
ಕೊರಿಯಾ:ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯ ಪಾಟ್ನಾ ಪೊಲೀಸ್ ಠಾಣೆ( Patna Police Station)ವ್ಯಾಪ್ತಿಯ ಅರಣ್ಯದಿಂದ 7ನೇ ತರಗತಿ ವಿದ್ಯಾರ್ಥಿಯ (student)ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಶವ ಪತ್ತೆಯಾದ ಸ್ಥಳವು ಮೃತನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿದೆ.

ವಿದ್ಯಾರ್ಥಿಯ ಕತ್ತಿನ ಮೇಲೆ ಚಾಕುವಿನಿಂದ ಕತ್ತರಿಸಿದ ಗುರುತುಗಳಿರುವುದು ಪೊಲೀಸರ ತನಿಖೆಯಿಂದ ತಿಳಿದುಬಂದಿದೆ.ಅಪರಾಧ ನಡೆದ ಸ್ಥಳದ ಸಮೀಪದಿಂದ ಪೊಲೀಸರು ಚಾಕುವನ್ನು ಸಹ ವಶಪಡಿಸಿಕೊಂಡಿದ್ದಾರೆ.ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸರು ಇನ್ನಿಬ್ಬರು ವಿದ್ಯಾರ್ಥಿಗಳನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.ವಿಚಾರಣೆ ಬಳಿಕ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯೊಬ್ಬ (student)ಮನೆಯಲ್ಲಿ ಆತ್ಮಹತ್ಯೆ(suicide) ಮಾಡಿಕೊಂಡಿದ್ದಾನೆ ಎನ್ನಲಾಗಿದೆ.
ಪೊಲೀಸರ ಭಯದಿಂದಲೇ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮನೆಯವರು ಹೇಳುತ್ತಿದ್ದಾರೆ. ಪೊಲೀಸರ ಪ್ರಕಾರ ಕೊಲೆಯಾದ ವಿದ್ಯಾರ್ಥಿ ನಾಲ್ಕು ದಿನಗಳಿಂದ ನಾಪತ್ತೆಯಾಗಿದ್ದ. ಮನೆಯವರ ಪ್ರಕಾರ, ವಿದ್ಯಾರ್ಥಿ ಬ್ರೆಡ್ ಮಾರಾಟ ಮಾಡಲು ಸೈಕಲ್‌ನಲ್ಲಿ ಹೋಗಿದ್ದರು.
ಮನೆಗೆ ಬಾರದೇ ಇದ್ದಾಗ ಕುಟುಂಬದವರು ನ.20ರಂದು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.ವಿದ್ಯಾರ್ಥಿ ನಾಪತ್ತೆಯಾಗಿರುವ ಸೈಕಲ್ ಪತ್ತೆಯಾದ ಬಳಿಕ ಪೊಲೀಸರು ಸುತ್ತಮುತ್ತಲ ಪ್ರದೇಶಗಳಲ್ಲಿ ಹುಡುಕಾಟ ಆರಂಭಿಸಿದ್ದರು. ಸೈಕಲ್ ಪತ್ತೆಯಾದ ಸ್ಥಳದಿಂದ ಸ್ವಲ್ಪ ದೂರದಲ್ಲಿ ಮೃತ ವಿದ್ಯಾರ್ಥಿಯ ಶವ ಪತ್ತೆಯಾಗಿದೆ. ವಿಧಿವಿಜ್ಞಾನ ತಂಡವು ವಿದ್ಯಾರ್ಥಿಯನ್ನು ಹತ್ಯೆ ಮಾಡಿದ ಸ್ಥಳದಿಂದ ಕೆಲವು ಪುರಾವೆಗಳನ್ನು ಸಂಗ್ರಹಿಸಿದೆ.
ಇದೀಗ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ. “ಎರಡೂ ಘಟನೆಗಳ ಬಗ್ಗೆ ನಾವು ಗಂಭೀರವಾಗಿ ತನಿಖೆ ನಡೆಸುತ್ತಿದ್ದೇವೆ, ಎಲ್ಲಾ ಆಯಾಮಗಳನ್ನು ಪರಿಶೀಲಿಸಲಾಗುತ್ತಿದೆ. ಮೃತ ವಿದ್ಯಾರ್ಥಿಯ ಸ್ನೇಹಿತ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ, ಕೊಲೆಯಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ, ಏನೆಂದು ಕೂಡ ಖಚಿತಪಡಿಸಲಾಗುತ್ತಿದೆ.
ಎಂದು ಡಿಎಸ್ಪಿ ಕವಿತಾ ಠಾಕೂರ್, ಹೇಳಿದರು. ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ ಬಳಿಕ ಪೊಲೀಸರ ಭಯದಿಂದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತ ವಿದ್ಯಾರ್ಥಿಯ ಸಂಬಂಧಿಕರು ತಿಳಿಸಿದ್ದಾರೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯ ಕುಟುಂಬಸ್ಥರು, ಪೊಲೀಸರ ವಿಚಾರಣೆಯಿಂದ ತಮ್ಮ ಮಗ ಭಯಗೊಂಡಿದ್ದಾನೆ ಎಂದು ಆರೋಪಿಸಿದ್ದಾರೆ.