ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದ ಹಿನ್ನೆಲೆಯಲ್ಲಿ ಮುರುಘಾಶ್ರೀಗಳನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.
ಒಡನಾಡಿ ಸಂಸ್ಥೆಯಿಂದ ಮಠದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದ 7 ದಿನದ ನಂತರ ಮುರುಘಾ ಶ್ರೀಗಳನ್ನು ಬಂಧಿಸಲಾಗಿದೆ.
ಮುರುಘಾಶ್ರೀಗಳನ್ನು ಬಂಧಿಸಿದ ಚಿತ್ರದುರ್ಗದ ಪೊಲೀಸರು ಅಜ್ಞಾತ ಸ್ಥಳಕ್ಕೆ ವೈದ್ಯಕೀಯ ಪರೀಕ್ಷೆಗಾಗಿ ಕರೆದೊಯ್ಯುತ್ತಿದ್ದಾರೆ. ಶ್ರೀಗಳ ಬಂಧನದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.
ಆಗಸ್ಟ್ 26ರಂದು ಪ್ರಕರಣ ದಾಖಲಾಗಿದ್ದು, ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಚಿತ್ರದುರ್ಗದ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಗುರುವಾರ ರಾತ್ರಿ ಚಿತ್ರದುರ್ಗದ ಮಠದಲ್ಲೇ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದ್ದಾರೆ.