• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರಾಮನಗರ ಬಂದ್‌ಗೆ ನನ್ನ ಸಪೂರ್ಣ ಬೆಂಬಲ: ನಿಖಿಲ್ ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
September 8, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ನಿಖಿಲ್‌ ಕುಮಾರಸ್ವಾಮಿ

ನಿಖಿಲ್‌ ಕುಮಾರಸ್ವಾಮಿ

Share on WhatsAppShare on FacebookShare on Telegram

ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ ಎಂದು ಜೆಡಿಎಸ್ ನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ADVERTISEMENT

ಈ ಕುರಿತು ಶುಕ್ರವಾರ (ಸೆಪ್ಟೆಂಬರ್ 8) ಅವರು ಸರಣಿ ಟ್ವೀಟ್ ಮಾಡಿದ್ದಾರೆ.

2006-07ರಲ್ಲೇ 310 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ಸೇರಿ ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ ಸಮುಚ್ಚಯ ಸ್ಥಾಪನೆಗೆ ಅಂದಿನ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಅವರು ಆಡಳಿತಾತ್ಮಕ ಮಂಜೂರಾತಿ ನೀಡಿದ್ದರು.ಮತ್ತೆ 25-3-2019ರಂದು ಸಿಎಂ ಆಗಿದ್ದ ಕುಮಾರಣ್ಣ ಅವರು ಆ ಯೋಜನೆಯ ವೆಚ್ಚವನ್ನು ₹540 ಕೋಟಿಗೆ ಹೆಚ್ಚಿಸಿದ್ದರು ಎಂದು ಹೇಳಿದ್ದಾರೆ.

ಮೆಡಿಕಲ್ ಕಾಲೇಜು ರಾಮನಗರ ಜಿಲ್ಲೆಯ ಜನತೆಯ ಹಕ್ಕು. ಅದಕ್ಕಾಗಿ ಹೋರಾಟ ಮಾಡುವ ಹಕ್ಕೂ ಅವರಿಗಿದೆ. ಹೀಗಾಗಿ ಪಕ್ಷಾತೀತವಾಗಿ ನಡೆಯುತ್ತಿರುವ ರಾಮನಗರ ಬಂದ್ ಗೆ ನನ್ನ ಸಂಪೂರ್ಣ ಬೆಂಬಲವಿದೆ. ನೇರವಾಗಿ ಭಾಗವಹಿಸಿ ರಾಜಕೀಯ ಬೆರೆಸುವುದು ನನಗೆ ಇಷ್ಟವಿಲ್ಲ. ಮೆಡಿಕಲ್ ಕಾಲೇಜು ಬೇಕೆನ್ನುವ ರಾಮನಗರ ಜನರ ಒತ್ತಾಯಕ್ಕೆ ನನ್ನ ಸಹಮತ ಇದೆ.1/5

— Nikhil Kumar (@Nikhil_Kumar_k) September 8, 2023

ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಅಂದು ಶ್ರೀ @DKShivakumar
ಅವರೇ ಒತ್ತಡ ಹೇರಿದ್ದರು. 13-12-2018ರಲ್ಲಿ ₹450 ಕೋಟಿ ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಅವರು ಕನಕಪುರಕ್ಕೂ ಮಂಜೂರು ಮಾಡಿದ್ದರು.3/5

— Nikhil Kumar (@Nikhil_Kumar_k) September 8, 2023

ಡಿಸಿಎಂ ಶ್ರೀ ಡಿಕೆ ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ?5/5

— Nikhil Kumar (@Nikhil_Kumar_k) September 8, 2023

ಮೈತ್ರಿ ಸರಕಾರದ ಅವಧಿಯಲ್ಲಿ ಕನಕಪುರಕ್ಕೂ ಪ್ರತ್ಯೇಕ ಮೆಡಿಕಲ್ ಕಾಲೇಜು ಬೇಕು ಎಂದು ಅಂದು ಡಿ.ಕೆ.ಶಿವಕುಮಾರ್ ಅವರೇ ಒತ್ತಡ ಹೇರಿದ್ದರು. 13-12-2018ರಲ್ಲಿ ₹450 ಕೋಟಿ ವೆಚ್ಚದ ಮೆಡಿಕಲ್ ಕಾಲೇಜನ್ನು ಕುಮಾರಣ್ಣ ಅವರು ಕನಕಪುರಕ್ಕೂ ಮಂಜೂರು ಮಾಡಿದ್ದರು ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.

ಬಳಿಕ ಬಿಜೆಪಿ ಸರಕಾರವು ರಾಮನಗರ ಮೆಡಿಕಲ್ ಕಾಲೇಜು ಹಾಗೂ ರಾಜೀವ್ ಗಾಂಧಿ ವಿವಿ ಸಮುಚ್ಚಯ ನಿರ್ಮಾಣಕ್ಕೆ ₹610 ಕೋಟಿ ವೆಚ್ಚದಲ್ಲಿ ಗುದ್ದಲಿಪೂಜೆ ನೆರವೇರಿಸಿತ್ತು. ಎರಡು ತಿಂಗಳ ಹಿಂದೆ ಬಂದ ಕಾಂಗ್ರೆಸ್ ಸರ್ಕಾರ ರಾಮನಗರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಹೈಜಾಕ್ ಮಾಡುವ ಮೂಲಕ ರಾಮನಗರ ಜನತೆಗೆ ದ್ರೋಹ ಎಸಗಿದೆ ಎಂದು ಆರೋಪಿಸಿದರು.

ಡಿಸಿಎಂ ಡಿಕೆ ಶಿವಕುಮಾರ್ ಅವರ ಒತ್ತಡದಿಂದಲೇ ರಾಮನಗರ ಮೆಡಿಕಲ್ ಕಾಲೇಜನ್ನು ಕನಕಪುರಕ್ಕೆ ಸ್ಥಳಾಂತರ ಮಾಡುವುದಾಗಿ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರೇ ಹೇಳಿದ್ದರು. ಹಾಗಾದರೆ, ಈ ಸರಕಾರ ಯಾರನ್ನು ಯಾಮಾರಿಸಲು ಹೊರಟಿದೆ. ಡಬಲ್ ಗೇಮ್ ಆಡುತ್ತಿರುವುದು ಯಾವ ಪುರುಷಾರ್ಥಕ್ಕೆ? ಸುಖಾ ಸುಮ್ಮನೆ ಗೊಂದಲ ಯಾಕೆ ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದರು.

Tags: DK ShivakumarJDSKarnataka GovernmentNikhil KumaraswamyRamnagarಕಾಂಗ್ರೆಸ್‌ಜೆಡಿಎಸ್‌ಡಿ.ಕೆ.ಶಿವಕುಮಾರ್ನಿಖಿಲ್‌ ಕುಮಾರಸ್ವಾಮಿರಾಮನಗರ
Previous Post

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆಯಾದರೆ ಮಾತ್ರ ಸಮ ಸಮಾಜ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ
Top Story

ಫುಟ್‌ಪಾತ್ ಒತ್ತುವರಿ ತೆರವು ಬಳಿಕ ಮತ್ತೆ ಅತಿಕ್ರಮಣ ಮಾಡಿದ್ರೆ ಕಠಿಣ ಕ್ರಮ: ಕೆಬಿಜೆ ಎಚ್ಚರಿಕೆ

by ಪ್ರತಿಧ್ವನಿ
August 27, 2026
0

ಬೆಂಗಳೂರು: ಫುಟ್‌ಪಾತ್‌ಗಳ ಮೇಲಿನ ಒತ್ತುವರಿ ತೆರವು ಕಾರ್ಯಾಚರಣೆ ಬಳಿಕ ಮತ್ತೆ ಅತಿಕ್ರಮಣ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೆಬಿಜೆ ಎಚ್ಚರಿಕೆ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ ಬಳಿಕ...

Read moreDetails
2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

2027-28ರಲ್ಲಿ ಟಾಲಿವುಡ್‌ನ ಇಬ್ಬರು ಸ್ಟಾರ್‌ಗಳಿಗೆ ಅಪಾಯ? ವೇಣುಸ್ವಾಮಿ ಭವಿಷ್ಯ ವೈರಲ್

August 27, 2026
ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

ದೇಶದ ನಂ.1 ಶ್ರೀಮಂತ ಸಿಎಂ ಡಿಕೆಶಿ;  ಹೇರ್‌ಕಟ್‌ಗೆ ಖರ್ಚು ಮಾಡೋದು ಕೇವಲ ಎಷ್ಟು ಗೊತ್ತೆ ?

August 27, 2026
ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

ಮಂಡ್ಯ ಜೈಲಿನಲ್ಲಿ ರಾಜಾತಿಥ್ಯಕ್ಕೆ ರೇಟ್ ಫಿಕ್ಸ್..?: ಪತ್ರ ವೈರಲ್‌..!

August 27, 2026
ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

ನಾನು ಪಕ್ಷದ ಶಿಸ್ತಿನ ಸಿಪಾಯಿ, ಮಹಿಳೆಯರಿಲ್ಲದ ಸಂಪುಟ ಅಪೂರ್ಣ: ಲಕ್ಷ್ಮೀ ಹೆಬ್ಬಾಳ್ಕರ್

August 27, 2026
Next Post
ಮುಖ್ಯಮಂತ್ರಿ ಸಿದ್ದರಾಮಯ್ಯ

ದೇಶದಲ್ಲಿನ ಉತ್ಪಾದನೆ ಸಮಾನ ಹಂಚಿಕೆಯಾದರೆ ಮಾತ್ರ ಸಮ ಸಮಾಜ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada