
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಪ್ರಕರಣದಲ್ಲಿ ಮೊದಲ ವಿಕೆಟ್ ಪತನವಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಿಂದಿನ ಆಯುಕ್ತ ಜಿ.ಟಿ ದಿನೇಶ್‌ಕುಮಾರ್ ಅವರನ್ನು ಸಮಾನತುಗೊಳಿಸಿ ಸರ್ಕಾರ
ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.
ಮೂಡಾ ಹಗರಣದಲ್ಲಿ ದಿನೇಶ್ ಕುಮಾರ್ ಮೇಲೆ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಅಮಾನತ್ತು ಮಾಡಿ ಸರ್ಕಾರ ಆದೇಶಿಸಿದೆ

ಮುಡಾ ಹಗರಣದ ಆರೋಪ ಹೊತ್ತಿರುವ ಮಧ್ಯ ಆಯುಕ್ತರಾಗಿದ್ದ ದಿನೇಶ್ ಕುಮಾರ್ ಅವರನ್ನು ರಾಜ್ಯ ಸರ್ಕಾರ, ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರಾಗಿ ಸರ್ಕಾರ ವರ್ಗಾಯಿಸಿತ್ತು. ಆದ್ರೆ, ಇದೀಗ ರಾಜ್ಯಪಾಲರ ಆದೇಶಾನುಸಾರವಾಗಿ ದಿನೇಶ್ ಕುಮಾರ್ ಅವರನ್ನ ಅಮಾನತುಗೊಳಿಸಲಾಗಿದೆ. ಸಸ್ಪೆಂಡ್ ಮಾಡಿ ಕಾರ್ಯದರ್ಶಿ ಉಮಾದೇವಿ ಅವರು ಇಂದು ಆದೇಶ ಹೊರಡಿಸಿದ್ದಾರೆ.ಮುಡಾ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆ ನಡೆಯುತ್ತಿದ್ದರೂ ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರನ್ನಾಗಿ ನೇಮಕ ಮಾಡಿರುವ ರಾಜ್ಯ ಸರಕಾರದ ಕ್ರಮದ ವಿರುದ್ಧ ಬಿಜೆಪಿ ಭಾರಿ ಆಕ್ರೋಶ ವ್ಯಕ್ತಪಡಿಸಿತ್ತು. ಅಲ್ಲದೆ ಕೂಡಲೇ ಅವರ ನೇಮಕ ಆದೇಶವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿತ್ತು.ಮುಡಾ ಮಾಜಿ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಹಾಗೂ ಜಿ.ಟಿ.ದಿನೇಶ್ ಕುಮಾರ್ ಅವರು ಸರಕಾರಕ್ಕೆ 5 ಸಾವಿರ ಕೋಟಿ ರೂಪಾಯಿ ನಷ್ಟ ಉಂಟು ಮಾಡಿದ್ದಾರೆ. ಇವರಿಬ್ಬರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ವಕೀಲ ಅರುಣ್‌ಕುಮಾರ್ ಎನ್ನುವರು ಮೈಸೂರಿನ ಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.