ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೈವೇ ಕಾಂಗ್ರೆಸ್ ಪಕ್ಷದ ಕೊಡುಗೆಯಾಗಿದೆ. ಇದರ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದು ಮಾಜಿ ಸಚಿವ ಡಾ ಹೆಚ್ ಸಿ ಮಹದೇವಪ್ಪ ತಿಳಿಸಿದರು.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ 2 ಸಾವಿರ ಕಿ ಮೀ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲು 2014 ರಲ್ಲಿ ಅನುಮೋದನೆ ನೀಡಲಾಯಿತು. ರಾಜ್ಯದಲ್ಲಿಯೂ ಆಗ ಕಾಂಗ್ರೆಸ್ ಪಕ್ಷದ ಸರ್ಕಾರವಿತ್ತು. ನಾನು ಸಹ ಲೋಕೋಪಯೋಗಿ ಸಚಿವನಾಗಿದ್ದುಕೊಂಡು ಯೋಜನೆಯ ಅನುಷ್ಠಾನಕ್ಕೆ ಶ್ರಮಿಸಿದ್ದೇನೆ ಎಂದರು.
ಆ ಬಳಿಕ ಬಂದ ಎನ್ ಡಿ ಎ ಸರ್ಕಾರ ಇದನ್ನು ಕಾರ್ಯಗತಗಳಿಸಿದೆಯಷ್ಟೇ. ಹಾಗಾಗಿ ಮೈಸೂರು-ಬೆಂಗಳೂರು ದಶಪಥ ರಾಷ್ಟ್ರೀಯ ಹೆದ್ದಾರಿಯ ಶ್ರೇಯಸ್ಸು ಕಾಂಗ್ರೆಸ್ ಪಕ್ಷಕ್ಕೇ ಸಲ್ಲಬೇಕು ಎಂದು ಡಾ. ಹೆಚ್ ಸಿ ಮಹದೇವಪ್ಪ ತಿಳಿಸಿದರು.