ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇದೇ ಸೆ.10ರಂದು ಬೆಂಗಳೂರು ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ನಲ್ಲಿ ಬೆಳಗ್ಗೆ 10.30 ಗಂಟೆ ಬೃಹತ್ ಜೆಡಿಎಸ್ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 8: ಮುಂಬರುವ ಲೋಕಸಭೆ, ಜಿಲ್ಲಾ, ತಾಲ್ಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆ ಹಾಗೂ ಪಕ್ಷ ಸಂಘಟನೆಗೆ ಸಂಬಂಧಿಸಿದಂತೆ ಇದೇ ಸೆ.10ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಜೆಡಿಎಸ್ ಸಮಾವೇಶ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿದ್ದು, ಮಾಜಿ ಪ್ರಧಾನಿಗಳು, ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಆಗಿರುವ ಹೆಚ್.ಡಿ.ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಸೇರಿದಂತೆ ಪಕ್ಷದ ಎಲ್ಲಾ ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು, ಸಾವಿರಾರು ಕಾರ್ಯಕರ್ತರು ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ. ಅರಮನೆ ಮೈದಾನದ ನಲಪಾಡ್ ಪೆವಿಲಿಯನ್ನಲ್ಲಿ ಭಾನುವಾರ ಬೆಳಗ್ಗೆ 10.30 ಗಂಟೆಯಿಂದ ಸಭೆ ಆರಂಭವಾಗಲಿದ್ದು, ಎಲ್ಲರೂ ತಪ್ಪದೇ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
ಈ ಸುದ್ದಿಯನ್ನು ಸಹ ಓದಿ: ಜಿ-20 ಶೃಂಗಸಭೆಗೆ ವಿದೇಶಿ ನಾಯಕರನ್ನು ಬರಮಾಡಿಕೊಳ್ಳುತ್ತಿರುವವರು ಯಾರು? ಯಾರಿಗೆ ಯಾವ ಜವಾಬ್ದಾರಿ?
ಈ ನಡುವೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಸಂದೇಶ ನೀಡಿರುವ ಮಾಜಿ ಮುಖ್ಯಮಂತ್ರಿಗಳು; ನಿಮ್ಮೆಲ್ಲರ ಪ್ರೀತಿ, ಹಾರೈಕೆ, ದೈವದ ಕರುಣೆ, ತಂದೆ ತಾಯಿಯವರ ಆಶೀರ್ವಾದದಿಂದ ನನ್ನ ಆರೋಗ್ಯ ಅತ್ಯುತ್ತಮವಾಗಿ ಸುಧಾರಿಸಿದೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಲ್ಲಿ ಮತ್ತೆ ಸಕ್ರಿಯವಾಗಿ ಭಾಗಿಯಾಗುತ್ತಿದ್ದೇನೆ. ನಾವೆಲ್ಲರೂ ಪಣತೊಟ್ಟು ಹೊರಡೋಣ, ಪಕ್ಷವನ್ನು ಚೈತನ್ಯಶೀಲವಾಗಿ ಮರಳಿ ಕಟ್ಟೋಣ ಎಂದು ತಿಳಿಸಿದ್ದಾರೆ.