
ಸಿಎಂ ಸಿದ್ದರಾಮಯ್ಯ ದಸರಾ ಉದ್ಘಾಟನೆಯಲ್ಲಿ ಪಾಲ್ಗೊಳ್ಳುವ ಹೊತ್ತಿನಲ್ಲಿ, ಸಿಎಂ ಪತ್ನಿ ಪಾರ್ವತಿ ಸಿದ್ದರಾಮಯ್ಯನವರಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಹಂಚಿಕೆ ಮಾಡಿದ್ದ 14 ನಿವೇಶನಗಳ ಮಹಜರು ಗುರುವಾರದಿಂದ ನಡೆಯಲಿದೆ.

ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೂ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದ್ದು, ಇಂದು ಅವರು ವಿಚಾರಣೆಗೆ ಹಾಜರಾಗಲಿದ್ದಾರೆ. ಲೋಕಾಯುಕ್ತ ತನಿಖಾ ತಂಡ ಈಗಾಗಲೇ ಕೆಸರೆ ಗ್ರಾಮದ 3.16 ಎಕರೆ ಜಾಗದ ಮಹಜರು ಕಾರ್ಯ ಪೂರ್ಣಗೊಳಿಸಿದೆ.










