
ಎಂಎಲ್ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ ನೀಡಿದ್ದಾರೆ.ಮುಡಾ ಹಗರಣ ಪ್ರಕರಣದಲ್ಲಿ ಹಾಲಿ, ಮಾಜಿ ಶಾಸಕರ ಹೆಸರು ಪ್ರಸ್ತಾಪ ಹಿನ್ನೆಲೆ. ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕರಿಂದ ಸುದ್ದಿಗೋಷ್ಠಿ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ. ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಕೆ ಮರೀಗೌಡ, ಶಾಸಕರಾದ ಕೆ ಹರೀಶ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಎಂಎಲ್ ಸಿ ಡಾ ತಿಮ್ಮಯ್ಯ, ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ರು.

ದೇವನೂರು 3ನೇ ಹಂತದ ಬದಲು ಮುಖ್ಯರಸ್ತೆಯಲ್ಲಿ ಎಚ್.ವಿಶ್ವನಾಥ್ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಅವರು ಈಗ ರಾಜಕೀಯವಾಗಿ ದಿವಾಳಿಯಾಗಿದ್ದಾರೆ. ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮುಡಾ ಅಧ್ಯಕ್ಷ ಕೆ.ಮರೀಗೌಡ ಟೀಕೆ ಮಾಡಿದ್ರು.ಮುಡಾದಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಇದೀಗ ತನಿಖೆ ನಡೆಯುತ್ತಿದೆ. ಸಚಿವ ಭೈರತಿ ಸುರೇಶ್ ಸೂಚನೆ ಮೇರೆಗೆ ತನಿಖೆ ನಡೆಯುತ್ತಿದೆ. ಕೂಲಂಕುಷವಾಗಿ ತನಿಖೆ ನಡೆಯಲಿದೆ. ಈ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಎಚ್ ವಿಶ್ವನಾಥ್ ಕೀಳುಮಟ್ಟದ ರಾಜಕಾರಣ ಮಾಡೋದನ್ನು ಬಿಡಬೇಕು. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ ನೀಡಿದ್ರು.