• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹೈಕಮಾಂಡ್ ಅಳೆದು ತೂಗಿ ಅರ್ಹರನ್ನೇ ಸಿಎಂ ಮಾಡುತ್ತಾರೆ: ಸಚಿವ ಮುರುಗೇಶ್ ನಿರಾಣಿ

Any Mind by Any Mind
July 24, 2021
in ಕರ್ನಾಟಕ, ರಾಜಕೀಯ
0
ಹೈಕಮಾಂಡ್ ಅಳೆದು ತೂಗಿ ಅರ್ಹರನ್ನೇ ಸಿಎಂ ಮಾಡುತ್ತಾರೆ: ಸಚಿವ ಮುರುಗೇಶ್ ನಿರಾಣಿ
Share on WhatsAppShare on FacebookShare on Telegram

ನಾನು ಮುಖ್ಯಮಂತ್ರಿ ಸ್ಥಾನಕ್ಕೆ ವರಿಷ್ಠರ ಬಳಿ ಯಾವುದೇ ರೀತಿಯ ಲಾಬಿ ನಡೆಸಿಲ್ಲ.  ಹೈಕಮಾಂಡ್ ಯಾವುದೇ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ದರಾಗಿರುತ್ತೇವೆ, ಹೈಕಮಾಂಡ್ ಅಳೆದು ತೂಗಿ ಅರ್ಹರನ್ನೇ ಸಿಎಂ ಮಾಡುತ್ತಾರೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

ADVERTISEMENT

 ನಗರದ ಐವಾನ್-ಈ-ಶಾಹಿ ಅತಿಥಿಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಬಿಜೆಪಿಯ ಸಾಮಾನ್ಯ ಕಾರ್ಯಕರ್ತ, ವರಿಷ್ಠರ ಆದೇಶವನ್ನು ಪಾಲನೆ ಮಾಡುವುದು ನಮ್ಮ ಕರ್ತವ್ಯ. ಬಿಜೆಪಿ ಶಿಸ್ತಿನ ಪಕ್ಷವಾಗಿದ್ದು ಇಲ್ಲಿ ಹುದ್ದೆಗಾಗಿ ಬೇರೆ ಪಕ್ಷದಂತೆ ಲಾಬಿ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈಗಲೂ ನಮ್ಮ ನಾಯಕರು. ಮುಂದೆಯೂ ಕೂಡ  ಅವರೇ ನಮ್ಮ ಸಾರಥಿ. ನಮ್ಮ ಹೈಕಮಾಂಡ್ ಅತ್ಯಂತ  ಪ್ರಬಲವಾಗಿದ್ದು, ಯಾರಿಗೆ ಯಾವ ಸ್ಥಾನವನ್ನು, ಯಾವ ಸಂದರ್ಭದಲ್ಲಿ ನೀಡಬೇಕೆಂಬುದನ್ನು ತೀರ್ಮಾನಿಸುತ್ತಾರೆ ಎಂದಿದ್ದಾರೆ.

ನಾನು ಯಾವುದೇ ಹುದ್ದೆಗಾಗಿ ಲಾಬಿ ಮಾಡುತ್ತಿಲ್ಲ, ರಾಷ್ಟ್ರಿಯ ನಾಯಕರು ಅಳೆದು ತೂಗಿ ಅರ್ಹರನ್ನೇ ಸಿಎಂ ಮಾಡುತ್ತಾರೆ. ನನಗೆ ಪಕ್ಷ ವಹಿಸುವ ಜವಾಬ್ದಾರಿಯನ್ನು ನಿಭಾಯಿಸುತ್ತೇನೆ. ಸ್ಥಾನಮಾನಕ್ಕಾಗಿ ನಾನು ಯಾವತ್ತೂ ಲಾಬಿ ಮಾಡಿಲ್ಲಘಿ ಎಂದು ಮಾಧ್ಯಮದವರ ಪ್ರಶ್ನೆಗೆ  ಉತ್ತರಿಸಿದ್ದಾರೆ.

 ಬಿಜೆಪಿ ಪಕ್ಷದ 120 ಶಾಸಕರೆಲ್ಲರೂ ಸಿಎಂ ಹುದ್ದೆಗೆ ಅರ್ಹತೆ ಹೊಂದಿದ್ದಾರೆ. ನಿರೀಕ್ಷೆಯಿಲ್ಲದೆ ಪಕ್ಷ ನನಗೆ ಹಲವು ಜವಾಬ್ದಾರಿ ನೀಡಿದೆ. ಮೊದಲ ಬಾರಿ ಶಾಸಕನಾದಾಗಲೇ ಹೈಕಮಾಂಡ್ ನನ್ನನ್ನು ಸಚಿವನನ್ನಾಗಿ ಮಾಡಿದೆ. ಈಗಲೂ ಮಹತ್ವದ ಜವಾಬ್ದಾರಿ ಕೊಟ್ಟಿದೆ. ಹಿಂದೆಯೂ ನಾನು ಯಾವುದೇ ಹುದ್ದೆ ಅಪೇಕ್ಷೆ ಮಾಡಿದವನಲ್ಲ, ಈಗಲೂ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ವಿಚಾರವಾಗಿ ಅಧಿಕೃತವಾಗಿ ಈವರೆಗೆ ಯಾವುದೇ ಸೂಚನೆ ಬಂದಿಲ್ಲ. ಯಡಿಯೂರಪ್ಪನವರೇ ನಮ್ಮ ನಾಯಕರು. ಅವರ ಜೊತೆ ನಾವಿರುತ್ತೇವೆ ಬೆಂಬಲ ಸೂಚಿಸಿದರು. ಯಾರನ್ನು ಈ ಸ್ಥಾನಕ್ಕಾಗಿ ಕೂರಿಸಬೇಕೆಂದು ನಮ್ಮ ವರಿಷ್ಠರು ತೀರ್ಮಾನಿಸುತ್ತಾರೆ. ಅವರು ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ದರಾಗಬೇಕೆಂದು ಹೇಳಿದ್ದಾರೆ.

ನಾನು ಚಿಕ್ಕನಿಂದಲೂ ದೇವಸ್ಥಾನಗಳಿಗೆ  ತೆರಳಿ ದೇವರ ದರ್ಶನ ಪಡೆಯುವುದನ್ನು ರೂಢಿಸಿಕೊಂಡು ಬಂದಿದ್ದೇನೆ. ಈಗಲೂ ಅಷ್ಟೇ. ಸಾಮಾನ್ಯವಾಗಿ ತಿಂಗಳು – ಎರಡು ತಿಂಗಳಿಗೊಮ್ಮೆ ದೇವಸ್ಥಾನಕ್ಕೆ ಹೋಗಿಬರುತ್ತೇನೆ.  ಅದರಂತೆಯೇ ನಾನು ವಾರಣಾಸಿಗೆ ಹೋಗಿದ್ದೆ. ಅದಕ್ಕೆ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದಿದಾರೆ.

ನಾನು ವಾರಣಾಸಿಗೆ ಹೋಗಿದ್ದಕ್ಕೆ ಏನೇನೋ ಅರ್ಥ ಕಲ್ಪಿಸಲಾಗಿತ್ತು. ಪ್ರತಿ ತಿಂಗಳು ನಾನು ಒಂದೊಂದು ದೇವಸ್ಥಾನಕ್ಕೆ ಹೋಗಿಬರುತ್ತೇನೆ. ಇದಕ್ಕೂ, ರಾಜಕೀಯಕ್ಕೂ ಸಂಬಂಧವಿಲ್ಲ ಎಂದು ಹೇಳಿದರು. ಮತದಾರರು ನಮಗೆ ಮತ ಹಾಕಿ ಆರಿಸಿ ಕಳಿಸಿದ್ದಾರೆ. ಅವರ ನಿರೀಕ್ಷೆಯಂತೆ ಕೆಲಸ ಮಾಡುವುದೊಂದೇ ನನ್ನ ಮೂಲ ಉದ್ದೇಶ  ಎಂದಿದ್ದಾರೆ.

Tags: BJPmurugesh niraniನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ಹೋರಾಟದ ಸಾಗರಕೆ ಸಾವಿರಾರು ನದಿಗಳು ಎಂಬಂತೆ, ಮೋದಿ ಸರ್ಕಾರದ ವಿರುದ್ದ ಒಗ್ಗಟ್ಟಾಗಿ ಹೋರಾಡಬೇಕಿದೆ: ವೈ.ಎಸ್.ವಿ ದತ್ತ

Next Post

ಆಕ್ಸಿಜನ್‌ ಕೊರತೆಯಿಂದಾದ ಸಾವುಗಳ ಬಗ್ಗೆ ಕೇಂದ್ರ ವರದಿಯನ್ನೇ ಕೇಳಿಲ್ಲ: ಛತ್ತೀಸ್ಗಢ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಆಕ್ಸಿಜನ್‌ ಕೊರತೆಯಿಂದಾದ ಸಾವುಗಳ ಬಗ್ಗೆ ಕೇಂದ್ರ ವರದಿಯನ್ನೇ ಕೇಳಿಲ್ಲ: ಛತ್ತೀಸ್ಗಢ

ಆಕ್ಸಿಜನ್‌ ಕೊರತೆಯಿಂದಾದ ಸಾವುಗಳ ಬಗ್ಗೆ ಕೇಂದ್ರ ವರದಿಯನ್ನೇ ಕೇಳಿಲ್ಲ: ಛತ್ತೀಸ್ಗಢ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada