• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೂರು ರಾಜಕೀಯ ಪಕ್ಷಗಳಲ್ಲಿ ಪ್ರಮಾಣಿಕರೇ ಅಸ್ಪೃಶ್ಯರು: ಮುಖ್ಯಮಂತ್ರಿ ಚಂದ್ರು

ಪ್ರತಿಧ್ವನಿ by ಪ್ರತಿಧ್ವನಿ
June 7, 2022
in ಕರ್ನಾಟಕ, ರಾಜಕೀಯ
0
ಮೂರು ರಾಜಕೀಯ ಪಕ್ಷಗಳಲ್ಲಿ ಪ್ರಮಾಣಿಕರೇ ಅಸ್ಪೃಶ್ಯರು: ಮುಖ್ಯಮಂತ್ರಿ ಚಂದ್ರು
Share on WhatsAppShare on FacebookShare on Telegram

ರಾಜ್ಯದಲ್ಲಿರುವ ಮೂರು ರಾಜಕೀಯ ಪಕ್ಷಗಳಲ್ಲಿ ಪ್ರಮಾಣಿಕರೇ ಅಸ್ಪೃಶ್ಯರು ಎಂದು ಆಮ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಟ ಹಾಗೂ ಮಾಜಿ ವಿಧಾನ ಪರಿಷತ್‌ ಸದಸ್ಯ ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ ಮಂಗಳವಾರ ಆಪ್‌ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳಲ್ಲಿ ಪ್ರಾಮಾಣಿಕರು ಅಸ್ಪೃಶ್ಯರಾಗಿದ್ದಾರೆ. ಮೂರು ಪಕ್ಷಗಳಿಂದ ರಾಜ್ಯದ ಜನತೆಗೆ ದ್ರೋಹವಾಗಿದೆ. ಮುಂದೆಯೂ ದ್ರೋಹ ಮಾಡಲು ಹವಣಿಕೆ ಮಾಡುತ್ತಿವೆ ಎಂದರು.

ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ಕೇವಲ ವಿಸರ್ಜನೆ ಮಾಡಿದರೆ ಸಾಲದು. ಈಗಿ ಪರಿಷ್ಕರಣೆಯನ್ನು ಹಿಂಪಡೆದು, ಚುನಾವಣೆವರೆಗೂ ಹಳೆಯ ಪಠ್ಯಕ್ರಮವನ್ನೇ ಮುಂದುವರಿಸಬೇಕು. ಬೇರೆ ಪಕ್ಷಗಳಲ್ಲಿ ಮೂಲೆಗುಂಪಾಗಿರುವ ಸಹೃದಯದಿ ಹಾಗೂ ಪ್ರಾಮಾಣಿಕರು ನಾಯಕರು ಹೆಚ್ಚಿನ ಸಂಖ್ಯೆಯಲ್ಲಿ ಆಮ್‌ ಆದ್ಮಿ ಪಾರ್ಟಿ ಸೇರಬೇಕು ಎಂದು ಕರೆ ನೀಡಿದರು.

ಆಮ್‌ ಆದ್ಮಿ ಪಾರ್ಟಿಯು ದೇಶದ ರಾಜಕೀಯವನ್ನು ಸರಿದಾರಿಗೆ ತರುತ್ತಿದೆ. ಬೇರೆಲ್ಲ ಪಕ್ಷಗಳು ಶಿಕ್ಷಣ – ಆರೋಗ್ಯ ಕ್ಷೇತ್ರಗಳನ್ನು ನಿರ್ಲಕ್ಷ್ಯಿಸಿದರೆ, ಆಮ್‌ ಆದ್ಮಿ ಪಾರ್ಟಿ ಸರ್ಕಾರವು ಇವುಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ. ಈ ಮೂಲಕ ಸಮಾಜದ ಭವಿಷ್ಯವನ್ನು ಬಲಪಡಿಸುತ್ತಿದೆ. ಕರ್ನಾಟಕದಲ್ಲಿ ಎಎಪಿ ಅಧಿಕಾರ ಬಂದು ಇಲ್ಲಿ ಕೂಡ ಪಾರದರ್ಶಕ ಹಾಗೂ ಜನಪರ ಆಡಳಿತ ನೀಡಿ ಜನ ನೆಮ್ಮದಿಯಿಂದ ಬದುಕುವಂತಹ ವಾತಾವರಣ ಮೂಡಬೇಕಿದೆ” ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಮುಖ್ಯಮಂತ್ರಿ ಚಂದ್ರುರವರನ್ನು ಪಕ್ಷಕ್ಕೆ ಬರಮಾಡಿಕೊಂಡ ನಂತರ ಮಾತನಾಡಿದ ಆಪ್‌ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, “ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಸತತ ನಲವತ್ತಕ್ಕೂ ಹೆಚ್ಚು ವರ್ಷಗಳ ಕಾಲ ಮುಖ್ಯಮಂತ್ರಿ ನಾಟಕದ ಮೂಲಕ ರಾಜಕೀಯ ಕ್ಷೇತ್ರವನ್ನು ಶುದ್ಧೀಕರಣ ಮಾಡುವ ದಿಶೆಯಲ್ಲಿ ಚಂದ್ರುರವರು ಸಾಕಷ್ಟು ಶ್ರಮಿಸಿದ್ದಾರೆ ” ಎಂದು ಹೇಳಿದರು.

ರಾಜ್ಯ ಉಪಾಧ್ಯಕ್ಷ ಭಾಸ್ಕರ್‌ ರಾವ್‌ ಮಾತನಾಡಿ, “ಕನ್ನಡಕ್ಕಾಗಿ ಜೀವನವನ್ನು ಮುಡಿಪಾಗಿಟ್ಟಿರುವ ಮುಖ್ಯಮಂತ್ರಿ ಚಂದ್ರುರವರು ಕನ್ನಡ ನಾಡಿನಾದ್ಯಂತ ಆಮ್‌ ಆದ್ಮಿ ಪಾರ್ಟಿಯ ಸಾಧನೆಗಳನ್ನು ಪ್ರಚಾರ ಮಾಡಲು ಸಮ್ಮತಿ ಸೂಚಿಸಿರುವುದು ಪಕ್ಷದ ಸೌಭಾಗ್ಯ. ಎಎಪಿಯ ʻಪ್ರಚಾರ ರಾಯಭಾರಿʼ ಆಗಿ ಚಂದ್ರುರವರು ಶಿಕ್ಷಣ, ಆರೋಗ್ಯ, ಮೂಲಸೌಕರ್ಯ ಮುಂತಾದ ಕ್ಷೇತ್ರಗಳಲ್ಲಿ ದೆಹಲಿಯ ಕೇಜ್ರಿವಾಲ್‌ ಸರ್ಕಾರ ಮಾಡಿರುವ ಸಾಧನೆಯನ್ನು ಜನರಿಗೆ ತಲುಪಿಸಲಿದ್ದಾರೆ. ಚಂದ್ರುರವರ ಅನುಭವಿ ವ್ಯಕ್ತಿತ್ವವು ಪಕ್ಷದ ಸ್ವಚ್ಛ, ಪಾರದರ್ಶಕ, ಪ್ರಾಮಾಣಿಕ ಸಿದ್ಧಾಂತಗಳ ಕುರಿತು ಜನರಲ್ಲಿ ಅರಿವು ಮೂಡಿಸಲು ನೆರವಾಗಲಿದೆ ಎಂದು ಹೇಳಿದರು.

ಸೇರ್ಪಡೆ ಸಮಾರಂಭದಲ್ಲಿ ಆಮ್‌ ಆದ್ಮಿ ಪಾರ್ಟಿ ಮುಖಂಡರಾದ ಕೆ.ಮಥಾಯಿ, ವಿಜಯ್ ಶರ್ಮಾ, ಶಾಂತಲಾ ದಾಮ್ಲೆ, ಮೋಹನ್ ದಾಸರಿ, ಜಗದೀಶ್ ವಿ. ಸದಂ, ಸುರೇಶ್ ರಾಥೋಡ್, ಬಿ. ಟಿ. ನಾಗಣ್ಣ, ಜಗದೀಶ್ ಚಂದ್ರ ಸೇರಿದಂತೆ ಅನೇಕ ನಾಯಕರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಿನಲ್ಲಿ ಹಿಜ್ಬುಲ್‌ ಉಗ್ರ ಅರೆಸ್ಟ್:‌ ಜಮ್ಮು ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ!

Next Post

ಬೆಂಗಳೂರಿನಲ್ಲಿ ಉಗ್ರನ ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು: ಸಿಎಂ ಬೊಮ್ಮಾಯಿ

Related Posts

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ
ಕರ್ನಾಟಕ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

by ಪ್ರತಿಧ್ವನಿ
April 16, 2026
0

ರಾಜ್ಯ ನ್ಯಾಯಾಂಗ ವ್ಯವಸ್ಥೆಯಲ್ಲಿ ಭಾರೀ ಮಟ್ಟದ ಬದಲಾವಣೆ ನಡೆಯಿದ್ದು, ಒಟ್ಟು 114 ಜಿಲ್ಲಾ ನ್ಯಾಯಾಧೀಶರನ್ನು ವರ್ಗಾವಣೆ ಮಾಡಲಾಗಿದೆ. ಈ ಮಹತ್ವದ ಆದೇಶವನ್ನು ಹೈಕೋರ್ಟ್ ಹೊರಡಿಸಿದ್ದು, ವಿವಿಧ ಹಂತಗಳ...

Read moreDetails
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
Next Post
ಬೆಲೆ ಏರಿಕೆ ಖಂಡಿಸಿ ಪ್ರತಿಭಟಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ ಉಗ್ರನ ಬಂಧಿಸಿದ ಜಮ್ಮು ಕಾಶ್ಮೀರ ಪೊಲೀಸರಿಗೆ ಅಗತ್ಯ ನೆರವು: ಸಿಎಂ ಬೊಮ್ಮಾಯಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada