ಪಾಟೀಲ್‌ ಯತ್ನಾಳ್‌, ಸಿದ್ದರಾಮಯ್ಯ ಮೊದಲೇ ರಾಜೀನಾಮೆ ಕೊಡಬೇಕಿತ್ತು. ನೈತಿಕ ಹೊಣೆ ಹೊತ್ತು ಈಗಲಾದ್ರೂ ರಾಜೀನಾಮೆ ಕೊಡಲಿ. ಮುಡಾ ಹಗರಣದಲ್ಲಿ ಆರೋಪ ಮುಕ್ತ ಆದ ಮೇಲೆ ಸಿಎಂ ಆಗಿ ವಾಪಸ್ ಬರಲಿ ಎಂದು ಸಲಹೆ ನೀಡಿದ್ದಾರೆ. ಒಂದೇ ಒಂದು ಕಪ್ಪು ಚುಕ್ಕೆ ಇಲ್ಲಾ ಎಂದಿದ್ದ ಸಿಎಂ ಸಿದ್ದರಾಮಯ್ಯ, ಮತ್ತೆ ಈಗ ಮುಡಾ ಹಗರಣ ಯಾಕೆ ಮಾಡಿದ್ರು ? ಆರೋಪ ಮಾಡಿದಾಗಲೇ ಸೈಟ್‌ ವಾಪಸ್‌ ಕೊಟ್ಟಿದ್ರೆ ಮುಗಿದು ಬಿಡ್ತಿತ್ತು. ಈಗ ನೈತಿಕ ಹೊಣೆ ಹೊತ್ತು, ರಾಜೀನಾಮೆ ಕೊಟ್ಟು ಮುಕ್ತ ಆಗಬೇಕು ಎಂದು ಆಗ್ರಹ ಮಾಡಿದ್ದಾರೆ.

Tags: cm siddaramaiah in muda scamcm siddaramaiah wife in muda scamkarnataka muda scamMUDAmuda land scamMuda Scammuda scam casemuda scam cm siddaramaiahmuda scam explainedmuda scam iasmuda scam in karnatakamuda scam livemuda scam mysoremuda scam newsmuda scam probemuda scam upscmuda site scammulti crore scam in mudasiddaramaiah muda casesiddaramaiah muda scamwhat is muda scam₹4000 crore scam in muda
Previous Post

ಆನ್‌ಲೈನ್‌ ವ್ಯವಹಾರ.. ಸಾಗಾಟದ ವೆಚ್ಚಕ್ಕೆ ಸೆಸ್‌ ಹಾಕುತ್ತಂತೆ ಸರ್ಕಾರ

Next Post

ಕೇಂದ್ರ ಸಚಿವ ಜೋಶಿ ರಾಜೀನಾಮೆ ಯಾವಾಗ..? ಖಂಡ್ರೆ ಪ್ರಶ್ನೆ

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
Next Post
ಕೇಂದ್ರ ಸಚಿವ ಜೋಶಿ ರಾಜೀನಾಮೆ ಯಾವಾಗ..? ಖಂಡ್ರೆ ಪ್ರಶ್ನೆ

ಕೇಂದ್ರ ಸಚಿವ ಜೋಶಿ ರಾಜೀನಾಮೆ ಯಾವಾಗ..? ಖಂಡ್ರೆ ಪ್ರಶ್ನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada