ಪುಣೆ: ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟದಲ್ಲಿ ಹತ್ತಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಘಟನೆ ಮಾಸುವ ಮುನ್ನವೇ ದೇಶದಲ್ಲಿ ಮತ್ತೊಂದು ದೊಡ್ಡ ಅವಘಡ ನಡೆದಿದೆ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ನಿನ್ನೆ ಭೀಕರ ಅಪಘಾತ ನಡೆದಿದ್ದು, ಏಳು ಜನರು ಸಾವನ್ನಪ್ಪಿದ್ದಾರೆ.

ಪುಣೆ-ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯ ಬಳಿ ಕಂಟೇನರ್ ಟ್ರಕ್‌ವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಸಾಲು ಸಾಲು ವಾಹನಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತಿದ್ದಂತೆ ಬೆಂಕಿ ಜ್ವಾಲೆ ಹೆದ್ದಾರಿಯ ಸುತ್ತಲೂ ಆವರಿಸಿದೆ.

ಘಟನೆಯಲ್ಲಿ ಏಳು ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ಇನ್ನು ಈ ಅಪಘಾತದಲ್ಲಿ ಬೈಕ್‌ಗಳು ಕಾರು ಸೇರಿದಂತೆ ಎರಡು ದೊಡ್ಡ ಕಂಟೇನರ್‌ಗಳು ಬೆಂಕಿಗೆ ಆಹುತಿಯಾಗಿವೆ ಎಂದು ವರದಿಯಾಗಿದೆ.

