ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ೫ ಬಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಸತತ ೨ ಗೆಲುವು ಸಾಧಿಸಿ ಹ್ಯಾಟ್ರಿಕ್ ಗೆಲುವಿನ ಗುರಿ ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಶನಿವಾರ ನಡೆಯುವ ಐಪಿಎಲ್ ಪಂದ್ಯದಲ್ಲಿ ಮುಖಾಮುಖಿ ಆಗುತ್ತಿವೆ.
ಪುಣೆಯಲ್ಲಿ ಶನಿವಾರ ನಡೆಯಲಿರುವ ಪಂದ್ಯ ಮುಂಬೈ ಪಾಲಿಗೆ ಮಹತ್ವದ್ದಾಗಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ಮುಂಬೈ ಗೆಲುವಿನ ಖಾತೆ ತೆರೆಯಬೇಕಾದ ಒತ್ತಡದಲ್ಲಿದೆ. ತಂಡ ಎಲ್ಲಾ ವಿಭಾಗಗಳಲ್ಲೂ ಎಡವುತ್ತಿರುವುದು ನಾಯಕ ರೋಹಿತ್ ಶರ್ಮಗೆ ತಲೆನೋವಾಗಿದೆ.

ಮತ್ತೊಂದೆಡೆ ಮೊದಲ ಪಂದ್ಯದಲ್ಲಿ ಸೋಲುಂಡರೂ ನಂತರದ ಎರಡೂ ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಆರ್ ಸಿಬಿ ಹ್ಯಾಟ್ರಿಕ್ ಗೆಲುವಿನ ಗುರಿ ಹೊಂದಿದೆ.
ತಂಡದಲ್ಲಿ ನಾಯಕ ಫಾಫ್ ಡು ಪ್ಲೆಸಿಸ್ ಫಾರ್ಮ್ ನಲ್ಲಿದ್ದು ತಂಡವನ್ನು ಉತ್ತಮವಾಗಿ ಮುನ್ನಡೆಸುತ್ತಿದ್ದರೆ, ದಿನೇಶ್ ಕಾರ್ತಿಕ್ ಪಂದ್ಯದ ದಿಕ್ಕು ಬದಲಿಸಿ ಆರ್ ಸಿಬಿಗೆ ಎರಡೂ ಗೆಲುವಿನಲ್ಲೂ ಮಹತ್ವದ ಪಾತ್ರ ವಹಿಸಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಗ್ಲೆನ್ ಮ್ಯಾಕ್ಸ್ ವೆಲ್ ನಿರೀಕ್ಷೆಗೆ ತಕ್ಕಂತೆ ಇನ್ನೂ ಆಡದೇ ಇರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.













