ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ ಲಿಂಗಾಯತ ಧರ್ಮಗುರು ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧಿ ಎರಡನೇ ಆರೋಪಿ ರಶ್ಮಿ ಅವರನ್ನು ಇಂದು (ಗುರುವಾರ) ವಿಚಾರಣೆ ನಡೆದಿದ್ದು, ಪ್ರಕರಣ ದಾಖಲಾದ 6 ದಿನದ ಬಳಿಕ ಶ್ರೀಗಳನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣೆಯ ಸಿಪಿಐ ಬಾಲಚಂದ್ರ ನಾಯ್ಕ, ಮೊಳಕಾಲ್ಕೂರು ಠಾಣೆ ಸಿಪಿಐ ಸತೀಶ್ ಅವರು ಮಠದಿಂದ ಶಿವಮೂರ್ತಿ ಅವರನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ರಾತ್ರಿಯೇ ನ್ಯಾಯಾಧೀಶರ ಮುಂದು ಹಾಜರುಪಡಿಸುವ ಎಲ್ಲಾ ಸಾಧ್ಯತೆಗಳಿದೆ ಎಂದು ಮೂಲಗಳು ತಿಳಿಸಿವೆ.
ಮುರುಘಾ ಶರಣರ ನಿರೀಕ್ಷಣಾ ಜಾಮೀನು ಅರ್ಜಿ ಮುಂದೂಡಿಕೆ
ಅತ್ಯಾಚಾರಿ ಆರೋಪಿ ಮುರುಘಾ ಶ್ರೀಗಳು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜಿಲ್ಲಾ ನ್ಯಾಯಾಲಯ ಈಗಾಗಲೇ ನಾಳೆ (ಸೆ.2) ಶುಕ್ರವಾರಕ್ಕೆ ಮುಂದೂಡಿದೆ. ನಾಳೆ ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಅವಕಾಶ ನೀಡಿದೆ.
ಆರೋಪ ಏನು?
ಮುರುಗಾ ಶರಣರಿಗೆ ಪ್ರತಿ ವಾರ ಒಂದು ಹೆಣ್ಣು ಮಗು ಹಣ್ಣು ಹಂಪಲು ನೀಡಲು ಅವರ ಕೋಣೆಗೆ ಕಳಿಸಲಾಗುತ್ತಿತ್ತು. ಅಲ್ಲಿ ಶರಣರು ಇಷ್ಟವಿಲ್ಲ ಎಂದು ಹೇಳಿದರೂ ಹುಡುಗಿಯರ ಖಾಸಗಿ ಭಾಗಗಳನ್ನು ಮುಟ್ಟುತ್ತಿದ್ದರು. ಅದಾದ ನಂತರ ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ ಮಾಡುತ್ತಿದ್ದರು. ಅದಾದ ನಂತರ ಸ್ವಚ್ಚಗೊಳಿಸಲು ಟಿಶ್ಯೂ ಬಳಸುತ್ತಿದ್ದರು. ವಿದ್ಯಾರ್ಥಿನಿಯರಿಗೆ ಸ್ನಾನದ ಕೋಣೆಗೆ ಹೋಗಿ ಸ್ನಾನ ಮಾಡಿ ಹೋಗುವಂತೆ ಹೇಳುತ್ತಿದ್ದರು ಎಂದು ಆರೋಪಿಸಲಾಗಿದೆ.
ಪ್ರತಿನಿತ್ಯ ಒಂದು ಹುಡುಗಿಯನ್ನು ಆಪ್ತ ಸಹಾಯಕರು ಕರೆದುಕೊಂಡು ಹೋಗಿ ಶರಣರ ಜೊತೆ ಕೋಣೆಯಲ್ಲಿ ಕೂಡಿಹಾಕುತ್ತಿದ್ದರು. ಹಲವಾರು ಬಾರಿ ಈ ರೀತಿ ನಡೆದ ನಂತರ ಅದರ ವಿಡಿಯೋಗಳನ್ನು ಕೂಡ ಮಾಡಲಾಗಿದೆ ಎಂದು ಹೇಳಲಾಗಿದೆ. ಆದರೆ ಶರಣರು ಅವರ ವಿರುದ್ಧದ ಯಾವುದೇ ವರದಿಯನ್ನು ಬಿತ್ತರಿಸದಂತೆ ಕೋರ್ಟ್ನಿಂದ ಆದೇಶ ಪಡೆದಿದ್ದಾರೆ.