
ಮೈಸೂರು: ಮುಡಾ 50:50 ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ನವೆಂಬರ್ 6 ರಂದು ಲೋಕಾಯುಕ್ತ ಪೊಲೀಸರ ಎದುರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.
ನವೆಂಬರ್ 6ರ ಬೆಳಗ್ಗೆ 10.30ಕ್ಕೆ ಲೋಕಾಯುಕ್ತ ಎಸ್‌ಪಿ ಉದೇಶ್ ಎದುರು ಹಾಜರಾಗುವಂತೆ ಲೋಕಾಯುಕ್ತ ಎಸ್‌ಪಿ ಟಿ.ಜೆ ಉದೇಶ್ ಅವರು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ 50:50 ಹಗರಣದಲ್ಲಿ ಈಗಾಗಲೇ A2, A3, A4 ವಿಚಾರಣೆ ಮಾಡಲಾಗಿದೆ.

ಕಳೆದ ವಾರ A2 ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ವಿಚಾರಣೆ ಮುಕ್ತಾಯ ಆಗಿದೆ. A3 ಸಿದ್ದರಾಮಯ್ಯ ಅವರ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು A4 ಭೂಮಿ ಮಾರಿದ ದೇವರಾಜು ಅವರನ್ನು ಒಟ್ಟಿಗೆ ಕರೆದು ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸಿದ್ದರು.

ಇದೀಗ ಮುಡಾ ಹಗರಣದಲ್ಲಿ A1 ಆಗಿರುವ ಸಿದ್ದರಾಮಯ್ಯಗೆ ನೋಟಿಸ್ ಜಾರಿ ಮಾಡಲಾಗಿದೆ. ಖುದ್ದು ಲೋಕಾಯುಕ್ತ ಪೊಲೀಸ್ರ ಎದುರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ ಉಲ್ಲೇಖ ಮಾಡಲಾಗಿದೆ.