
ಬೆಂಗಳೂರಿನ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿದ್ದ ಜಾತಿನಿಂದನೆ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಪ್ರಕರಣ ರದ್ದು ಕೋರಿ ಶಾಸಕ ಮುನಿರತ್ನ ಸಲ್ಲಿಸಿದ್ದ ಅರ್ಜಿ ವಿಚಾರಣೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ನಡೀತು. ಶಾಸಕ ಮುನಿರತ್ನ ಪರವಾಗಿ ಹಿರಿಯ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ರು.
ಸಿಐಡಿ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿಗೆ ಪೊಲೀಸ್ ಠಾಣೆ ಮಾನ್ಯತೆ ಇಲ್ಲ. ತನಿಖೆ ನಡೆಸಲು 17A ಅನುಮತಿ ಪಡೆದಿಲ್ಲ. ತನಿಖಾ ವರದಿಯನ್ನ ಕೋರ್ಟ್ಗೆ ಸಲ್ಲಿಸಲು ಅವಕಾಶ ಇಲ್ಲ ಎಂದು ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದ್ರು. ಸರ್ಕಾರದ ಪರವಾಗಿ ಎಸ್ಪಿಪಿ ಪ್ರದೀಪ್ ವಾದ ಮಾಡಿದ್ರು. ತನಿಖೆ ನಡೆಸಲು 17A ಅಡಿ ಅನುಮತಿ ಕೇಳಲಾಗಿದೆ. ಆದರೆ ಇನ್ನೂ ಅನುಮತಿ ಸಿಕ್ಕಿಲ್ಲ. ಸಿಐಡಿಗೆ ಪೊಲೀಸ್ ಠಾಣೆ ಮಾನ್ಯತೆ ನೀಡಿ ಗೃಹ ಇಲಾಖೆ ಆದೇಶ ನೀಡಿದೆ ಎಂದಿದ್ದಾರೆ.

ಈ ವೇಳೆ ಎಸ್ಐಟಿಗೆ ಪೊಲೀಸ್ ಸ್ಟೇಷನ್ ಮಾನ್ಯತೆ ಇದ್ಯಾ..? ಎಂದು ಜಡ್ಜ್ ಪ್ರಶ್ನೆ ಮಾಡಿದ್ದಾರೆ. ಎಸ್ಐಟಿ ಅಧಿಕಾರಿಗಳನ್ನು ಒಳಗೊಂಡ ತಂಡ ಮಾಡಲಾಗಿದೆ. ಎಸ್ಐಟಿ ಮುಖ್ಯಸ್ಥರಾಗಿ ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್ ಇದ್ದಾರೆ. ಹೀಗಾಗಿ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಕೆಗೆ ಅವಕಾಶ ಇದೆ ಎಂದು ಎಸ್ಪಿಪಿ ವಾದ ಮಾಡಿದ್ದಾರೆ. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದ್ದಾರೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ.