ಚಿತ್ರದುರ್ಗ ಮುರುಘಾ ಶ್ರೀ ಶಿವಮೂರ್ತಿ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ರಶ್ಮಿಗೆ ಹೈಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಕುಮ್ಮಕ್ಕು ನೀಡಿದ್ದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ರಶ್ಮಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮದ್ ನವಾಜ್ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ.
ಅರ್ಜಿದಾರೆ ಎರಡು ಲಕ್ಷ ರೂಪಾಯಿ ಮೊತ್ತದ ವೈಯಕ್ತಿಕ ಬಾಂಡ್ ನೀಡಬೇಕು ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ಸಾಕ್ಷ್ಯ ನಾಶಕ್ಕೆ ಯತ್ನಿಸಬಾರದು. ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ಹಾಜರಾಗಬೇಕು ಹಾಗೂ ಸಹಕರಿಸಬೇಕು ಎಂದು ಜಾಮೀನು ಮಂಜೂರಾತಿಗೆ ಹೈಕೋರ್ಟ್ ಷರತ್ತು ವಿಧಿಸಿದೆ.

ಇದರೊಂದಿಗೆ ಈ ಪ್ರಕರಣದ ಬಂಧನಕ್ಕೆ ಒಳಗಾಗಿದ್ದ ಶಿವಮೂರ್ತಿ ಶರಣರೂ ಸೇರಿದಂತೆ ಎಲ್ಲ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.