ಎ.ವಿ .ಸ್ಟುಡಿಯೋಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ `ಮೈ ಹೀರೊ’ ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ಮಧ್ಯಪ್ರದೇಶದ ಮಹೇಶ್ವರ ಎಂಬ ಸ್ಥಳದಲ್ಲೇ ಹೆಚ್ಚಿನ ಚಿತ್ರೀಕರಣವಾಗಿದೆ. ಒಂದು ಹಾಡು ಹಾಗೂ ಮಾತಿನ ಭಾಗದ ಚಿತ್ರೀಕರಣ ಅಲ್ಲಿ ನಡೆದಿದೆ.

ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್, ಬಾಲನಟ ವೇದಿಕ್ ಕೌಶಿಕ್, ದತ್ತಣ್ಣ, ಅಂಕಿತ ಅಮರ್ ಹಾಗೂ ಅಲ್ಲಿನ ಸ್ಥಳೀಯ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಕೊನೆಯ ಹಂತದ ಚಿತ್ರೀಕರಣ ಯುಎಸ್ಎನಲ್ಲಿ ನಡೆಯಲಿದೆ.

ಇಡೀ ವಿಶ್ವದಲ್ಲಿರುವ ಸಾಮಾಜಿಕ ಸಮಸ್ಯೆಯೊಂದರ ಕುರಿತಾದ ಚಿತ್ರವಿದು. ಅವಿನಾಶ್ ವಿಜಯಕುಮಾರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಎ.ವಿ.ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ಅವಿನಾಶ್ ವಿಜಯಕುಮಾರ್ ಅವರೆ ನಿರ್ಮಿಸುತ್ತಿದ್ದಾರೆ.

ಹಾಲಿವುಡ್ ನಟ ಜಿಲಾಲಿ ರೆಜ್ ಕಲ್ಲಾಹ್ ಹಾಗೂ ಬಾಲನಟ ವೇದಿಕ್ ಕೌಶಿಕ್ ಈ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ದತ್ತಣ್ಣ, ಪ್ರಕಾಶ್ ಬೆಳವಾಡಿ, ನಿರಂಜನ್ ದೇಶ್ಪಾಂಡೆ, ಅಂಕಿತ ಅಮರ್, ತನುಜಾ ಕೃಷ್ಣಪ್ಪ, ನವೀನ್ ಬೊಂದೇಲ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಗಗನ್ ಬಡೇರಿಯಾ ಸಂಗೀತ ನಿರ್ದೇಶನ ಹಾಗೂ ವೀನಸ್ ನಾಗರಾಜ್ ಅವರ ಛಾಯಾಗ್ರಹಣ ʻಮೈ ಹೀರೊʼ ಚಿತ್ರಕ್ಕಿದ್ದು, ಎ.ವಿ.ಸ್ಟುಡಿಯೋಸ್ ಸಂಭಾಷಣೆ ಬರೆದಿದ್ದಾರೆ.







