ಪೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗ ಮುರುಘಾ ಮಠದ ಮುರುಘಾಶ್ರೀಗಳು ಮತ್ತೆ ಬಂಧನವಾಗಿದ್ದಾರೆ.
ಇತ್ತೀಚೆಗೆ ಪ್ರಕರಣವೊಂದಕ್ಕೆ ಹೈಕೋರ್ಟ್ ಜಾಮೀನು ನೀಡಿತ್ತು. ಈ ಹಿನ್ನೆಲೆಯಲ್ಲಿ ಶ್ರೀಗಳು ಜೈಲಿನಿಂದ ಹೊರಬಂದಿದ್ದರು. ಆದರೆ ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು. 2ನೇ ಪೋಕ್ಸೋ ಕೇಸಲ್ಲಿ ಬಂಧನ ವಾರೆಂಟ್ ಕೋರಿ ಸರ್ಕಾರಿ ವಕೀಲ ಜಗದೀಶ್ ಚಿತ್ರದುರ್ಗದ 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಇದನ್ನು ಪರಿಕಣಿಸಿದ ಕೋರ್ಟ್ ಬಂಧನಕ್ಕೆ ಆದೇಶ ನೀಡಿತ್ತು.

ದಾವಣಗೆರೆಯ ವಿರುಕ್ತ ಮಠಕ್ಕೆ ಆಗಮಿಸಿದ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು ಚಿತ್ರದುರ್ಗಕ್ಕೆ ಕರೆದೊಯ್ಯುತ್ತಿದ್ದಾರೆ. ಕೆಲವೇ ಹೊತ್ತಿನಲ್ಲಿ ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸುತ್ತಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.