
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸೇರಿರುವ ನಟ ದರ್ಶನ್ ಜೈಲಿನಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಜೈಲಿನಲ್ಲಿ ಕುಳಿತು ದರ್ಶನ್ ಒಂದು ಕೈಯಲ್ಲಿ ಕಾಫಿ ಮಗ್, ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದುಕೊಂಡಿರುವ ಫೋಟೋ ಸಖತ್ ವೈರಲ್ ಆಗುತ್ತಿದೆ.
ಇದರ ಜೊತೆಗೆ ದರ್ಶನ್ ಯುವಕನೊಬ್ಬ ಜೊತೆ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದ ದೃಶ್ಯ ಕೂಡ ಲೀಕ್ ಆಗಿತ್ತು. ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಗೃಹಸಚಿವ ಡಾ. ಜಿ.ಪರಮೇಶ್ವರ್, ಜೈಲಿನ ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.
”ಈ ಪ್ರಕರಣದಲ್ಲಿ 7 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿದ್ದೇವೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಪದೇ ಪದೇ ಈ ರೀತಿಯ ಘಟನೆ ನಡೆಯಬಾರದು. ಜೈಲಿನ ಮೇಲಾಧಿಕಾರಿಗಳನ್ನು ಟ್ರಾನ್ಸ್ಫಾರ್ ಮಾಡುತ್ತೇವೆ. ಎಲ್ಲಾ ಬಂಧಿಕಾನೆಗಳಲ್ಲಿ ಸಿಸಿಟಿವಿ ಹಾಕುತ್ತಿದ್ದೇವೆ. ಜಾಮರ್ ಕೂಡ ಅಳವಡಿಸುತ್ತಿದ್ದೇವೆ. ಆದಾಗ್ಯೂ ಈ ರೀತಿಯ ಘಟನೆಗಳು ನಡೆಯುತ್ತಿದೆ’ ಎಂದು ಗೃಹ ಸಚಿವ ಪರಮೇಶ್ವರ್ ಬೇಸರ ಹೊರಹಾಕಿದ್ದಾರೆ. ಜೈಲಿನಲ್ಲಿ ದರ್ಶನ್ಗೆ ಚಿಕನ್ ಬಿರಿಯಾನಿ ಕೊಡುತ್ತಿರುವ ಆರೋಪವನ್ನು ಗೃಹಸಚಿವರು ತಳ್ಳಿ ಹಾಕಿದ್ದಾರೆ. ದರ್ಶನ್ಗೆ ಜೈಲಿನಲ್ಲಿ ಚಿಕನ್ ಬಿರಿಯಾನಿ ಕೊಟ್ಟಿಲ್ಲ. ಜೈಲಿನ ನಿಯಮದಂತೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಸಸ್ಪೆಂಡ್ ಆದವರು ಯಾರು?
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಜೈಲರ್ಗಳಾದ ಶರಣಬಸವ ಅಮೀನ್ಗಢ, ಖಂಡೇವಾಲ್, ಸಹಾಯಕ ಜೈಲರ್ಗಳಾದ ಪುಟ್ಟಸ್ವಾಮಿ, ಶ್ರೀಕಾಂತ್ ತಲವಾರ್, ಜೈಲಿನ ಹೆಡ್ ವಾರ್ಡರ್ಗಳಾದ ವೆಂಕಪ್ಪ, ಸಂಪತ್ ಮತ್ತು ವಾರ್ಡರ್ ಬಸಪ್ಪ ಅವರನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.