• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬ್ರಾಹ್ಮಣ ಸಮಾಜದ ಜತೆ ನನ್ನ ಸಂಬಂಧ ಮಧುರವಾಗಿದೆ : ಎಂ.ಬಿ.ಪಾಟೀಲ

Any Mind by Any Mind
June 20, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬ್ರಾಹ್ಮಣ ಸಮಾಜದ ಜತೆ ನನ್ನ ಸಂಬಂಧ ಮಧುರವಾಗಿದೆ : ಎಂ.ಬಿ.ಪಾಟೀಲ
Share on WhatsAppShare on FacebookShare on Telegram

“ಪ್ರತಾಪ್‌ ಸಿಂಹ ಮಾತಿಗೆ ಸಚಿವರ ಎದುರೇಟು*

ADVERTISEMENT

ಬೆಂಗಳೂರು: “ನಾನು ಬಿ ಎಲ್ ಸಂತೋಷ್ ಅವರ ಬಗ್ಗೆ ಮಾತನಾಡಿದ ತಕ್ಷಣ ಅದು ಇಡೀ ಬ್ರಾಹ್ಮಣ ಸಮುದಾಯವನ್ನು ಬೈದಂತಲ್ಲ. ನನ್ನ ಮತ್ತು ಬ್ರಾಹ್ಮಣರ ನಡುವಿನ ಸಂಬಂಧ ಎಷ್ಟೊಂದು ಮಧುರವಾಗಿದೆ ಎನ್ನುವುದನ್ನು ಒಮ್ಮೆ ವಿಜಯಪುರಕ್ಕೆ ಬಂದು ನೋಡಲಿ. ಪ್ರತಾಪ್‌ ಸಿಂಹ ಅವರು ದಿನವೂ ನನ್ನ ವಿರುದ್ಧ ವೈಯಕ್ತಿಕವಾಗಿ ಮಾತನಾಡುವುದನ್ನು ನಿಲ್ಲಿಸಬೇಕು. ಅವರ ಮನಃಸ್ಥಿತಿ ತುಂಬಾ ಚಿಂತಾಜನಕವಾಗಿರುವಂತಿದೆ” ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್‌ ತಿರುಗೇಟು ನೀಡಿದ್ದಾರೆ.

ಮಂಗಳವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಹಿಂದೆ ಬಿಜೆಪಿಯ ಅನಂತ ಕುಮಾರ್ ಅವರು ಕೇಂದ್ರದಲ್ಲಿ ಮಂತ್ರಿಗಳಾಗಿದ್ದರು. ಆಗ ನಾನು ರಾಜ್ಯದಲ್ಲಿ ನೀರಾವರಿ ಸಚಿವನಾಗಿದ್ದೆ. ನಮ್ಮ ರಾಜ್ಯದ ಕೆಲಸಗಳ ಮೇಲೆ ಹೋದಾಗ ಅವರು ಪಕ್ಷದ ಮಿತಿಯನ್ನು ಮೀರಿ, ಕರ್ನಾಟಕದ ಹಿತವನ್ನು ಕಾಯುತ್ತಿದ್ದರು. ನಮ್ಮನ್ನು ಎಲ್ಲಾ ಸಚಿವರು ಮತ್ತು ಅಧಿಕಾರಿಗಳ ಬಳಿಗೆ ಕೊಂಡೊಯ್ಯುತ್ತಿದ್ದರು. ಪ್ರತಾಪ್‌ ಥರದವರು ಅಂಥವರಿಂದ ಕಲಿಯಬೇಕಾಗಿದೆ. ಆದರೆ, ಬಿಜೆಪಿಯವರಿಗೆ ಈಗ ಅನಂತಕುಮಾರ್ ಅವರ ನೆನಪೂ ಇಲ್ಲ” ಎಂದರು.

“ನಮ್ಮ ಬಿಎಲ್‌ಡಿಇ ಸಂಸ್ಥೆಯಿಂದ ದಾಸಸಾಹಿತ್ಯದ ಸಮಗ್ರ ಸಂಪುಟ ತರುತ್ತಿದ್ದೇವೆ. ಬ್ರಾಹ್ಮಣರಾದ ಕೃಷ್ಣ ಕೊಲ್ಹಾರ ಕುಲಕರ್ಣಿಯವರ ಸಂಪಾದಕತ್ವದಲ್ಲಿ ಆದಿಲ್‌ಶಾಹಿ ಸಂಪುಟಗಳನ್ನು ತಂದೆವು. ಹಾಗೆಯೇ ನಮ್ಮ ಸಂಸ್ಥೆಯಲ್ಲಿ ಸಾಕಷ್ಟು ಬ್ರಾಹ್ಮಣರಿದ್ದಾರೆ. ನನಗೆ ಚಿಕ್ಕಂದಿನಲ್ಲಿ ಪಾಠ ಕಲಿಸಿದ ದೇಶಪಾಂಡೆ, ಹಣಮಂತರಾವ್‌ ಅವರೆಲ್ಲ ಬ್ರಾಹ್ಮಣರೇ ಆಗಿದ್ದರು. 1998ರಲ್ಲಿ ನಾನು ಲೋಕಸಭೆ ಚುನಾವಣೆಗೆ ನಿಂತು ಗೆದ್ದಾಗ ವಿಜಯಪುರ ಕ್ಷೇತ್ರದ ಒಂದು ಲಕ್ಷಕ್ಕಿಂತಲೂ ಹೆಚ್ಚು ಬ್ರಾಹ್ಮಣ ಮತದಾರರ ಪೈಕಿ ಶೇಕಡ 90ರಷ್ಟು ಜನ ನನಗೆ ಮತ ಚಲಾಯಿಸಿದ್ದರು” ಎಂದು ಅವರು ಉತ್ತರಿಸಿದರು.


“ನಮ್ಮ ತಂದೆ ಮತ್ತು ನಾನು ಬ್ರಾಹ್ಮಣರ ಜತೆ ಮಧುರ ಸಂಬಂಧಕ್ಕೆ ಹೆಸರಾಗಿದ್ದೇವೆ. ಹಲಗಲಿಯ ದೇವಸ್ಥಾನ, ವಿಜಯಪುರದ ಹನುಮಂತನ ದೇವಸ್ಥಾನ ಸೇರಿದಂತೆ ಬ್ರಾಹ್ಮಣ ಸಮುದಾಯದ ಅನೇಕ ಕೆಲಸಗಳನ್ನು ನಾನು ಹೃತ್ಪೂರ್ವಕವಾಗಿ ಮಾಡಿಕೊಟ್ಟಿದ್ದೇನೆ. ಹಾಗೆಯೇ ಆ ಸಮಾಜವೂ ನನ್ನೊಂದಿಗೆ ಅಭಿಮಾನದಿಂದ ಗುರುತಿಸಿಕೊಂಡಿದೆ. ಇವೆಲ್ಲ ಗೊತ್ತಿಲ್ಲದೆ ಪ್ರತಾಪ್‌ ಸಿಂಹ ಕೀಳು ಅಭಿರುಚಿಯ ವಿಕೃತಿಯನ್ನು ತೋರಿಸುತ್ತಿದ್ದಾರೆ. ಇನ್ನುಮುಂದೆ ನಾನು ಅವರ ಮಾತುಗಳಿಗೆ ತಲೆ ಕೆಡಿಸಿಕೊಳ್ಳುವುದಿಲ್ಲ” ಎಂದು ಅವರು ಸ್ಪಷ್ಟಪಡಿಸಿದರು.
ಪ್ರತಾಪ್‌ ಅವರು ಸಿದ್ದರಾಮಯ್ಯನವರು ನನ್ನ ಹೆಗಲ ಮೇಲೆ ಬಂದೂಕನ್ನಿಟ್ಟು ಬೇರೆಯವರತ್ತ ಹೊಡೆಯುತ್ತಿದ್ದಾರೆ ಎಂದಿದ್ದಾರೆ. ನಾನು ವಿಜಯಪುರದವನು. ಯಾರಿಗಾದರೂ ಹೊಡೆಯಬೇಕೆನಿಸಿದರೆ ನೇರವಾಗಿ ಹೊಡೆಯುವ ತಾಕತ್ತು ನನಗಿದೆ. ಇದನ್ನೆಲ್ಲ ಬಿಟ್ಟು ಅವರು ಸದ್ಯದಲ್ಲೇ ಬರಲಿರುವ ಲೋಕಸಭೆ ಚುನಾವಣೆಯ ಬಗ್ಗೆ ತಲೆ ಕೆಡಿಸಿಕೊಂಡು, ರಚನಾತ್ಮಕ ಕೆಲಸ ಮಾಡಲಿ ಎಂದು ಪಾಟೀಲ್‌ ಖಡಕ್‌ ಆಗಿ ನುಡಿದರು.


ಬಿ ಎಲ್‌ ಸಂತೋಷ್ ಬಗ್ಗೆ ನನ್ನ ಟೀಕೆ ರಾಜಕೀಯ ಸ್ವರೂಪದ್ದು. ಅದರಲ್ಲಿ ಬ್ರಾಹ್ಮಣರನ್ನು ಅವಹೇಳನ ಮಾಡುವ ಉದ್ದೇಶವಿಲ್ಲ. ನಾನು ನನ್ನ ಜೀವನದಲ್ಲೇ ಯಾವತ್ತೂ ಬ್ರಾಹ್ಮಣರ ಬಗ್ಗೆಯಾಗಲಿ, ಇನ್ನೊಂದು ಸಮುದಾಯದ ಬಗ್ಗೆಯಾಗಲಿ ಅಪ್ಪಿತಪ್ಪಿಯೂ ಅವಹೇಳನಕಾರಿಯಾಗಿ ಮಾತನಾಡಿಲ್ಲ. ನಾವು ಪ್ರತಿಯೊಬ್ಬರನ್ನೂ ಗೌರವಿಸುವ ಸಂಸ್ಕಾರವುಳ್ಳವರು ಎಂದು ಅವರು ಎದುರೇಟು ನೀಡಿದ್ದಾರೆ.


ಪ್ರತಾಪ್‌ ಅವರು ನನ್ನನ್ನು ಸಿದ್ದರಾಮಯ್ಯನವರ ಚೇಲಾ ಎಂದಿದ್ದಾರೆ. ಈ ವ್ಯಕ್ತಿ ಸಂತೋಷ್‌ ಅವರು ಸಾಕಿಕೊಂಡಿರುವ ಒಂದು ಚೇಳು. ಅವರು ಇಂಥ ಹಲವು ಚೇಳುಗಳನ್ನು ಸಾಕಿಕೊಂಡಿದ್ದಾರೆ. ಹೀಗಾಗಿ ದಿನವೂ ಅವರು ಇಂಥ ಚೇಳುಗಳನ್ನು ಬಿಟ್ಟು, ಮಜಾ ತೆಗೆದುಕೊಳ್ಳುತ್ತಿರುತ್ತಾರೆ ಎಂದು ಸಚಿವರು ಕುಟುಕಿದರು. ನನ್ನದು ಚಿಲ್ಲರೆ ಖಾತೆ ಎಂದು ಬೇರೆ ಅವರು ಹೇಳಿದ್ದಾರೆ. ಕೈಗಾರಿಕಾ ಖಾತೆಯ ಮಹತ್ವದ ಬಗ್ಗೆ ಅವರು ಮೋದಿಯವರ ಬಳಿ ಕೇಳಿ ತಿಳಿದುಕೊಂಡರೆ ಒಳ್ಳೆಯದು. ಖಾತೆ ಯಾವುದಾದರೂ ನಾವು ಮಾಡುವ ಕೆಲಸ ಮುಖ್ಯ. ಇಂಥ ಪ್ರಾಥಮಿಕ ಸಂಗತಿಗಳು ಒಬ್ಬ ಸಂಸದರಿಗೆ ಗೊತ್ತಿಲ್ಲದೆ ಇರುವುದು ವಿಷಾದನೀಯ ಸಂಗತಿ ಎಂದು ಅವರು ಹೇಳಿದ್ದಾರೆ.

Tags: BJPbsbommaibsyediyurappacmsiddaramiahCongress GovernmentCongress PartyDCM DK ShivakumarlatestnewsmbpatilPratap Simha
Previous Post

ವಿಧಾನಪರಿಷತ್ತಿನ ಚುನಾವಣೆ ನಾಮಪತ್ರ ಸಲ್ಲಿಕೆ ; ಕಾಂಗ್ರೆಸ್ ನ ಮೂರೂ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ – CM ಸಿದ್ದರಾಮಯ್ಯ

Next Post

ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ, ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ; ಡಿ.ಕೆ. ಶಿವಕುಮಾರ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ರಾಜಕೀಯದ ಬಗ್ಗೆ ಮುಂದಿನ ದಿನಗಳಲ್ಲಿ ಮೌನ: ಸಮಯ ಬಂದಾಗ ತಾನಾಗಿಯೇ ಸ್ಪಷ್ಟವಾಗುತ್ತದೆ – ಡಿಸಿಎಂ ಡಿ.ಕೆ. ಶಿವಕುಮಾರ್

April 26, 2026
ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

ಟ್ರಂಪ್ ಮೇಲೆ ಹತ್ಯೆ ಯತ್ನ: ಆರೋಪಿ ಬಂಧನ : ಯಾರಾತ ?  ಕೋಲೆ ಯತ್ನಕ್ಕೆ ಏನು ಕಾರಣ ?

April 26, 2026
150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

150 ವರ್ಷ ಆಯುಷ್ಯದ ಕನಸು: ಪುಟಿನ್ ಅಮರತ್ವ ಯೋಜನೆಗೆ ರಷ್ಯಾದ ‘RAGE’ ಜೀನ್ ಚಿಕಿತ್ಸೆ ಸಂಶೋಧನೆ!

April 26, 2026
Next Post
ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ, ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ; ಡಿ.ಕೆ. ಶಿವಕುಮಾರ್

ಅನ್ನದಾನಕ್ಕಿಂತ ಶ್ರೇಷ್ಠ ದಾನ ಮತ್ತೊಂದಿಲ್ಲ, ಹಸಿವು ಮುಕ್ತ ರಾಜ್ಯ ಮಾಡಲು ನಾವು ತೀರ್ಮಾನಿಸಿದ್ದೇವೆ; ಡಿ.ಕೆ. ಶಿವಕುಮಾರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada