
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಕೊಲೆಗಾರರಿಗೆ ಬುರ್ಖಾಧಾರಿ ಮಹಿಳೆ ಬೆಂಬಲ ಮಾಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಟ್ರಾಫಿಕ್ ಬಂದ್ ಮಾಡಿ ಕೊಲೆಗಾರರು ಇದ್ದ ಕಾರನ್ನು ಕಳುಹಿಸಿಕೊಟ್ಟಿದ್ದಾರೆ ಸ್ಥಳೀಯ ವ್ಯಕ್ತಿ. ಇನ್ನೂ ಸುಹಾಸ್ ಶೆಟ್ಟಿ ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿದ್ರೂ ಸ್ಥಳೀಯರು ನೆರವಾಗದೆ ಇರುವ ಸಂಗತಿ ಮೊಬೈಲ್ ಕ್ಯಾಮೆರಾದಲ್ಲಿ ಗೊತ್ತಾಗಿದೆ. ಕೊಲೆಯಲ್ಲಿ ಸ್ಥಳೀಯರ ಕೈವಾಡ ಇರುವುದೂ ದೃಶ್ಯದಲ್ಲಿ ಗೊತ್ತಾಗಿದೆ.

ಇಂದು ದಕ್ಷಿಣ ಕನ್ನಡ ಜಿಲ್ಲಾ ಬಂದ್ ಗೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್ ವೆಲ್ ಕರೆ ನೀಡಿದ್ದಾರೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಆಗಿದೆ. ಎಲ್ಲಾ ವ್ಯಾಪಾರ ವಹಿವಾಟು, ವಾಹನ ಸಂಚಾರ ಬಂದ್ಗೆ ಕರೆ ಕೊಡಲಾಗಿದೆ. ಸುಹಾಸ್ ಶೆಟ್ಟಿ ಹಾಗೂ ಐದು ಜನ ಹಿಂದೂ ಕಾರ್ಯಕರ್ತರು ಕಾರಿನಲ್ಲಿ ಹೋಗುತ್ತಿದ್ದಾಗ ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಸುಹಾಸ್ ಹತ್ಯೆ ಮಾಡಿದ್ದಾರೆ. ಇದೊಂದು ಪೂರ್ವ ಯೋಜಿತ ಹತ್ಯೆ, ಇದರ ಹಿಂದೆ ನಿಷೇಧಿತ ಪಿಎಫ್ಐ ಕೈವಾಡ ಇದೆ ಎಂದು ಆರೋಪಿಸಲಾಗಿದೆ. ಬಂದ್ಗೆ ವಿಹೆಚ್ಪಿ, ಭಜರಂಗದಳ ಹಾಗೂ ಹಿಂದೂ ಸಂಘಟನೆಗಳು ಸಾಥ್ ನೀಡಿವೆ.

ಮಂಗಳೂರಿನಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ, ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಪೊಲೀಸ್ ಆಯುಕ್ತರು ಆದೇಶ ಮಾಡಿದ್ದಾರೆ. BNS ಕಲಂ 163 ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ್ದು, ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆವರೆಗೆ 4 ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಿರುವ ನೀಡಿದ್ದು, ಮಂಗಳೂರು ನಗರದಲ್ಲಿ ಖಾಸಗಿ ಬಸ್ ಸಂಚಾರ ಬಂದ್ ಆಗಿದೆ. ಖಾಸಗಿ ಬಸ್ಗಳು ರಸ್ತೆಗೆ ಇಳಿದಿಲ್ಲ. ಕಾರಿಂಜದ ಪುಳಿಮಜಲು ಎಂಬಲ್ಲಿಗೆ ಸುಹಾಸ್ ಶೆಟ್ಟಿ ಮೃತ ದೇಹ ಮೆರವಣಿಗೆ ನಡೆಯಲಿರುವ ಕಾರಣಕ್ಕೆ ಹೋಟೇಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿವೆ. ಪೊಲೀಸರು ಕೂಡ ಬಿಗಿಬಂದೋಬಸ್ತ್ ಮಾಡಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಂದ್ ಘೋಷಣೆ ಆಗಿದ್ದು, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಮೃತದೇಹ ಮೆರವಣಿಗೆಗೆ ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ ಮಂಗಳೂರಿನ ಹಂಪನಕಟ್ಟೆ ಬಳಿ ಬಸ್ಗೆ ಕಲ್ಲುತೂರಾಟ ಮಾಡಲಾಗಿದೆ. ಮೂರು ಬಸ್ಸಿಗೆ ಕಲ್ಲು ತೂರಾಟದಿಂದ ಹಾನಿ ಸಂಭವಿಸಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಹಿಂದೂ ಸಂಘಟನೆಗಳ ಕರೆ ನೀಡಿದ್ದರೂ ಸಂಚಾರ ನಿಲ್ಲಿಸದ ಬಸ್ಗಳಿಗೆ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿವೆ.