ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ಮುಖಂಡ ಹಾಗೂ ನಟ ಮುಖ್ಯಮಂತ್ರಿ ಚಂದ್ರು ಇದೀಗ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಇಂದು ಮಂಗಳವಾರ ಬೆಳಗ್ಗೆ 11:30ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಸಮ್ಮುಖದಲ್ಲಿ ಮುಖ್ಯಮಂತ್ರಿ ಚಂದ್ರು ಅವರು ಸೇರ್ಪಡೆಯಾಗಲಿದ್ದಾರೆ.

ಕರ್ನಾಟಕದ ‘ಮುಖ್ಯಮಂತ್ರಿ’ ಈಗ ಆಮ್ ಆದ್ಮಿ. ನಮ್ಮ ಕುಟುಂಬಕ್ಕೆ ಸ್ವಾಗತ ಮುಖ್ಯಮಂತ್ರಿಗಳೇ, ಎಂದು ಎಎಪಿ ಟ್ವೀಟ್ ಮಾಡಿದೆ. ಜತೆಗೆ ಚಂದ್ರು ಅವರ ಪಕ್ಷ ಸೇರ್ಪಡೆ ಕಾರ್ಯಕ್ರಮದ ಫೇಸ್ಬುಕ್ ನೇರ ಪ್ರಸಾರದ ಲಿಂಕ್ ಅನ್ನು ಹಂಚಿಕೊಂಡಿದೆ.





