ಮಂಗಳೂರು : ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದೆ. ಹೀಗಿರುವಾಗ ರಾಜಕೀಯ ನಾಯಕರು ಯಾವುದೇ ಹೇಳಿಕೆ ನೀಡುವ ಮುನ್ನ ನೂರು ಬಾರಿ ಯೋಚಿಸುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಪ್ತ ಹಾಗೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಿಥುನ್ ರೈ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸಂಬಂಧಿಸಿದಂತೆ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ಕರಾವಳಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮೂಡಬಿದಿರೆಯಲ್ಲಿ ನಡೆದ ನಮ್ಮೂರ ಮಸೀದಿ ನೋಡ ಬನ್ನಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಮಿಥುನ್ ರೈ, ಉಡುಪಿಯಲ್ಲಿರುವ ಶ್ರೀ ಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲಿಂ ರಾಜರು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ತಾಲೂಕಿಮ ಪುತ್ತಿಗೆಯ ನೂರಾನಿ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಿಥುನ ರೈ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

ಉಡುಪಿ ಶ್ರೀ ಕೃಷ್ಣ ಮಠಕ್ಕ ಜಾಗ ನೀಡಿದ್ದು ಕೊಟ್ಟಿದ್ದು ಮುಸಲ್ಮಾನ ರಾಜರು ಎಂದು ತುಳುವಿನಲ್ಲಿ ಮಿಥುನ್ ರೈ ಹೇಳಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದು ಉಡುಪಿಯ ಶ್ರೀ ಕೃಷ್ಣ ಮಠದ ಇತಿಹಾಸ ಇವರಿಗೇನು ಗೊತ್ತು ಅಂತಾ ಕರಾವಳಿಯ ಜನರು ಮಿಥುನ್ ರೈಗೆ ಪ್ರಶ್ನೆ ಮಾಡ್ತಿದ್ದಾರೆ.