
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಡಾ ಹಗರಣ (Muda Scam) ತೀವ್ರ ಕೋಲಾಹಲ ಎಬ್ಬಿಸಿದೆ. ರಾಜ್ಯಪಾಲರು (Governor) ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ತನಿಖೆ ನಡೆಸುವಂತೆ ಆದೇಶ ನೀಡಿದ್ದರು. ಇದಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರ ಪ್ರಾಸಿಕ್ಯೂಶನ್ (Prosecution) ಆದೇಶ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದ್ದರು.

ಹೈಕೋರ್ಟ್ (High Court) ಕೂಡ ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿದಿತ್ತು. ಆ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ನೀಡಿತ್ತು. ಸಿಎಂ ಸಿದ್ದರಾಮಯ್ಯ ಕೂಡ ರಾಜ್ಯಪಾಲರು ಸಂವಿಧಾನ ಬಾಹಿರವಾಗಿ ಕೆಲಸ ಮಾಡ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು. ಸದ್ಯ ಈ ಎಲ್ಲಾ ಘಟನೆಗಳು ನಡೆದ ಬೆನ್ನಲ್ಲೆ ಇಂದು ಸಿಎಂ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮುಖಾಮುಖಿಯಾಗಿದ್ದಾರೆ.
ಸಿಎಂ-ರಾಜ್ಯಪಾಲರ ಮುಖಾಮುಖಿ.
ಮುಡಾ ಹಗರಣದ ಸಂದರ್ಭದಲ್ಲಿ ರಾಜ್ಯಪಾಲರು ಸಂವಿಧಾನ ಬದ್ಧವಾಗಿ ಸ್ಥಾಪಿತವಾಗಿರುವ ಸರ್ಕಾರವನ್ನು ಅಸ್ಥಿರಗೊಳಿಸಲು ರಾಜ್ಯಪಾಲರು ಪ್ರಯತ್ನಿಸಿದ್ದಾರೆ ಎಂದು ಸಿದ್ದರಾಮಯ್ಯ ರಾಜ್ಯಪಾಲರ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ್ದರು. ರಾಜ್ಯಪಾಲರ ವಿರುದ್ದ ರಾಜಕೀಯ ದಾಳಿ ನಡೆಸಲಾಗಿತ್ತು. ಸದ್ಯ ಈ ಘಟನೆಯ ಬೆನ್ನಲ್ಲೆ ಇಂದು (ಅಕ್ಟೋಬರ್ 9ರಂದು) ರಾಜಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪರಸ್ಪರ ಮುಖಾಮುಖಿಯಾಗಿದ್ದಾರೆ.